ಬೆಂಗಳೂರಿನಲ್ಲಿ ಭಾರಿ ಮಳೆಗೆ ಬೃಹತ್ ಗೋಡೆ ಕುಸಿತ; ಮನೆ ಕುಸಿಯುವ ಭೀತಿಯಿಂದ ಕಣ್ಣೀರಿಡುತ್ತಿರುವ ಮಹಿಳೆ

ಮಳೆಯಿಂದ ಮತ್ತಷ್ಟು ಗೋಡೆ ಕುಸಿದು ಬೀಳುವ ಆತಂಕವಿದ್ದು ಬೃಹತ್ ಗೋಡೆ ಮೇಲಿರುವ ಮನೆ ಕುಸಿದು ಬೀಳುವ ಆತಂಕವೂ ಇದೆ. ಗೋಡೆ ಕುಸಿದ ಸಮೀಪವೇ ರೈಲ್ವೆ ಮೇಲ್ಸೇತುವೆ ಸಹ ಇದೆ. ಇನ್ನು ಮನೆ ಕುಸಿಯುವ ಆತಂಕದಿಂದ ಮಹಿಳೆ ವಿಜಯಮ್ಮ ಕಣ್ಣೀರು ಹಾಕುತ್ತಿದ್ದಾರೆ.

ಬೆಂಗಳೂರಿನಲ್ಲಿ ಭಾರಿ ಮಳೆಗೆ ಬೃಹತ್ ಗೋಡೆ ಕುಸಿತ; ಮನೆ ಕುಸಿಯುವ ಭೀತಿಯಿಂದ ಕಣ್ಣೀರಿಡುತ್ತಿರುವ ಮಹಿಳೆ
ಬೆಂಗಳೂರಿನಲ್ಲಿ ಭಾರಿ ಮಳೆಗೆ ಬೃಹತ್ ಗೋಡೆ ಕುಸಿತ; ಮನೆ ಕುಸಿಯುವ ಭೀತಿಯಿಂದ ಕಣ್ಣೀರಿಡುತ್ತಿರುವ ಮಹಿಳೆ
Follow us
TV9 Web
| Updated By: ಆಯೇಷಾ ಬಾನು

Updated on:Oct 11, 2021 | 4:48 PM

ಬೆಂಗಳೂರು: ಕಳೆದ ಕೆಲವು ದಿನಗಳಿಂದ ನಗರದಲ್ಲಿ ಕಟ್ಟಡಗಳು ಕುಸಿಯುತ್ತಿರುವ ಘಟನೆಗಳು ನಡೆಯುತ್ತಿವೆ. ಅದರಂತೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರಿ ಮಳೆ ಹಿನ್ನೆಲೆ ಮೆಜೆಸ್ಟಿಕ್ ಸಮೀಪ ಮುಖ್ಯ ರಸ್ತೆಯಲ್ಲಿ ಬೃಹತ್ ಗೋಡೆ ಕುಸಿದಿರುವ ಘಟನೆ ನಡೆದಿದೆ. ಶೇಷಾದ್ರಿಪುರಂನಿಂದ ಮೆಜೆಸ್ಟಿಕ್‌ಗೆ ತೆರಳುವ ಮುಖ್ಯ ರಸ್ತೆಯಲ್ಲಿ ಬೃಹತ್ ಗೋಡೆಯೊಂದು ಕುಸಿದಿದ್ದು ಆತಂಕ ಹೆಚ್ಚಾಗಿದೆ.

ಮಳೆಯಿಂದ ಮತ್ತಷ್ಟು ಗೋಡೆ ಕುಸಿದು ಬೀಳುವ ಆತಂಕವಿದ್ದು ಬೃಹತ್ ಗೋಡೆ ಮೇಲಿರುವ ಮನೆ ಕುಸಿದು ಬೀಳುವ ಆತಂಕವೂ ಇದೆ. ಗೋಡೆ ಕುಸಿದ ಸಮೀಪವೇ ರೈಲ್ವೆ ಮೇಲ್ಸೇತುವೆ ಸಹ ಇದೆ. ಇನ್ನು ಮನೆ ಕುಸಿಯುವ ಆತಂಕದಿಂದ ಮಹಿಳೆ ವಿಜಯಮ್ಮ ಕಣ್ಣೀರು ಹಾಕುತ್ತಿದ್ದಾರೆ. ಎರಡು ಬಾರಿ ಇದೇ ರೀತಿ ಘಟನೆ ನಡೆದಿದೆ. ಈ ಹಿಂದೆಯೂ ಮನೆಯ ಮೂಲೆ ಕುಸಿದಿತ್ತು. ಈಗಲೂ ಮತ್ತೊಮ್ಮೆ ಗೋಡೆ ಕುಸಿದಿದೆ. ಹೀಗಾಗಿ ಸದ್ಯ ಮನೆಯಿಂದ ಖಾಲಿ ಮಾಡಿಸಿ‌ ಅಧಿಕಾರಿಗಳು ತೆರಳಿದ್ದಾರೆ.

ಮನೆ‌ ಒಳಗೆ ಹೋಗದೆ‌ ಹೊರಗೆ ನಿಂತಿದ್ದೇವೆ. ನಮಗೆ ಯಾವುದೇ ಪರಿಹಾರದ ಭರವಸೆ ನೀಡಿಲ್ಲ. ಮನೆ ಹಿಂಭಾಗದ‌ ರೈಲ್ವೆ ಗೋಡೆ ಅರ್ಧ ಕುಸಿದಿದೆ. ಪೂರ್ಣವಾಗಿ ಬೀಳಿಸಿದರೆ ಅಪಾಯವಾಗುವುದಿಲ್ಲ. ಬಿಬಿಎಂಪಿ ಅಧಿಕಾರಿಗಳು ಏನೂ ಕ್ರಮ ತೆಗೆದುಕೊಂಡಿಲ್ಲ ಎಂದು ಮನೆಯಲ್ಲಿ ವಾಸಿಸುತ್ತಿದ್ದ ನಿವಾಸಿಗಳು ಕಣ್ಣೀರು ಹಾಕುತ್ತಿದ್ದಾರೆ. ಇನ್ನು ಮತ್ತೊಂದೆಡೆ ಮನೆ ಕುಸಿಯುವ ಆತಂಕ ಹಿನ್ನೆಲೆ ಶಿಫ್ಟ್ ಮಾಡಲು ಬಿಬಿಎಂಪಿ ಚಿಂತನೆ ನಡೆಸಿದೆ. ನಿವಾಸಿಗಳು ಕೆಲಸಕ್ಕೆ ಹೋಗಿರುವ ಹಿನ್ನೆಲೆ ಬಿಬಿಎಂಪಿ ಸಿಬ್ಬಂದಿ ಮನೆಯವರನ್ನು ಸಂಪರ್ಕಿಸುತ್ತಿದೆ. ಸ್ಥಳಕ್ಕೆ ಬಿಬಿಎಂಪಿ ಇಂಜಿನಿಯರ್ ಮಾರ್ಕಂಡೇಯ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.

ಮಿಲಿಟರಿ ಕಾಂಪೌಂಡ್ ಕುಸಿದು 10ಕ್ಕೂ ಹೆಚ್ಚು ವಾಹನ ಜಖಂ ಇನ್ನು ಮತ್ತೊಂದೆಡೆ ಬೆಂಗಳೂರಿನ ಇಂದಿರಾನಗರದಲ್ಲಿರುವ ಮಿಲಿಟರಿ ಕಾಂಪೌಂಡ್ ಕುಸಿದು 10ಕ್ಕೂ ಹೆಚ್ಚು ವಾಹನ ಜಖಂಗೊಂಡಿದೆ. ಜಖಂ ಆಗಿರುವ ವಾಹನಗಳ ಮಾಲೀಕರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. MEG ಸೆಂಟರ್ ಗೆ ಸೇರಿರುವ ಮಿಲಿಟರಿ ಕಾಂಪೌಂಡ್ ಕುಸಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಇದು ರೆಸಿಡೆನ್ಸಿಯಲ್ ಏರಿಯಾ ಆಗಿರುವುದರಿಂದ ಮಕ್ಕಳ ಓಡಾಟ ಜಾಸ್ತಿ ಇರುತ್ತೆ. ಹೀಗಾಗಿ ಸ್ಥಳೀಯರು ಮಾಧ್ಯಮಗಳ ಮೂಲಕ ನ್ಯಾಯ ಬೇಕು ಎಂದು ಆಕ್ರೋಶ ಹೊರ ಹಾಕಿದ್ದಾರೆ. ಕಳೆದ ಬಾರಿಯೂ ಮಹಿಳೆ ಮೇಲೆ ಗೋಡೆ ಬಿದ್ದಿದೆ. ಸದ್ಯ ಆ ಮಹಿಳೆ ಮನೆ ಖಾಲಿ ಮಾಡಿ ಬೇರೆ ಕಡೆಗೆ ಹೋಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇದನ್ನೂ ಓದಿ: ಕಸ್ತೂರಿನಗರದಲ್ಲಿ 5 ಅಂತಸ್ತಿನ ಕಟ್ಟಡ ಕುಸಿತ; ಸೆಕ್ಯೂರಿಟಿ ಗಾರ್ಡ್ ಸಮಯಪ್ರಜ್ಞೆಯಿಂದ 15 ಜನ ಪಾರು

Published On - 4:39 pm, Mon, 11 October 21

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ