ಬಿಟ್ ಕಾಯಿನ್ ಕೇಸ್ ಆರೋಪಿ ಶ್ರೀಕೃಷ್ಣಗೆ ಬಿಗ್ ರಿಲೀಫ್; ಸಂಘಟಿತ ಅಪರಾಧಗಳ ಕಾಯ್ದೆ ರದ್ದುಪಡಿಸಿ ಹೈಕೋರ್ಟ್ ಆದೇಶ
ಬಿಟ್ ಕಾಯಿನ್ ಪ್ರಕರಣದ ಪ್ರಮುಖ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು, ಆತನ ಮೇಲಿನ ಸಂಘಟಿತ ಅಪರಾಧಗಳ ಕಾಯ್ದೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ಶ್ರೀಕೃಷ್ಣ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಅವರು ವಾದ ಮಂಡಿಸಿದ್ದು, ‘ಜಾಮೀನು ಸಿಗದಂತೆ ಮಾಡಲು ಕೆಸಿಒಸಿ ಕಾಯ್ದೆ ಅನ್ವಯಿಸಲಾಗಿದೆ ಎಂದಿದ್ದರು.
ಬೆಂಗಳೂರು, ಜು.03: ಬಹುಕೋಟಿ ಬಿಟ್ ಕಾಯಿನ್(Bitcoin) ಹಗರಣದ ಕೇಸ್ ಆರೋಪಿ ಶ್ರೀಕೃಷ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು, ಶ್ರೀಕಿ ಮೇಲಿನ ಸಂಘಟಿತ ಅಪರಾಧಗಳ ಕಾಯ್ದೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ಹೌದು, ಕೇಸ್ಗೂ ಮುಂಚಿನ ವರ್ಷಗಳಲ್ಲಿ ಎರಡು ಆರೋಪ ಪಟ್ಟಿಯಿದ್ದು, ಕಾಗ್ನಿಜೆನ್ಸ್ ನಿಯಮ ಪಾಲಿಸಿಲ್ಲ. ಜೊತೆಗೆ ಸಂಘಟಿತ ಅಪರಾಧ ಕಾಯ್ದೆ ಹೇಗೆ ಅನ್ವಯವೆಂದು ಪೊಲೀಸರು ಉಲ್ಲೇಖಿಸಿಲ್ಲ. ಹೀಗಾಗಿ ಸಂಘಟಿತ ಅಪರಾಧ ಕಾಯ್ದೆ(KCOC) ಅಂಶಗಳು ಇಲ್ಲಿ ಅನ್ವಯವಾಗುವುದಿಲ್ಲ ಎಂದು ಆದೇಶಿಸಿದೆ.
ಇನ್ನು ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಅವರು ವಾದ ಮಂಡಿಸಿದ್ದು, ‘ಜಾಮೀನು ಸಿಗದಂತೆ ಮಾಡಲು ಕೆಸಿಒಸಿ ಕಾಯ್ದೆ ಅನ್ವಯಿಸಲಾಗಿದೆ ಎಂದರು. ಈ ಹಿನ್ನಲೆ ಸಂಘಟಿತ ಅಪರಾಧ ಕಾಯ್ದೆ ಅನ್ವಯಿಸಿದ್ದನ್ನು ರದ್ದುಪಡಿಸಿದ ಹೈಕೋರ್ಟ್ ವ್ಯಾಪ್ತಿಯಿರುವ ನ್ಯಾಯಾಲಯ ಶೀಘ್ರ ಜಾಮೀನು ಅರ್ಜಿ ತೀರ್ಮಾನಿಸಬೇಕು ಎಂದು ನ್ಯಾಯಮೂರ್ತಿ ಎಸ್ ಆರ್ ಕೃಷ್ಣ ಕುಮಾರ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಆದೇಶಿಸಿದೆ.
ಇದನ್ನೂ ಓದಿ:ಬಿಟ್ ಕಾಯಿನ್ ಪ್ರಕರಣ: ವಿಚಾರಣೆ ನಡೆಸಿದ್ದ ಪೊಲೀಸ್ ಅಧಿಕಾರಿಗಳಿಗೆ ಧಮ್ಕಿ, ಶ್ರೀಕಿಯ ಸ್ಫೋಟ ಅಂಶ ಬೆಳಕಿಗೆ
ಇನ್ನು ಕಳೆದ ಜೂ.27 ರಂದು ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರಿಗೆ ಹೈಕೋರ್ಟ್ ಏಕಸದಸ್ಯ ಪೀಠ ನಿರೀಕ್ಷಣಾ ಜಾಮೀನು ನೀಡಿತ್ತು. ಈ ಪ್ರಕರಣದಲ್ಲಿ ಆರೋಪಿ ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರಿ ವಿರುದ್ಧ ಮೊದಲು ಆರೋಪ ಕೇಳಿಬಂದಿತ್ತು. ಹಾಗಾಗಿ ಕೇಸ್ ದಾಖಲಿಸಿಕೊಂಡಿದ್ದ ಎಸ್ಐಟಿ ಫೆಬ್ರುವರಿ 17ರಂದು ಬಂಧಿಸಲು ಮುಂದಾಗಿದ್ದರು. ಆದರೆ ಈ ವೇಳೆ ಅಧಿಕಾರಿಗಳ ಮೇಲೆ ಕಾರು ಹತ್ತಿಸಲು ಯತ್ನಿಸಿ ಪರಾರಿಯಾಗಿದ್ದರು. ಈ ಸಲುವಾಗಿ ವಿಧಾನಸೌಧ ಪೊಲೀಸರು ಐಪಿಸಿ ಸೆಕ್ಷನ್ 307 ಅಡಿ (ಕೊಲೆ ಯತ್ನ) ಮತ್ತು 353 ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಅದರಂತೆ ಇದೀಗ ಶ್ರೀಕಿ ಮೇಲಿನ ಸಂಘಟಿತ ಅಪರಾಧಗಳ ಕಾಯ್ದೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:13 pm, Wed, 3 July 24