AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಎಸ್​ಪಿ ಕಾರಿಗೆ ಡಿಕ್ಕಿ ಹೊಡೆದು ಅವಾಚ್ಯ ಶಬ್ದಗಳಿಂದ ನಿಂದನೆ: ಬೈಕ್ ಸವಾರ ಅರೆಸ್ಟ್

ಬಿಎಂಟಿಎಫ್ ಮಹಿಳಾ ಎಸ್​ಪಿ ಕಾರಿಗೆ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದ ಘಟನೆ ಬೆಂಗಳೂರು ನಗರದ ಗೊರಗುಂಟೆಪಾಳ್ಯದಲ್ಲಿ ನಡೆದಿದೆ. ಡಿಕ್ಕಿ ಹೊಡೆದಿದ್ದಲ್ಲದೆ ಬುದ್ಧಿವಾದ ಹೇಳಲು ಮುಂದಾದ ಎಸ್​ಪಿಗೆ ಅವಾಚ್ಯ ಶಬ್ದಗಳಿಂದ ಸವಾರ ನಿಂದಿಸಿದ್ದಾನೆ. ಈ ಬಗ್ಗೆ ಎಸ್​ಪಿ ನೀಡಿದ ದೂರಿನ ಮೇರೆಗೆ ಆರ್​ಎಂಸಿ ಯಾರ್ಡ್ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಹಿಳಾ ಎಸ್​ಪಿ ಕಾರಿಗೆ ಡಿಕ್ಕಿ ಹೊಡೆದು ಅವಾಚ್ಯ ಶಬ್ದಗಳಿಂದ ನಿಂದನೆ: ಬೈಕ್ ಸವಾರ ಅರೆಸ್ಟ್
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on: Jan 06, 2024 | 8:46 PM

Share

ಬೆಂಗಳೂರು, ಜ.6: ಬಿಎಂಟಿಎಫ್ ಮಹಿಳಾ ಎಸ್​ಪಿ ಕಾರಿಗೆ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದ ಘಟನೆ ಬೆಂಗಳೂರು (Bengaluru) ನಗರದ ಗೊರಗುಂಟೆಪಾಳ್ಯದಲ್ಲಿ ನಡೆದಿದೆ. ಡಿಕ್ಕಿ (Accident) ಹೊಡೆದಿದ್ದಲ್ಲದೆ ಬುದ್ಧಿವಾದ ಹೇಳಲು ಮುಂದಾದ ಎಸ್​ಪಿಗೆ ಅವಾಚ್ಯ ಶಬ್ದಗಳಿಂದ ಸವಾರ ನಿಂದಿಸಿದ್ದಾನೆ. ಈ ಬಗ್ಗೆ ಎಸ್​ಪಿ ನೀಡಿದ ದೂರಿನ ಮೇರೆಗೆ ಆರ್​ಎಂಸಿ ಯಾರ್ಡ್ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಿಎಂಟಿಎಫ್ ಎಸ್​ಪಿಯಾಗಿರುವ ಡಾ. ಶೋಭರಾಣಿ ಅವರು ಕರ್ತವ್ಯ ಮುಗಿಸಿ ಕಾರು ಮೂಲಕ ಮನೆಗೆ ಹಿಂದಿರುಗುತ್ತಿದ್ದಾಗ ಗೊರೆಗುಂಟೆಪಾಳ್ಯ ಜಂಕ್ಷನ್ ಬಳಿ ಬೈಕ್ ಡಿಕ್ಕಿಯಾಗಿದೆ. ಯುವಕನಿಗೆ ಬುದ್ಧಿವಾದ ಹೇಳಲು ಹೋಗಿದ್ದಾಗ ಶೋಭರಾಣಿ ಅವರಿಗೆ ಬೈಕ್ ಸವಾರ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾನೆ.

ಇದನ್ನೂ ಓದಿ: Viral Video: ವೈರಲ್​​ ಆಗುತ್ತಿದೆ ಎದೆ ಝಲ್ ಎನಿಸುವ ಕಾರು ಅಪಘಾತ 

ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಸಿದ್ದ ಯುವಕನ ವಿರುದ್ಧ ಆರ್ ಎಂಸಿಯಾರ್ಡ್ ಪೊಲೀಸ್ ಠಾಣೆಗೆ ಎಸ್​ಪಿ ಶೋಭರಾಣಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಯುವಕನನ್ನ ಬಂಧಿಸಿ ಜೈಲಿಗೆ ಕಳಿಸಿದ್ದಾರೆ. ಬಂಧಿತ ಆರೋಪಿ ಸಿಎ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ