Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ವೋಲ್ವೋ ಬಸ್​ಗೆ ಬೈಕ್ ಸವಾರ ಬಲಿ

ಮಾರತ್ತಹಳ್ಳಿಯ ವರ್ತೂರು ಮುಖ್ಯ ರಸ್ತೆಯಲ್ಲಿ ಬಿಎಂಟಿಸಿ ವೋಲ್ವೋ ಬಸ್​ ಹರಿದು ಬೈಕ್ ಸವಾರ ಮೃತಪಟ್ಟಿದ್ದಾನೆ. ನಿನ್ನೆ ಬೆಳಗ್ಗೆ 9.30ರ ಸುಮಾರಿಗೆ ಕುಂದಲಹಳ್ಳಿ ಜಂಕ್ಷನ್ ಕಡೆಯಿಂದ ಬೆಳ್ಳಂದೂರಿಗೆ ಮೃತ ಬೈಕ್​ ಸವಾರ ಎಳಂಗೋವನ್ ಸೆಂಕತ್ತವಲ್ ತೆರಳುತ್ತಿದ್ದರು. ಅದೇ ಮಾರ್ಗದಲ್ಲಿ ಬರುತ್ತಿದ್ದ ಬಿಎಂಟಿಸಿ ವೊಲ್ವೋ ಬಸ್ ಡಿಕ್ಕಿ ಹೊಡೆದಿದೆ.

ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ವೋಲ್ವೋ ಬಸ್​ಗೆ ಬೈಕ್ ಸವಾರ ಬಲಿ
ಬಿಎಂಟಿಸಿ ವೋಲ್ವೋ ಬಸ್​
Follow us
Jagadisha B
| Updated By: ಆಯೇಷಾ ಬಾನು

Updated on:Jan 06, 2024 | 1:02 PM

ಬೆಂಗಳೂರು, ಜ.06: ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ (BMTC Accident) ಬಸ್​ಗೆ ಮತ್ತೊಂದು ಬಲಿಯಾಗಿದೆ. ಮಾರತ್ತಹಳ್ಳಿಯ ವರ್ತೂರು ಮುಖ್ಯ ರಸ್ತೆಯಲ್ಲಿ ಬಿಎಂಟಿಸಿ ವೋಲ್ವೋ ಬಸ್​ ಹರಿದು ಬೈಕ್ ಸವಾರ ಮೃತಪಟ್ಟಿದ್ದಾನೆ (Death). ಬೈಕ್​ ಸವಾರ ಎಳಂಗೋವನ್ ಸೆಂಕತ್ತವಲ್(43) ಮೃತ ದುರ್ದೈವಿ. ಅಪಘಾತದಿಂದ ಸವಾರನ ತಲೆ ಹಾಗೂ ಮುಖದ ಭಾಗಕ್ಕೆ ಬಲವಾದ ಗಾಯಗಳಾಗಿದ್ದು ಆತನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಪ್ರಾಣ ಹೋಗಿದೆ.

ನಿನ್ನೆ ಬೆಳಗ್ಗೆ 9.30ರ ಸುಮಾರಿಗೆ ಕುಂದಲಹಳ್ಳಿ ಜಂಕ್ಷನ್ ಕಡೆಯಿಂದ ಬೆಳ್ಳಂದೂರಿಗೆ ಮೃತ ಬೈಕ್​ ಸವಾರ ಎಳಂಗೋವನ್ ಸೆಂಕತ್ತವಲ್ ತೆರಳುತ್ತಿದ್ದರು. ಅದೇ ಮಾರ್ಗದಲ್ಲಿ ಬರುತ್ತಿದ್ದ ಬಿಎಂಟಿಸಿ ವೊಲ್ವೋ ಬಸ್ ಡಿಕ್ಕಿ ಹೊಡೆದಿದೆ. ಬಸ್​ ಡಿಕ್ಕಿ ರಭಸಕ್ಕೆ ಬೈಕ್​ ಸವಾರ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತದಿಂದ ತಲೆ ಹಾಗೂ ಮುಖದ ಭಾಗಕ್ಕೆ ಗಂಭೀರ ಗಾಯವಾಗಿತ್ತು. ತಕ್ಷಣ ಆಸ್ಪತ್ರೆಗೆ ಕರೆದೊಯ್ಯುಲಾಗಿದ್ದು ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಹೆಚ್​ಎಎಲ್​​ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಕಿಲ್ಲರ್’ ಬಿಎಂಟಿಸಿ!  

  • ಅಕ್ಟೋಬರ್ 09 : ಬಿಎಂಟಿಸಿಗೆ ಮೂರು ವರ್ಷದ ಮಗು ಬಲಿ
  • ಅಕ್ಟೋಬರ್ 14 : ಬಸ್​ ಡಿಕ್ಕಿಗೆ ಇಂಜಿನಿಯರಿಂಗ್​ ವಿದ್ಯಾರ್ಥಿ ಸಾವು
  • ಅಕ್ಟೋಬರ್ 22 : ಬೈಕ್​ಗೆ ಬಸ್​ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು
  • ಅಕ್ಟೋಬರ್ 29 : ಬಿಎಂಟಿಸಿ ಬಸ್​ ಡಿಕ್ಕಿಗೆ ಬೈಕ್​ ಸವಾರ ಬಲಿ
  • ಡಿಸೆಂಬರ್ 28 : ಬಿಎಂಟಿಸಿ ಬಸ್​ಗೆ ಡಿಕ್ಕಿಯಾಗಿ ಪಾದಚಾರಿ ಮಹಿಳೆ ಸಾವು

ಇದನ್ನೂ ಓದಿ: ಬೆಂಗಳೂರು: ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್​ ಬೆದರಿಕೆ ಕರೆ

ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಖಾಸಗಿ ಬಸ್​, ಓರ್ವ ಸಾವು

ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವಾಪುರ ಬಳಿ ನಿಯಂತ್ರಣ ತಪ್ಪಿ ಕಂದಕಕ್ಕೆ ಖಾಸಗಿ ಬಸ್ ಉರುಳಿ ಬಿದ್ದಿದ್ದು ಘಟನೆಯಲ್ಲಿ ಪ್ರಯಾಣಿಕ ಬಾಲು ಕುಮಾರ್(36) ಮೃತಪಟ್ಟಿದ್ದಾನೆ. ಬೀದರ್ ಜಿಲ್ಲೆ ಹುಮ್ನಾಬಾದ್​​ ತಾಲೂಕಿನ ಹಳ್ಳಿಖೇಡ ನಿವಾಸಿ ಮೃತ ದುರ್ದೈವಿ. ಇನ್ನು ಬಸ್​ನಲ್ಲಿದ್ದ 25 ಜನರಿಗೆ ಗಾಯಗಳಾಗಿದ್ದು, ಕಲಬುರಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನಿನ್ನೆ ರಾತ್ರಿ 11 ಗಂಟೆ ವೇಳೆ ಬೀದರ್​​ದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿ ಈ ಅವಘಡ ಸಂಭವಿಸಿದೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:08 am, Sat, 6 January 24