ಯತ್ನಾಳ್ಗೆ ಬಿಗ್ ರಿಲೀಫ್: ಸಿದ್ದಸಿರಿ ಸೌಹಾರ್ದ ಸಹಕಾರ ನಿಯಮಿತ ವಿರುದ್ಧದ ಕೇಸ್ ರದ್ದು
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ದಸಿರಿ ಸೌಹಾರ್ದ ಸಹಕಾರ ನಿಯಮಿತ ವಿರುದ್ಧ ದಾಖಲಾಗಿದ್ದ ಕೇಸ್ನ್ನು ಸುದಿರ್ಘ ವಿಚಾರಣೆ ನಡೆಸಿ ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಸಂಸ್ಥೆಯ ಅಧ್ಯಕ್ಷ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿ ರಮಣಗೌಡ ಪಾಟೀಲ್, ಶಿವಕುಮಾರ್ ಪಾಟೀಲ್ಗೂ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಏನಿದು ಪ್ರಕರಣ ಅಂತೀರಾ? ಈ ಸ್ಟೋರಿ ಓದಿ.
ಬೆಂಗಳೂರು, ಸೆ.03: ಸಿದ್ದಸಿರಿ ಸೌಹಾರ್ದ ಸಹಕಾರ ನಿಯಮಿತ ವಿರುದ್ಧ ದಾಖಲಾಗಿದ್ದ ಕೇಸ್ನ್ನು ಸುದಿರ್ಘ ವಿಚಾರಣೆ ನಡೆಸಿ ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಸಂಸ್ಥೆಯ ಅಧ್ಯಕ್ಷ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಸೇರಿದಂತೆ ರಮಣಗೌಡ ಪಾಟೀಲ್, ಶಿವಕುಮಾರ್ ಪಾಟೀಲ್ಗೂ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಈ ಹಿಂದೆ ಚಿಂಚೋಳಿ ಜೆಎಂಎಫ್‌ಸಿ ಕೋರ್ಟ್(Court)ನಲ್ಲಿ ದೂರು ದಾಖಲಿಸಲಾಗಿತ್ತು .
ಏನಿದು ಪ್ರಕರಣ?
ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ ಹಿನ್ನಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಇರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ದ ಶ್ರೀ ಸಕ್ಕರೆ ಕಾರ್ಖಾನೆಗೆ ಬೀಗ ಹಾಕಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿತ್ತು. ಈ ಆದೇಶ ಪ್ರಶ್ನಿಸಿ ಬಿಜೆಪಿ ಶಾಸಕ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅದರಂತೆ 2024 ಜನವರಿ 29 ರಂದು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶಕ್ಕೆ ತಡೆ ನೀಡಿತ್ತು.ಇದೀಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಇದನ್ನೂ ಓದಿ:ಯತ್ನಾಳ್-ರಾಜ್ಯ ಸರ್ಕಾರ ಗುದ್ದಾಟ: ಕಬ್ಬಿನ ರಸದಿಂದ ಎಥೆನಾಲ್ ಉತ್ಪಾದನೆಗೆ ಕೇಂದ್ರ ಅನುಮತಿ
ಇನ್ನು ಇತ್ತೀಚೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅನುಮತಿ ನೀಡಿತ್ತು. ಹೌದು, ಲೋಕಸಭ ಚುನಾವಣಾ ಸಂದರ್ಭದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಹೇಳಿಕೆ ನೀಡಿದ್ದರು. ಈ ಕುರಿತು ಸಚಿವ ದಿನೇಶ್ ಗುಂಡೂರಾವ್ ಪತ್ನಿ ತಬಸ್ಸುಮ್ ದಿನೇಶ್ ರಾವ್ ಅವರು, ‘ದೇಶವಿರೋಧಿ ಎಂದು ಹೇಳಿರುವ ಶಾಸಕ ಯತ್ನಾಳ್ ಅವರ ಹೇಳಿಕೆಯಿಂದ ನನ್ನ ಮನಸ್ಸಿಗೆ ನೋವಾಗಿದೆ ಎಂದು ಆರೋಪಿಸಿ ದೂರು ದಾಖಲಿಸಲು ನಿರ್ದೇಶನ ಕೋರಿದ್ದರು. ಇವರು ನೀಡಿದ ದೂರನ್ನು ಪರಿಗಣಿಸಿದ ನ್ಯಾಯಾಲಯ ಯತ್ನಾಳ್ ವಿರುದ್ದ ದೂರು ದಾಖಲಿಸಲು ಸಂಬಂಧಿಸಿದ ಪೊಲೀಸ್ ಠಾಣೆಗೆ ಸೂಚಿಸಿತ್ತು. ಈ ಸಂಬಂಧ ವಿಚಾರಣೆಯನ್ನು ಸೆ.20 ಕ್ಕೆ ಮುಂದೂಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:13 pm, Tue, 3 September 24