Big News: ಬೆಂಗಳೂರಿಗರೇ ಎಚ್ಚರ!; ಮಾಸ್ಕ್ ಧರಿಸದಿದ್ದರೆ ಸದ್ಯದಲ್ಲೇ ಬೀಳುತ್ತೆ ದಂಡ

Bengaluru News: ಮಾಸ್ಕ್​ ಧರಿಸದವರಿಗೆ ದಂಡ ವಿಧಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸುತ್ತೇವೆ ಎಂದು ಕರ್ನಾಟಕ ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.

Big News: ಬೆಂಗಳೂರಿಗರೇ ಎಚ್ಚರ!; ಮಾಸ್ಕ್ ಧರಿಸದಿದ್ದರೆ ಸದ್ಯದಲ್ಲೇ ಬೀಳುತ್ತೆ ದಂಡ
ಮಾಸ್ಕ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jul 15, 2022 | 12:35 PM

ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಕೊವಿಡ್-19 ಪ್ರಕರಣಗಳು (Covid-19) ಹೆಚ್ಚುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ (Face Mask) ಧರಿಸದವರಿಗೆ ದಂಡ ವಿಧಿಸಲು ಕರ್ನಾಟಕ ಸರ್ಕಾರ (Karnataka Government) ಮತ್ತೆ ಚಿಂತನೆ ನಡೆಸಿದೆ. ಬೆಂಗಳೂರಿನಲ್ಲಾದರೂ ಮಾಸ್ಕ್‌ ಕಡ್ಡಾಯಗೊಳಿಸಬೇಕು. ಇಲ್ಲಿಯವರೆಗೆ ಮಾಸ್ಕ್ ಧರಿಸಬೇಕೆಂಬ ನಿಯಮವಿದ್ದರೂ ಧರಿಸದವರಿಗೆ ಯಾವುದೇ ದಂಡ ವಿಧಿಸುತ್ತಿರಲಿಲ್ಲ. ಆದರೆ, ಜನರ ನಿರ್ಲಕ್ಷ್ಯದಿಂದ ಪರಿಸ್ಥಿತಿ ಕೈ ಮೀರುವ ಮೊದಲು ದಂಡ ವಿಧಿಸುವ ಬಗ್ಗೆಯೂ ನಾವು ಯೋಚಿಸಬೇಕಾಗುತ್ತದೆ. ಈ ಬಗ್ಗೆ ಚರ್ಚೆಯನ್ನು ನಡೆಸಲಾಗುತ್ತಿದೆ ಎಂದು ಕರ್ನಾಟಕದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ (Minsiter Dr K Sudhakar) ತಿಳಿಸಿದ್ದಾರೆ.

ಮಾಸ್ಕ್​ ಧರಿಸದವರಿಗೆ ದಂಡ ವಿಧಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸುತ್ತೇವೆ ಎಂದು ಕರ್ನಾಟಕ ಆರೋಗ್ಯ ಸಚಿವ ಕೆ. ಸುಧಾಕರ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಲಾಕ್‌ಡೌನ್ ಸಮಯದಲ್ಲಿ ಮತ್ತು ಕಟ್ಟುನಿಟ್ಟಾದ ಕೊವಿಡ್-19 ನಿರ್ಬಂಧಗಳ ಸಮಯದಲ್ಲಿ ಸರ್ಕಾರವು ಪರಿಣಾಮಕಾರಿಯಾಗಿ ಮಾಸ್ಕ್​ಗಳನ್ನು ಕಡ್ಡಾಯಗೊಳಿಸಿತ್ತು. ಈಗ ಸೋಂಕಿತರಿಗೆ ರೋಗಲಕ್ಷಣಗಳು ಗಂಭೀರವಾಗಿಲ್ಲ. ಹೆಚ್ಚಿನ ಸಾವುಗಳು ದಾಖಲಾಗುತ್ತಿಲ್ಲ. ಐಸಿಯುನಲ್ಲಿ ದಾಖಲಾಗುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಜನರು ಸಣ್ಣ ಜ್ವರವೆಂದು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇದರಿಂದಾಗಿ ಮುಂದೊಂದು ದಿನ ಇದ್ದಕ್ಕಿದ್ದಂತೆ ಕೊವಿಡ್ ಕೇಸುಗಳು ಹೆಚ್ಚಾದ ಮೇಲೆ ತಲೆಮೇಲೆ ಕೈಹೊತ್ತು ಕೂರುವ ಬದಲು ಈಗಲೇ ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.

ಇದನ್ನೂ ಓದಿ: New Disease: ಕೊವಿಡ್ ಹಾವಳಿಯ ಬೆನ್ನಲ್ಲೇ ಕರ್ನಾಟಕದ ಶಾಲಾ ಮಕ್ಕಳಲ್ಲಿ ಹೊಸ ರೋಗ ಪತ್ತೆ; ಆತಂಕದಲ್ಲಿ ಪೋಷಕರು

ಕೊವಿಡ್ ಲಸಿಕೆ ನೀಡುವಿಕೆಯನ್ನು ಮುಂದುವರಿಸಲು ಜನರಿಗೆ ಉಚಿತ ಬೂಸ್ಟರ್ ಡೋಸ್ ಅಥವಾ ತಡೆಗಟ್ಟುವ ಡೋಸ್ ಅನ್ನು ಉಚಿತವಾಗಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ. ಮಕ್ಕಳಿಗೆ ಕೊವಿಡ್ ಲಸಿಕೆ ನೀಡುವ ಕುರಿತು ಮಾತನಾಡಿದ ಸಚಿವ ಡಾ. ಕೆ. ಸುಧಾಕರ್, ಸರ್ಕಾರ ಈ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ ಎಂದಿದ್ದಾರೆ.

ಭಾರತದಲ್ಲಿ ಬರೋಬ್ಬರಿ 20,038 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 47 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ. ಸಕ್ರಿಯ ಪ್ರಕರಣಗಳು 2997 ಪ್ರಕರಣಗಳು ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 139073 ಇದೆ. ಕೊವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,25,604ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 16,994ಮಂದಿ ಗುಣಮುಖರಾಗಿರುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 43045350ಕ್ಕೆ ಏರಿಕೆಯಾಗಿದೆ.

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ