AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಕೇಸ್: ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯಗೆ ಬಿಗ್​​ ರಿಲೀಫ್

2023ರ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿಯ ‘40% ಕಮಿಷನ್ ರೇಟ್ ಕಾರ್ಡ್’ ಜಾಹೀರಾತು ವಿರುದ್ಧ ಸಲ್ಲಿಕೆಯಾಗಿದ್ದ ಖಾಸಗಿ ಮಾನನಷ್ಟ ದೂರನ್ನು ಹೈಕೋರ್ಟ್ ರದ್ದುಗೊಳಿಸಿದ್ದು, ಸಿಎಂ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಈ ಬಗ್ಗೆ ಆದೇಶ ನೀಡಿದ್ದು, ಆದೇಶದ ವಿವರವಾದ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಕೇಸ್: ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯಗೆ ಬಿಗ್​​ ರಿಲೀಫ್
ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯಗೆ ಬಿಗ್​​ ರಿಲೀಫ್
ರಮೇಶ್​ ಎಮ್​.
| Edited By: |

Updated on: Nov 04, 2026 | 3:52 PM

Share

ಬೆಂಗಳೂರು, ನವೆಂಬರ್​​ 04: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಕೇಸ್ ಸಂಬಂಧ ಸಿಎಂ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಗ್​​ ರಿಲೀಫ್ ಸಿಕ್ಕಿದ್ದು, ಖಾಸಗಿ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಈ ಬಗ್ಗೆ ಆದೇಶ ನೀಡಿದ್ದು, ಆದೇಶದ ವಿವರವಾದ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಜುಲೈ 4ರಂದು ಇದೇ ಪ್ರಕರಣದಲ್ಲಿ ಅಂದಿನ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೂ (ಕೆಪಿಸಿಸಿ) ಇದೇ ರೀತಿ ಪರಿಹಾರ ನೀಡಲಾಗಿತ್ತು. ಇದೇ ಪ್ರಕರಣದಲ್ಲಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೂ ಈ ವರ್ಷದ ಜನವರಿಯಲ್ಲಿ ಹೈಕೋರ್ಟ್ ತಡೆ ನೀಡಿತ್ತು.

ಪ್ರಕರಣ ಏನು?

2023ರ ವಿಧಾನಸಭಾ ಚುನಾವಣೆಗೂ ಮುನ್ನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಸ್ಥಳೀಯ ಪತ್ರಿಕೆಗಳಲ್ಲಿ ಪ್ರಕಟಿಸಿದ್ದ ‘ಭ್ರಷ್ಟಾಚಾರದ ರೇಟ್ ಕಾರ್ಡ್’ ಜಾಹೀರಾತುಗಳು ಮತ್ತು ಕಾಂಗ್ರೆಸ್ ಸುಳ್ಳು ಪ್ರಚಾರ ನಡೆಸಿದೆ ಎಂದು ಆರೋಪಿಸಿ ಬಿಜೆಪಿ ರಾಜ್ಯ ಘಟಕ ದೂರು ದಾಖಲಿಸಿತ್ತು. 2023ರಲ್ಲಿ ವಿಚಾರಣಾ ನ್ಯಾಯಾಲಯ ಈ ದೂರನ್ನು ಪರಿಗಣನೆಗೆ ತೆಗೆದುಕೊಂಡಿತ್ತು. ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೇಮಕಾತಿ ಮತ್ತು ವರ್ಗಾವಣೆಗೆ ಬಿಜೆಪಿ ನಿರ್ದಿಷ್ಟ ‘ದರ’ ಮತ್ತು ‘ಕಮಿಷನ್’ ಪಡೆಯುತ್ತಿದೆ ಎಂದು ಜಾಹೀರಾತುಗಳಲ್ಲಿ ಆರೋಪಿಸಲಾಗಿತ್ತು. ಈ ಜಾಹೀರಾತುಗಳು ಬಿಜೆಪಿಯ ವರ್ಚಸ್ಸಿಗೆ ಧಕ್ಕೆ ತಂದಿವೆ ಎಂಬುದು ಬಿಜೆಪಿ ರಾಜ್ಯ ಘಟಕದ ವಾದವಾಗಿತ್ತು. ಆರೋಪಿಗಳು ತಮ್ಮ ಕಾಲ್ಪನಿಕ ಕಲ್ಪನೆಯ ಆಧಾರದಲ್ಲಿ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ಬಿಜೆಪಿ ಹೇಳಿಕೊಂಡಿತ್ತು.

ಇದನ್ನೂ ಓದಿ: ಕೆಪಿಎಸ್‌ಸಿ ನೇಮಕಾತಿ ಅಕ್ರಮ: ಸಿಐಡಿ ಹಳೆಯ ಅಧಿಕಾರಿಗಳಿಗೆ ಕೊಕ್ ನೀಡಿ ಇಬ್ಬರು ಐಪಿಎಸ್ ಅಧಿಕಾರಿಗಳ ಎಸ್‌ಐಟಿ ರಚಿಸಿದ ಹೈಕೋರ್ಟ್

ಅಲ್ಲದೆ, ಜಾಹೀರಾತುಗಳಲ್ಲಿ ಜನಪ್ರಿಯವಾಗಿದ್ದ ‘ಡಬಲ್ ಎಂಜಿನ್ ಸರ್ಕಾರ’ ಎಂಬ ಪದದ ಬದಲಿಗೆ ‘ಟ್ರಬಲ್ ಎಂಜಿನ್ ಸರ್ಕಾರ’ ಎಂಬ ಪದ ಬಳಸಿರುವುದು ಬಿಜೆಪಿಯ ಹೆಸರು ಮತ್ತು ಗೌರವಕ್ಕೆ ಧಕ್ಕೆ ತರುವ ಉದ್ದೇಶ ಹೊಂದಿತ್ತು. ಚುನಾವಣೆಯಲ್ಲಿ ಪಕ್ಷದ ಗೆಲುವಿನ ಅವಕಾಶಗಳ ಮೇಲೂ ಪರಿಣಾಮ ಬೀರಲು ಈ ರೀತಿ ಮಾಡಲಾಗಿತ್ತು ಎಂದು ಬಿಜೆಪಿ ಆರೋಪಿಸಿತ್ತು. ಈ ಸಂಬಂಧ ಬಿಜೆಪಿಯ ಕೇಶವ ಪ್ರಸಾದ್ ಎಂಬವರು ಮಾನನಷ್ಟ ಕೇಸ್ ದಾಖಲಿಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ರಮೇಶ್​ ಎಮ್​.
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಇದುವೇ ಕಾರಣ! ಸಚಿವ ಬೈರತಿ ಹೇಳಿದ್ದೇನು ನೋಡಿ
ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಇದುವೇ ಕಾರಣ! ಸಚಿವ ಬೈರತಿ ಹೇಳಿದ್ದೇನು ನೋಡಿ
ಬೆಂಗಳೂರಿನ ಜನರಿಗೆ ಬಿಗ್​​ ಶಾಕ್
ಬೆಂಗಳೂರಿನ ಜನರಿಗೆ ಬಿಗ್​​ ಶಾಕ್
ಲೆಟರ್ ಪಡೆಯಲು ಜಗದೀಶ್​ಗೆ ಮತ್ತೊಂದು ಅವಕಾಶ: ಶುರುವಾಯ್ತು ರೋಚಕ ಸವಾಲು
ಲೆಟರ್ ಪಡೆಯಲು ಜಗದೀಶ್​ಗೆ ಮತ್ತೊಂದು ಅವಕಾಶ: ಶುರುವಾಯ್ತು ರೋಚಕ ಸವಾಲು
ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?
ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?
ಅಕ್ಕಿ ಬೆಲೆ ಮತ್ತೆ ದಿಢೀರ್ ಏರಿಕೆ: 2-3 ತಿಂಗಳಲ್ಲಿ ಶೇ 25-30ರಷ್ಟು ಹೆಚ್ಚಳ
ಅಕ್ಕಿ ಬೆಲೆ ಮತ್ತೆ ದಿಢೀರ್ ಏರಿಕೆ: 2-3 ತಿಂಗಳಲ್ಲಿ ಶೇ 25-30ರಷ್ಟು ಹೆಚ್ಚಳ
ಸೌಜನ್ಯ ಪ್ರಕರಣ: ಅದೊಂದು ರಿಪೋರ್ಟ್ ನಲ್ಲಿದೆ ಸೌಜನ್ಯ ಸಾವಿನ ರಹಸ್ಯ!
ಸೌಜನ್ಯ ಪ್ರಕರಣ: ಅದೊಂದು ರಿಪೋರ್ಟ್ ನಲ್ಲಿದೆ ಸೌಜನ್ಯ ಸಾವಿನ ರಹಸ್ಯ!
ರಾಮನಗರ ವಿವಿಧೆಡೆ ಸುರಿದ ಧಾರಾಕಾರ ಮಳೆ; ರಾಗಿ ಬೆಳೆಗಾರರ ಮುಖದಲ್ಲಿ ಮಂದಹಾಸ!
ರಾಮನಗರ ವಿವಿಧೆಡೆ ಸುರಿದ ಧಾರಾಕಾರ ಮಳೆ; ರಾಗಿ ಬೆಳೆಗಾರರ ಮುಖದಲ್ಲಿ ಮಂದಹಾಸ!
ಗಗನ್ vs ಯಶಸ್: ಪತ್ರ ಪಡೆಯಲು ಟಫ್ ಟಾಸ್ಕ್ ಕೊಟ್ಟ ಬಿಗ್ ಬಾಸ್
ಗಗನ್ vs ಯಶಸ್: ಪತ್ರ ಪಡೆಯಲು ಟಫ್ ಟಾಸ್ಕ್ ಕೊಟ್ಟ ಬಿಗ್ ಬಾಸ್
ಇಂದು ಈ ರಾಶಿಯವರು ನಿರ್ಲಕ್ಷ್ಯತನವನ್ನು ತ್ಯಜಿಸಿದರೆ ಉತ್ತಮ
ಇಂದು ಈ ರಾಶಿಯವರು ನಿರ್ಲಕ್ಷ್ಯತನವನ್ನು ತ್ಯಜಿಸಿದರೆ ಉತ್ತಮ
ಬೆಂಗಳೂರು: ಹೊಯ್ಸಳ ನಗರ ಪಬ್​ನಲ್ಲಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ
ಬೆಂಗಳೂರು: ಹೊಯ್ಸಳ ನಗರ ಪಬ್​ನಲ್ಲಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ