ಬೆಂಗಳೂರು: ಬಿಎಂಟಿಸಿ ಬಸ್​ಗೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಬೆಂಗಳೂರಿನ ಡಿಪೋ-35 ಸೀಗೆಹಳ್ಳಿ ಬಿಎಂಟಿಸಿ ಬಸ್​ನ ಹಿಂದಿನ ಚಕ್ರ ಹೀರೋ ಹೊಂಡ ಸ್ಪೆಲಂಡರ್ ಬೈಕ್ ಮೇಲೆ ಹರಿದು ಯುವಕನ ತಲೆ ಮತ್ತು ಎದೆ ಭಾಗ ನಂಜುಗುಜ್ಜಾಗಿದ್ದು, ಸ್ಥಳದಲ್ಲೇ ಸವಾರ  ಮೃತಪಟ್ಟಿದ್ದಾರೆ.

ಬೆಂಗಳೂರು: ಬಿಎಂಟಿಸಿ ಬಸ್​ಗೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು
ವಿಶ್ವ (25)
Follow us
TV9 Web
| Updated By: Digi Tech Desk

Updated on:Dec 06, 2021 | 2:20 PM

ಬೆಂಗಳೂರು: ಬಿಎಂಟಿಸಿ ಬಸ್​ಗೆ ಬೈಕ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ನಗರದ ಓಕಳಿಪುರಂನ ಲೂಲೂ ಮಾರ್ಟ್ ಬಳಿ ನಡೆದಿದೆ. ಬಿಎಂಟಿಸಿ ಬಸ್ (BMTC Bus) ಡಿಕ್ಕಿಯಾಗಿ ಸವಾರ ವಿಶ್ವ(25) ಸಾವನ್ನಪ್ಪಿದ್ದಾರೆ. ಬೈಕ್​​ನಲ್ಲಿ ಹಿಂಬದಿ ಕುಳಿತ ಯುವಕ ಜಗನ್​ಗೂ ಕೂಡ ಸಣ್ಣಪುಟ್ಟ ಗಾಯವಾಗಿದೆ. ಸದ್ಯ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಪೋ-35 ಸೀಗೆಹಳ್ಳಿ ಬಿಎಂಟಿಸಿ ಬಸ್​ನ ಹಿಂದಿನ ಚಕ್ರ ಹೀರೋ ಹೊಂಡ ಸ್ಪೆಲಂಡರ್ ಬೈಕ್ ಮೇಲೆ ಹರಿದು ಯುವಕನ ತಲೆ ಮತ್ತು ಎದೆ ಭಾಗ ನಂಜುಗುಜ್ಜಾಗಿದ್ದು, ಸ್ಥಳದಲ್ಲೇ ಸವಾರ  ಮೃತಪಟ್ಟಿದ್ದಾರೆ. ಸದ್ಯ ಮೃತದೇಹವನ್ನು ರಾಜ್ ಕುಮಾರ್ ರಸ್ತೆಯಲ್ಲಿರುವ ಸುಗುಣ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಓಕಳೀಪುರಂ ರಸ್ತೆ ಬಂದ್ ಮಾಡಿ ಆಕ್ರೋಶ ಅಪಘಾತ ಬೆನ್ನೆಲ್ಲೆ ರಸ್ತೆ ಮಧ್ಯೆ ಮಲಗಿ ನ್ಯಾಯ ಬೇಕು ಎಂದು ಕನ್ನಡಪರ ಹೋರಾಟಗಾರರು ಓಕಳೀಪುರಂ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು, ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

ಆನೆಕಲ್: 12ನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು ಅಪಾರ್ಟ್​ಮೆಂಟ್​ನ 12ನೇ ಮಹಡಿಯಿಂದ ವಿದ್ಯಾರ್ಥಿನಿ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ವೇಣುಗೋಪಾಲ ನಗರದಲ್ಲಿ ನಡೆದಿದೆ. ವೇಣುಗೋಪಾಲ ನಗರದ ನಿತೀಶ್ ಪಾರ್ಕ್ ಅಪಾರ್ಟ್​ಮೆಂಟ್​ನ 12ನೇ ಮಹಡಿಯಿಂದ 13 ವರ್ಷದ ವೈಷ್ಣವಿ ಬಿದ್ದು ಸಾವನ್ನಪ್ಪಿದ್ದಾಳೆ. ಆತ್ಮಹತ್ಯೆಯೋ ಅಥವಾ ಆಯತಪ್ಪಿ ಬಿದ್ದಳು ಎಂಬುದರ ಬಗ್ಗೆ ಪೊಲೀಸರು ಸದ್ಯ ತನಿಖೆ ನಡೆಸುತ್ತಿದ್ದಾರೆ.

ಮೃತ ದುರ್ದೈವಿ ವೈಷ್ಣವಿ ಉತ್ತರಪ್ರದೇಶ ಮೂಲದ ವೀರೇಂದ್ರಕುಮಾರ್ ಹಾಗೂ ಸುಮನ್ ದಂಪತಿಯ ಪುತ್ರಿ. ಕಳೆದ 20 ವರ್ಷದಿಂದ ಈ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿದೆ. ವೈಷ್ಣವಿ ಖಾಸಗಿ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ರಾತ್ರಿ ಕುಟುಂಬದವರ ಜೊತೆ ಕುಳಿತು ಊಟ ಮಾಡಿದ್ದಳು. ಮನೆಯವರೆಲ್ಲರೂ ಹಾಲ್ನಲ್ಲಿ ಕುಳಿತಿದ್ದರು. ಬಾಲ್ಕನಿಯಲ್ಲಿ ಲಾಕ್ ಮಾಡಿಕೊಂಡು ಆಟವಾಡುತ್ತಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಏನೋ ಬಿದ್ದ ರೀತಿ ಶಬ್ದ ಆದಾಗ ಬಾಲ್ಕನಿ ಬಳಿ ಹೋಗಿ ನೋಡಿದಾಗ ಮಗಳು ಬಿದ್ದಿರುವುದು ಗೊತ್ತಾಗಿದೆ. ಬಾಲ್ಕನಿ ಬಳಿ ಬಂದು ನೋಡಿದಾಗ ವೈಷ್ಣವಿ ಕೆಳಗೆ ಬಿದ್ದಿದ್ದಳು. ತಲೆಗೆ ತೀವ್ರ ಪೆಟ್ಟಾದ ಕಾರಣ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸದ್ಯ ಈ ಪ್ರಕರಣ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Hassan Accident: ಕಾರು-ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸಾವು, ಕಾರು ಚಾಲಕ ಎಸ್ಕೇಪ್

ಬೆಂಗಳೂರಿನಲ್ಲಿ ಅಪಾರ್ಟ್​ಮೆಂಟ್ 12ನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿನಿ; ಸ್ಥಳದಲ್ಲೇ ಸಾವು

Published On - 1:39 pm, Mon, 6 December 21

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ