ಬೆಸ್ಕಾಂ ಗ್ರಾಹಕರಿಗೆ ಬಿಗ್ ಶಾಕ್: 3 ತಿಂಗಳು ವಿದ್ಯುತ್ ಬಿಲ್ ಪಾವತಿಸಿಲ್ಲವೆಂದರೆ ನಿಮ್ಮ ಲೈಸೆನ್ಸ್ ರದ್ದು

| Updated By: ಆಯೇಷಾ ಬಾನು

Updated on: Nov 16, 2022 | 7:30 AM

ಇನ್ಮುಂದೆ 3 ತಿಂಗಳು ವಿದ್ಯುತ್ ಬಿಲ್ ಕಟ್ಟಿಲ್ಲವೆಂದರೆ ಸಿಬ್ಬಂದಿ ಕರೆಂಟ್ ಫ್ಯೂಸ್ ತೆಗೆಯಲ್ಲ ಬದಲಾಗಿ ನಿಮ್ಮ ಮನೆಯ ‌ವಿದ್ಯುತ್ ಸಂಪರ್ಕದ ಲೈಸೆನ್ಸ್ ನನ್ನೇ ರದ್ದು ಮಾಡ್ತಾರೆ.

ಬೆಸ್ಕಾಂ ಗ್ರಾಹಕರಿಗೆ ಬಿಗ್ ಶಾಕ್: 3 ತಿಂಗಳು ವಿದ್ಯುತ್ ಬಿಲ್ ಪಾವತಿಸಿಲ್ಲವೆಂದರೆ ನಿಮ್ಮ ಲೈಸೆನ್ಸ್ ರದ್ದು
ಸಾಂಧರ್ಬಿಕ ಚಿತ್ರ
Follow us on

ಬೆಂಗಳೂರು: ಬೆಸ್ಕಾಂ(BESCOM) ಗ್ರಾಹಕರೇ ಎಚ್ಚರ ಎಚ್ಚರ.. ಏಕೆಂದರೆ ರಾಜಧಾನಿ ಜನತೆಗೆ ಬಿಗ್ ಶಾಕ್ ಕೊಡಲು ಬೆಸ್ಕಾಂ ಮುಂದಾಗಿದೆ. ವಿದ್ಯುತ್ ಬಿಲ್ ಕಟ್ಟಲು ವಿಳಂಬ ಮಾಡುವವರಿಗೆ ದೊಡ್ಡ ಆಘಾತವೇ ಉಂಟಾಗಲಿದೆ. ಸಾಮಾನ್ಯವಾಗಿ ಅನೇಕರು 2 ತಿಂಗಳಿಗೊಮ್ಮೆ, ಮೂರು ತಿಂಗಳಿಗೊಮ್ಮೆ ವಿದ್ಯುತ್ ಬಿಲ್(Electricity Bill) ಕಟ್ಟುವ ಪದ್ಧತಿಯನ್ನು ರೂಢಿ ಮಾಡಿಕೊಂಡಿರುತ್ತಾರೆ. ಅಥವಾ ಕಾರಣಾಂತರಗಳಿಂದ ಕೆಲ ತಿಂಗಳು ವಿದ್ಯುತ್ ಬಿಲ್ ಪಾವತಿಸಲು ಸಾಧ್ಯವಾಗಿರಲ್ಲ. ಈ ವೇಳೆ ಬೆಸ್ಕಾಂ ಅಧಿಕಾರಿಗಳು ಕರೆಂಟ್ ಫ್ಯೂಸ್ ತೆಗೆದು ಹೋಗುತ್ತಾರೆ. ಇದು ಎಲ್ಲರಿಗೂ ತಿಳಿದಿರುವ ವಿಷಯ, ಆದ್ರೆ ವಿದ್ಯುತ್ ಬಿಲ್ ಕಟ್ಟಲು ವಿಳಂಬ ಮಾಡುವವರಿಗೆ ವಿದ್ಯುತ್ ಸಂಪರ್ಕದ ಲೈಸೆನ್ಸ್ ರದ್ದು ಮಾಡಲು ಬೆಸ್ಕಾಂ ಮುಂದಾಗಿದೆ.

ಇನ್ಮುಂದೆ 3 ತಿಂಗಳು ವಿದ್ಯುತ್ ಬಿಲ್ ಕಟ್ಟಿಲ್ಲವೆಂದರೆ ಸಿಬ್ಬಂದಿ ಕರೆಂಟ್ ಫ್ಯೂಸ್ ತೆಗೆಯಲ್ಲ ಬದಲಾಗಿ ನಿಮ್ಮ ಮನೆಯ ‌ವಿದ್ಯುತ್ ಸಂಪರ್ಕದ ಲೈಸೆನ್ಸ್ ನನ್ನೇ ರದ್ದು ಮಾಡ್ತಾರೆ. ವಿದ್ಯುತ್ ಬಾಕಿ ಬಿಲ್ ಸಂಗ್ರಹಕ್ಕೆ ಗ್ರಾಹಕರ ಮೇಲೆ ಬೆಸ್ಕಾಂ ಹೊಸ ಬ್ರಹ್ಮಾಸ್ತ್ರ ಪ್ರಯೋಗಿಸಲು ಮುಂದಾಗಿದೆ. ಇನ್ಮೇಲೆ 3 ತಿಂಗಳು ವಿದ್ಯುತ್ ಬಿಲ್ ಬಾಕಿ ಇದ್ದರೆ ವಿದ್ಯುತ್ ಸಂಪರ್ಕದ ಒಪ್ಪಂದವೇ ರದ್ದಾಗಲಿದೆ. ವಿದ್ಯುತ್ ಸಂಪರ್ಕ ಒಪ್ಪಂದ ರದ್ದುಗೊಂಡರೆ ಪುನಃ ಅರ್ಜಿ ಸಲ್ಲಿಸಿ ಹೊಸ ಕನೆಕ್ಷನ್ ತೆಗೆದುಕೊಳ್ಳಲೇಬೇಕು. ವಿದ್ಯುತ್ ಬಿಲ್ ಪಾವತಿಸುವಲ್ಲಿ ವಿಳಂಬ ಮಾಡಿದ್ರೆ, ಕರೆಂಟ್ ಇಲ್ಲದೆ ಕತ್ತಲಲ್ಲೇ ಜೀವನ ನಡೆಸುವಂತಹ ಸ್ಥಿತಿ ಉಂಟಾಗಲಿದೆ. ಬೆಸ್ಕಾಂನ ಹೊಸ ಯೋಜನೆಯಿಂದ ಹೊರ ದೇಶಗಳಿಗೆ ಪ್ರಯಾಣ ಬೆಳೆಸುವವರು, ಬಾಕಿ ಬಿಲ್ ಉಳಿಸಿಕೊಂಡವರಿಗೆ ಆತಂಕ ಶುರುವಾಗಿದೆ.

ಸರಿಯಾದ ಸಮಯಕ್ಕೆ ಬಿಲ್ ಕಟ್ಟಿ ಎಂದು ಬೆಸ್ಕಾಂ ಎಂಡಿ ಟ್ವೀಟ್

ತಿಂಗಳಿಗೆ ಸರಿಯಾಗಿ ಬಿಲ್ ಪಾವತಿಸದೆ ನಿರ್ಲಕ್ಷ್ಯ ತೋರುವರರ ವಿರುದ್ಧ ಬೆಸ್ಕಾಂ ಸಮರ ಸಾರಿದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲು ನೂತನ ಪ್ರಯೋಗ ಮಾಡುತ್ತಿದೆ. ಈ ಬಗ್ಗೆ ಬೆಸ್ಕಾಂ ಎಂ.ಡಿ ಮಹಾಂತೇಶ ಬೀಳಗಿ ಟ್ವೀಟ್ ಮೂಲಕ ಗ್ರಾಹಕರಿಗೆ ಎಚ್ಚರಿಕೆ ನೀಡಿದ್ದಾರೆ. ವಿದ್ಯುತ್ ಸಂಪರ್ಕ ಒಪ್ಪಂದ ರದ್ದುಗೊಳಿಸುವಂತಹ ತೊಂದರೆ ಬೇಡ ಅಂದರೆ ಸರಿಯಾದ ಟೈಮ್ ಗೆ ವಿದ್ಯುತ್ ಬಿಲ್ ಕಟ್ಟಿ ಎಂದು ಗ್ರಾಹಕರಿಗೆ ಟ್ವೀಟ್ ಮೂಲಕ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಮನವಿ ಮಾಡಿದ್ದಾರೆ. ಸದ್ಯ ಈಗ ಬೆಸ್ಕಾಂ ಎಂಡಿ ಟ್ವೀಟ್ ಪೋಸ್ಟ್ ತೀವ್ರ ಚರ್ಚೆಗೆ ಕಾರಣವಾಗಿದೆ. ಕೆಲ ಅಪಾರ್ಟ್‌ಮೆಂಟ್ ನಿವಾಸಿಗಳು ತಿಂಗಳುಗಳು ಕಳೆದ್ರೂ ಬಿಲ್ ಪಾವತಿ ಮಾಡ್ತಿರಲಿಲ್ಲ. ಹೀಗಾಗಿ ಇನ್ಮುಂದೆ ಈ ನಿಯಮವನ್ನ ಗ್ರಾಹಕರು ಕಡ್ಡಾಯವಾಗಿ ಪಾಲಿಸಬೇಕು ಎಂದು ಬೆಸ್ಕಾಂನ ಜನರಲ್ ಮ್ಯಾನೇಜರ್ ನಾಗರಾಜು ತಿಳಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:23 am, Wed, 16 November 22