ಕೆಪಿಎಸ್​​ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​ಗೆ ಗುಡ್​​ ನ್ಯೂಸ್​​: ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. 7 ದಿನಗಳಲ್ಲಿ ಅವರನ್ನು ಮರುನೇಮಕ ಮಾಡುವಂತೆ ಹೈಕೋರ್ಟ್​​ ಏಕಸದಸ್ಯ ಪೀಠ ಸೂಚಿಸಿದ್ದು, ಸಚಿವ ಸಂಪುಟದ ಘಟನೋತ್ತರ ಅನುಮೋದನೆ ಕಾನೂನುಬಾಹಿರವೆಂದು ಶಿವಶಂಕರಪ್ಪ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದಿಸಿದ್ದರು.

ಕೆಪಿಎಸ್​​ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​ಗೆ ಗುಡ್​​ ನ್ಯೂಸ್​​: ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು
ಕೆಪಿಎಸ್​​ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​ಗೆ ಗುಡ್​​ ನ್ಯೂಸ್
Image Credit source: Tv9 Kannada
Edited By:

Updated on: Aug 18, 2026 | 4:49 PM

ಮುಖ್ಯಾಂಶಗಳು

  • ಶಿವಶಂಕರಪ್ಪ ಸಾಹುಕಾರ್​​ಗೆ ಗುಡ್​​ ನ್ಯೂಸ್​​
  • ರಾಜ್ಯಪಾಲರ ಅಮಾನತು ಆದೇಶ ರದ್ದು
  • ಹೈಕೋರ್ಟ್ ಪೀಠದಿಂದ ಮಹತ್ವದ ಆದೇಶ

ಬೆಂಗಳೂರು, ಆಗಸ್ಟ್​​ 18: ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಕೆಪಿಎಸ್​​ಸಿ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಸ್ಥಾನದಿಂದ ಅಮಾನತು ಮಾಡಿದ್ಧ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. 7 ದಿನಗಳಲ್ಲಿ ಕೆಪಿಎಸ್‌ಸಿ ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಅವರನ್ನು ಮರುನೇಮಕ ಮಾಡುವಂತೆ ನ್ಯಾ.ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠ ಮಹತ್ವದ ಆದೇಶ ನೀಡಿದೆ.

ಕೋರ್ಟ್​​ ಹೇಳಿದ್ದೇನು?

ಕೆಪಿಎಸ್​​ಸಿ ಅಧ್ಯಕ್ಷರನ್ನು ಅಮಾನತುಗೊಳಿಸುವಂತೆ ಸಚಿವ ಸಂಪುಟ ಸಲಹೆ, ಶಿಫಾರಸು ಮಾಡಿಲ್ಲ. ರಾಜ್ಯಪಾಲರು ಸಚಿವ ಸಂಪುಟದ ತೀರ್ಮಾನವನ್ನಷ್ಟೇ ಅನುಸರಿಸಬೇಕು ಎಂದಿರುವ ಕೋರ್ಟ್​​ ಜುಲೈ 10ರಂದು ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ರದ್ದು ಮಾಡಿದೆ. ಶಿವಶಂಕರಪ್ಪ ಸಾಹುಕಾರ್ ಪುತ್ರಿಯರ ನೇಮಕ ಸಂಬಂಧ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳುವಂತಿಲ್ಲ. KPSC ಅಧ್ಯಕ್ಷರ ವಿರುದ್ಧದ ಆರೋಪದ ಬಗ್ಗೆ ಕೋರ್ಟ್ ತೀರ್ಮಾನಿಸಿಲ್ಲ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಸ್ಪಷ್ಟನೆಯನ್ನೂ ನೀಡಿದೆ. ಸಚಿವ ಸಂಪುಟದ ಘಟನೋತ್ತರ ಅನುಮೋದನೆ ಕಾನೂನುಬಾಹಿರವೆಂದು ಶಿವಶಂಕರಪ್ಪ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದಿಸಿದ್ದರು.

ಇದನ್ನೂ ಓದಿ: ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತುಗೊಳಿಸಿ ರಾಜ್ಯಪಾಲರಿಂದ ಆದೇಶ: ತನಿಖೆಗೆ ಶಿಫಾರಸು

ಶಿವಶಂಕರಪ್ಪ ಮೇಲಿರುವ ಆರೋಪಗಳೇನು?

ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಸ್ವಜನಪಕ್ಷಪಾತ ಸೇರಿದಂತೆ ವಿವಿಧ ಆರೋಪಗಳು ಕೇಳಿಬಂದಿದ್ದವು. ಈ ಆರೋಪಗಳ ಕುರಿತು ಸಲ್ಲಿಕೆಯಾಗಿದ್ದ ದೂರಿನ ಆಧಾರದ ಮೇಲೆ ರಾಜ್ಯಪಾಲರು ಅವರನ್ನು ಕೆಪಿಎಸ್​​ಸಿ ಅಧ್ಯಕ್ಷ ಸ್ಥಾನದಿಂದ ಅಮಾನತುಗೊಳಿಸಿದ್ದರು. ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ವೇಳೆ ನಕಲಿ ಆದಾಯ ಮತ್ತು ಜಾತಿ ಪ್ರಮಾಣಪತ್ರಗಳನ್ನು ಸಲ್ಲಿಸಿರುವ ಆರೋಪದ ಮೇಲೆ ಶಿವಶಂಕರಪ್ಪ ಸಾಹುಕಾರ್ ಅವರ ಪುತ್ರಿ ಸುಮಾ ಎಸ್. ಸಾಹುಕಾರ್ ವಿರುದ್ಧವೂ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

 

Published On - 4:06 pm, Tue, 18 August 26

Loading...
Unable to load recommendations.
Follow Us