Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಟ್ರಾಫಿಕ್ ಕಾನ್ಸ್​ಟೇಬಲ್ ಮೇಲೆ ಹಲ್ಲೆ ಮಾಡಿದ್ದ ಬೈಕ್ ಸವಾರನ ಬಂಧನ

ಸಂಚಾರ ಉಲ್ಲಂಘನೆ ಪ್ರಕರಣಗಳನ್ನ ದಾಖಲಿಸಲು ಬೈಕ್‌ನೊಂದಿಗೆ ಫೋಟೋವನ್ನ ಕ್ಲಿಕ್ಕಿಸುತ್ತಿದ್ದಾಗ ಯಶ್ವಿನ್ ಗೌಡ ಕೆ ಎಂಬ ಬೈಕ್​ ಸವಾರ, ನನ್ನ ಫೋಟೋ ಏಕೆ ತೆಗೆದೆ ಎಂದು ಟ್ರಾಫಿಕ್ ಪೊಲೀಸ್​ ಮೇಲೆ ಹಲ್ಲೆ ಮಾಡಿದ್ದ. ಇದೀಗ ಈ ಆರೋಪಿಯನ್ನ  ಬಂಧಿಸಲಾಗಿದೆ.

ಬೆಂಗಳೂರು: ಟ್ರಾಫಿಕ್ ಕಾನ್ಸ್​ಟೇಬಲ್ ಮೇಲೆ ಹಲ್ಲೆ ಮಾಡಿದ್ದ ಬೈಕ್ ಸವಾರನ ಬಂಧನ
ಸಾಂದರ್ಭಿಕ ಚಿತ್ರ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Apr 13, 2023 | 9:40 AM

ಬೆಂಗಳೂರು: 26 ವರ್ಷದ ಯಶ್ವಿನ್ ಗೌಡ ಕೆ ಎಂಬಾತ ತನ್ನ ಬೈಕ್​ನಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ಸಂಚಾರ ಮಾಡುತ್ತಿದ್ದ. ಈ ವೇಳೆ ಫೋಟೋವನ್ನ ತೆಗೆದ ಟ್ರಾಫಿಕ್ ಪೊಲೀಸ್(Traffic Police) ಪೇದೆಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಆತನನ್ನ ಬಂಧಿಸಲಾಗಿದೆ. ಹೌದು ನೋಂದಣಿ ಸಂಖ್ಯೆ ಸಿಕೆಆರ್ 8240 ರ ಯಮಹಾ ಆರ್ ಎಕ್ಸ್ 100 (Yamaha RX 100)ಬೈಕ್​ನಲ್ಲಿ ಪ್ರಿಮ್ರೋಸ್ ರಸ್ತೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ್ದು ಪೊಲೀಸ್​ ಪೇದೆ ರಾಜೇಂದ್ರ ಕುಮಾರ್ ಎಂ ಬಿರಾದಾರ್ ಅವರು ಅದರ ಫೋಟೋಗಳನ್ನ ತೆಗೆದಿದ್ದರು. ಇದಕ್ಕೆ ಕೋಪಗೊಂಡ ಯುವಕ ಪೇದೆ ಮೇಲೆಯೇ ಹಲ್ಲೆ ಮಾಡಿದ್ದ. ಇದೀಗ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಸುಬ್ರಹ್ಮಣ್ಯಪುರದ ಉತ್ತರಹಳ್ಳಿ ಮುಖ್ಯರಸ್ತೆಯ ಗೌಡನಪಾಳ್ಯದಲ್ಲಿ ನಿವಾಸಿ ಎಂದು ತಿಳಿದು ಬಂದಿದೆ.

ಘಟನೆ ಹಿನ್ನಲೆ

ಅಶೋಕನಗರ ಸಂಚಾರಿ ಪೊಲೀಸ್ ಠಾಣೆಯ 59 ವರ್ಷದ ಪೊಲೀಸ್ ಪೇದೆ ರಾಜೇಂದ್ರ ಕುಮಾರ್ ಎಂ ಬಿರಾದಾರ್ ಅವರನ್ನು ಪ್ರಿಮ್ರೋಸ್ ರಸ್ತೆಯಲ್ಲಿ ಸ್ಟೇಷನ್ ಹೌಸ್ ಆಫೀಸರ್​ ಆಗಿ ‘ಬೈಕ್ ಸವಾರರನ್ನು ಏಕಮುಖವಾಗಿ ಓಡಿಸುವುದನ್ನು ತಡೆಯಲು ನಿಯೋಜಿಸಿದ್ದರು. ಬೆಳಗ್ಗೆ 10.40ಕ್ಕೆ ಎಂ.ಜಿ.ರಸ್ತೆಯಿಂದ ಪ್ರಿಮ್ರೋಸ್ ರಸ್ತೆಗೆ ಆರೋಪಿ ತನ್ನ ಬೈಕ್‌ನಲ್ಲಿ ತಪ್ಪು ದಾರಿಯಲ್ಲಿ ಹೋಗುತ್ತಿರುವುದನ್ನ ಬಿರಾದಾರ್ ನೋಡಿದ್ದಾರೆ. ಬಳಿಕ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಲು ಬೈಕ್‌ನೊಂದಿಗೆ ಫೋಟೋವನ್ನ ಕ್ಲಿಕ್ಕಿಸುತ್ತಿದ್ದಾಗ ಯಶ್ವಿನ್ ಗೌಡ ಕೆ ಎಂಬಾತ ದೌರ್ಜನ್ಯ ಎಸಗಿದ್ದ. ಈ ಕುರಿತು ಬಿರಾದಾರ್ ತಮ್ಮ ಪೊಲೀಸ್ ದೂರಿನಲ್ಲಿ ಉಲ್ಲೇಖಿಸಿದ್ದರು.

ಇದನ್ನೂ ಓದಿ:ಬೀದರ್: ವಿವಿಧ ಕಳ್ಳತನದಲ್ಲಿ ಭಾಗಿಯಾದ್ದವರು ಪೊಲೀಸ್​ ಬಲೆಗೆ; ಬಂಧಿತರಿಂದ 16 ಲಕ್ಷ ಮೌಲ್ಯದ ಬೈಕ್​, ದವಸ ಧಾನ್ಯ ವಶ

ಇನ್ನು ಒಬ್ಬ ಸರ್ಕಾರಿ ನೌಕರ ತನ್ನ ಕೆಲಸದಲ್ಲಿ ತೊಡಗಿದ್ದು, ಆತನು ತನ್ನ ಕರ್ತವ್ಯವನ್ನು ನಿರ್ವಹಿಸದಂತೆ ತಡೆದು, ಹಲ್ಲೆ ಮಾಡಿದ್ದಾರೆ ಎಂದು ಆರೋಪಿ ಯಶ್ವಿನ್ ಗೌಡ ಕೆ ಅವರ ಮೇಲೆ ಕೇಸ್​ ದಾಖಲಿಸಲಾಗಿದ್ದು ಮತ್ತು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:37 am, Thu, 13 April 23

ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು