Bigg Boss Kannada: ಹುಲಿಯುಗುರು ಪೆಂಡೆಂಟ್ ಧರಿಸಿದ್ದ ಬಿಗ್ ಬಾಸ್ ಕನ್ನಡ ಸ್ಪರ್ಧಿ ವರ್ತೂರು ಸಂತೋಷ್ ಬಂಧಿಸಿದ ಅರಣ್ಯಾಧಿಕಾರಿಗಳು

ಅರುಣ್​ ಕುಮಾರ್​ ಬೆಳ್ಳಿ

Updated on: Oct 23, 2023 | 11:44 AM

Bigg Boss Kannada,: ಜಾನುವಾರುಗಳ ಸಾಕಾಣಿಕೆ ಮಾಡುವ ಸಂತೋಷ್ ಗೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಅರಿವಿಲ್ಲದೆ ಹೋಗಿದ್ದು ನಿಜಕ್ಕೂ ದುರಂತ. ನಮ್ಮ ದೇಶದಲ್ಲಿ ವನ್ಯಜೀವಿ ಸಂರಕ್ಷಣೆ ಕಾಯ್ದೆ ಉಲ್ಲಂಘಿಸಿದವರು ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ, ಬಾಲಿವುಡ್ ನಟ ಸಲ್ಮಾನ್ ಖಾನ್ ವಿಷಯದ ಮೇಲೆ ಹೆಚ್ಚು ಬೆಳಕು ಚೆಲ್ಲಬಲ್ಲರು!

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್-10 (Bigg Boss Kannada Season 10) ಪ್ರಾಯೋಜಕರಿಗೆ ಇದು ಬಿಗ್ ಎಂಬ್ರೇಸ್ಮೆಂಟ್. ಈ ಸೀಸನ್ ಪ್ರತಿಸ್ಪರ್ಧಿಗಳಲ್ಲೊಬ್ಬರಾಗಿದ್ದ ವರ್ತೂರು ಸಂತೋಷ್ ರನ್ನು (Varthur Santosh) ಬಂಧಿಸಲಾಗಿದೆ. ಹುಲಿ ಉಗುರಿನ ಪೆಂಡೆಂಟ್ (tiger nail pendent) ಧರಿಸಿದ್ದ ಕಾರಣಕ್ಕೆ ಅವರನ್ನು ರಾಮೋಹಳ್ಳಿಯ ಅರಣ್ಯ ಸಂರಕ್ಷಣಾಧಿಕಾರಿಗಳು ಬಂಧಿಸಿದ್ದಾರೆ. ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಅವರನ್ನು ಬಂಧಿಸಲಾಗಿದೆ. ಬಿಗ್ ಬಾಸ್ ಸ್ಪರ್ಧಿಯನ್ನು ಬಿಗ್ ಬಾಸ್ ಮನೆಯಿಂದ ಹೊರಗೆ ಕರೆಸಿ ಅರಸ್ಟ್ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹಳ್ಳಿಕಾರ್ ತಳಿಯ ದನಕರುಗಳ ಸಾಕಾಣಿಕೆಯಲ್ಲಿ ತೊಡಗಿಸಿಕೊಂಡಿರುವ ಸಂತೋಷ್ ಅಖಿಲ ಭಾರತ ಹಳ್ಳಿಕಾರ್ ತಳಿ ಸಂರಕ್ಷಣೆ ಕಮಿಟಿಯ ಅಧ್ಯಕ್ಷರೂ ಆಗಿದ್ದಾರೆ. ಹಳ್ಳಿಕಾರ್ ತಳಿಯ ಹೋರಿಗಳಿಗೆ ಭಾರೀ ಜನಪ್ರಿಯತೆ ಮತ್ತು ಬೇಡಿಕೆ ಇದೆ ಮತ್ತು ಅವು ದಾಖಲೆ ಮೊತ್ತಗಳಿಗೆ ಮಾರಾಟವಾಗಿರುವ ಹಲವಾರು ವರದಿಗಳನ್ನು ನಾವು ಬಿತ್ತರಿಸಿದ್ದೇವೆ. ಜಾನುವಾರುಗಳ ಸಾಕಾಣಿಕೆ ಮಾಡುವ ಸಂತೋಷ್ ಗೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಅರಿವಿಲ್ಲದೆ ಹೋಗಿದ್ದು ನಿಜಕ್ಕೂ ದುರಂತ. ನಮ್ಮ ದೇಶದಲ್ಲಿ ವನ್ಯಜೀವಿ ಸಂರಕ್ಷಣೆ ಕಾಯ್ದೆ ಉಲ್ಲಂಘಿಸಿದವರು ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ, ಬಾಲಿವುಡ್ ನಟ ಸಲ್ಮಾನ್ ಖಾನ್ ವಿಷಯದ ಮೇಲೆ ಹೆಚ್ಚು ಬೆಳಕು ಚೆಲ್ಲಬಲ್ಲರು!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.