ವೈದ್ಯರ ಕಳ್ಳಾಟ ಪತ್ತೆ ಹಚ್ಚಲು ದಿನದಲ್ಲಿ 3 ಬಾರಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಮಾಡಿದ ವೈದ್ಯಕೀಯ ಶಿಕ್ಷಣ ಇಲಾಖೆ
ವೈದ್ಯರು ಕರ್ತವ್ಯದ ಅವಧಿಯಲ್ಲಿ ಪೂರ್ತಿ ಕರ್ತವ್ಯ ನಿರ್ವಹಿಸಿದ್ದಾರೆ ಎಂಬುದನ್ನು ಖಚಿತಪಡಿಸಿಕೊಳ್ಳಲು ದಿನಕ್ಕೆ ಮೂರು ಬಾರಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಮಾಡಿ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು: ಸರ್ಕಾರಿ ವೈದ್ಯರು ತಮ್ಮ ಕೆಲಸದ ಅವಧಿಯಲ್ಲಿ ಬೇರೆ ಕಡೆಗಳಿಗೆ ಹೋಗಿ ಕೆಲಸ ಮಾಡುತ್ತಿರುತ್ತಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಇರುವುದಿಲ್ಲ ಎಂದು ಅನೇಕ ಆರೋಪಗಳು ಕೇಳಿ ಬಂದಿತ್ತು. ಸದ್ಯ ಈಗ ಇದಕ್ಕೆ ಕಡಿವಾಣ ಹಾಕಲು ವೈದ್ಯಕೀಯ ಶಿಕ್ಷಣ ಇಲಾಖೆ ಮುಂದಾಗಿದೆ. ವೈದ್ಯರು ಕರ್ತವ್ಯದ ಅವಧಿಯಲ್ಲಿ ಪೂರ್ತಿ ಕರ್ತವ್ಯ ನಿರ್ವಹಿಸಿದ್ದಾರೆ ಎಂಬುದನ್ನು ಖಚಿತಪಡಿಸಿಕೊಳ್ಳಲು ದಿನಕ್ಕೆ ಮೂರು ಬಾರಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಮಾಡಿ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶಿಸಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸಂಸ್ಥೆ, ಮಹಾ ವಿದ್ಯಾಲಯ, ಕಾಲೇಜುಗಳ ವೈದ್ಯರಿಗೆ ದಿನದಲ್ಲಿ 3 ಬಾರಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಮಾಡಿ ಸುತ್ತೋಲೆ ಹೊರಡಿಸಲಾಗಿದೆ.
ಕೆಲವು ಜಿಲ್ಲೆಗಳಲ್ಲಿ ವೈದ್ಯರು ಹಾಜರಾತಿ ಹಾಕಿ ನಂತರ ಖಾಸಗಿ ಆಸ್ಪತ್ರೆಗಳಿಗೆ ತೆರಳುತ್ತಿದ್ದಾರೆ, ಪೂರ್ತಿ ಕರ್ತವ್ಯ ನಿರ್ವಹಿಸದೇ ಇರುವ ಬಗ್ಗೆ ಇಲಾಖೆಗೆ ಅನೇಕ ದೂರುಗಳು ಬಂದಿದ್ದವು. ಹೀಗಾಗಿ ವೈದ್ಯರು ಕರ್ತವ್ಯದ ಅವಧಿಯಲ್ಲಿ ಪೂರ್ತಿ ಕರ್ತವ್ಯ ನಿರ್ವಹಿಸಿದ್ದಾರೆ ಎಂಬುದನ್ನು ಖಚಿತಪಡಿಸಿಕೊಳ್ಳಲು ದಿನಕ್ಕೆ ಮೂರು ಬಾರಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಮಾಡಿ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಿಗೆ ಆಡಳಿತ ಪಕ್ಷದ ಶಾಸಕರು ನೇರಾ ನೇರ ದೂರು ಸಲ್ಲಿಸಿದ್ದರು. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಕೆಲವು ಶಾಸಕರಿಂದ ವೈದ್ಯರ ಕಾರ್ಯ ನಿರ್ವಹಣೆ ಬಗ್ಗೆ ಆಕ್ಷೇಪ ವ್ಯಕ್ತವಾಗಿತ್ತು. ಹೀಗಾಗಿ ದಿನಕ್ಕೆ ಮೂರು ಬಾರಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಲಾಗಿದೆ.
ಸರ್ಕಾರಿ ಡಾಕ್ಟರುಗಳು ಬೆಳಗ್ಗೆ ಆಸ್ಪತ್ರೆಗೆ ಬಂದು ಸಹಿ ಮಾಡಿ, 1ಗಂಟೆ ಇದ್ದು, ಆಮೇಲೆ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡ್ತಿದಾರೆ: ಲಕ್ಷ್ಮಣ ಸವದಿ ವಿಷಾದ ಸರ್ಕಾರಿ ಡಾಕ್ಟರ್ಗಳು ಬೆಳಗ್ಗೆ ಆಸ್ಪತ್ರೆ ಬಂದು ಸಹಿ ಮಾಡುತ್ತಾರೆ. ಕೇವಲ ಒಂದು ಗಂಟೆ ಇದ್ದು ಅವರ ಖಾಸಗಿ ಆಸ್ಪತ್ರೆ ಹೋಗಿ ಕೆಲಸ ಮಾಡುತ್ತಾರೆ ಎಂಬ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಪ್ರಶ್ನೆ ಮಾಡಿದ್ದರು. ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಪರಿಷತ್ ಸದಸ್ಯ ಲಕ್ಷ್ಮಣ ಸವದಿ, ಸರ್ಕಾರಿ ವೈದ್ಯರ ಕೆಲಸದ ಬಗ್ಗೆ ವಿಷಾದ ವ್ಯಕ್ತಪಡಿಸಿದ್ರು. ಸರ್ಕಾರಿ ಡಾಕ್ಟರ್ಗಳು ಬೆಳಗ್ಗೆ ಆಸ್ಪತ್ರೆ ಬಂದು ಸಹಿ ಮಾಡುತ್ತಾರೆ. ಕೇವಲ ಒಂದು ಗಂಟೆ ಇದ್ದು ಅವರ ಖಾಸಗಿ ಆಸ್ಪತ್ರೆ ಹೋಗಿ ಕೆಲಸ ಮಾಡುತ್ತಾರೆ. ಸಾಕಷ್ಟು ಸರ್ಕಾರಿ ವೈದ್ಯರು ತಮ್ಮ ತಮ್ಮ ಖಾಸಗಿ ಆಸ್ಪತ್ರೆಗೆ ಬರುವಂತೆ ರೋಗಿಗಳಿಗೆ ಕೇಳುತ್ತಾರೆ. ಇದರ ಬಗ್ಗೆ ಸರ್ಕಾರ ಕ್ರಮ ಏನೂ ಎಂದು ಪ್ರಶ್ನಿಸಿದ್ರು.ಆಗ ಉತ್ತರಿಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮುಂದಿನ ದಿನಗಳಲ್ಲಿ ಅಂತಹ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದರು.
ಇದನ್ನೂ ಓದಿ: ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಬೆಡ್ ಸಿಗದೇ ರೋಗಿಗಳ ನರಳಾಟ; ಪೊಲೀಸರೇ ಬಂದರೂ ನಿಮ್ಹಾನ್ಸ್ ವೈದ್ಯರು ಜಸ್ಟ್ ಡೋಂಟ್ ಕೇರ್!
Published On - 3:09 pm, Wed, 2 February 22