Biparjoy Cyclone: ಬೆಳೆಹಾನಿ ನಷ್ಟ ಪರಿಹಾರ ಹೆಚ್ಚಿಸಲು ಕೇಂದ್ರಕ್ಕೆ ಕೃಷ್ಣಭೈರೇಗೌಡ ಮನವಿ

ಕರಾವಳಿಯಲ್ಲಿ ಬಿಪೊರ್ ​ಜಾಯ್​ ಚಂಡಮಾರುತದ ಅಬ್ಬರ ಹಿನ್ನೆಲೆ ಕೇಂದ್ರ ಸರ್ಕಾರ ಕೆಲವು ಮಾನದಂಡಗಳನ್ನು ಪಾಲಿಸಲು ಸೂಚಿಸಿದೆ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.

Biparjoy Cyclone: ಬೆಳೆಹಾನಿ ನಷ್ಟ ಪರಿಹಾರ ಹೆಚ್ಚಿಸಲು ಕೇಂದ್ರಕ್ಕೆ ಕೃಷ್ಣಭೈರೇಗೌಡ ಮನವಿ
ಕೃಷ್ಣಭೈರೇಗೌಡ ಮತ್ತು ಅಮಿತ್ ಶಾ
Follow us
|

Updated on:Jun 13, 2023 | 4:48 PM

ನವದೆಹಲಿ: ಬರ ಮತ್ತು ಮಳೆಹಾನಿ ಪರಿಹಾರ ಮೊತ್ತ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ (Krishna Byre Gowda) ಹೇಳಿದ್ದಾರೆ. ಬಿಪೊರ್ ಜಾಯ್ (Biporjoy Cyclone) ಚಂಡಮಾರುತದ ಬಗ್ಗೆ ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರು ನಡೆಸಿದ ಸಭೆಯ ನಂತರ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಳೆಹಾನಿ, ಮಳೆ ಆಶ್ರಿತ ಭೂಮಿಯಲ್ಲಿ ಬೆಳೆಹಾನಿ, ನೀರಾವರಿ ಭೂಮಿ ತೋಟಗಾರಿಕೆ ಬೆಳೆಹಾನಿಗೆ ನೀಡುತ್ತಿರುವ ಪರಿಹಾರವನ್ನು ಹೆಚ್ಚಿವುಂತೆ ಮನವಿ ಮಾಡಿದ್ದಾಗಿ ತಿಳಿಸಿದರು.

ಸಭೆಯಲ್ಲಿ ಕರ್ನಾಟಕದ ಪರವಾಗಿ ಮೂರು ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿದ್ದೆ. ಮಳೆ ಹಾನಿ, ಬೆಳೆ ಪರಿಹಾರ ಮೊತ್ತವೂ ಕಡಿಮೆ ಇದೆ. ರಾಜ್ಯ ಸರ್ಕಾರ ಕೈಯಿಂದ ಹಣ ಹಾಕುತ್ತಿದೆ, ಇದು ಹೊರೆಯಾಗುತ್ತಿದೆ. ಹೀಗಾಗಿ ಬರ ಮತ್ತು ಮಳೆಹಾನಿ ಪರಿಹಾರ ಮೊತ್ತ ಹೆಚ್ಚಳ ಮಾಡುವಂತೆ ಮನವಿ ಮಾಡಿದ್ದೇನೆ. ಕರ್ನಾಟಕದ ಎಸ್‌ಡಿಆರ್‌ಎಫ್​​ಗೆ ಈಗಾಗಲೇ ಅನುದಾನ ಕಡಿಮೆ ಬರುತ್ತಿದೆ. ಈ ಹಿನ್ನೆಲೆ ಪರಿಷ್ಕರಣೆಯಾಗಬೇಕು ಎಂದು ಒತ್ತಾಯಿಸಿದ್ದೇನೆ ಎಂದು ಹೇಳಿದರು.

ಬೆಳೆಹಾನಿಯಾದರೆ 1 ಹೆಕ್ಟೇರ್​​ಗೆ ಮಳೆ ಆಶ್ರಿತ ಭೂಮಿಗೆ 8,500 ರೂ., ಮಳೆ ಆಶ್ರಿತ ಭೂಮಿಯಲ್ಲಿ ಬೆಳೆಹಾನಿದರೆ 20 ಸಾವಿರ ರೂ. ಪರಿಹಾರಕ್ಕೆ ಮನವಿ ಮಾಡಲಾಗಿದೆ. ಅದೇ ರೀತಿ ನೀರಾವರಿ ಭೂಮಿ 17 ಸಾವಿರದಿಂದ 35,000 ರೂ.ಗೆ, ತೋಟಗಾರಿಕೆ ಬೆಳೆಹಾನಿಗೆ 22 ಸಾವಿರದಿಂದ 49,000 ರೂ.ಗೆ ಹೆಚ್ಚಿಸಲು ಮನವಿ ಮಾಡಲಾಗಿದೆ. ಇದೇ ವೇಳೆ ರಾಡಾರ್ ಅಳವಡಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ಸಿಡಿಲು ಮಳೆ ಜಾಸ್ತಿಯಾಗುತ್ತಿರುವ ಹಿನ್ನೆಲೆ ಅದನ್ನು ಸೂಕ್ತ ಸಮಯದಲ್ಲಿ ಪತ್ತೆ ಹಚ್ಚಬೇಕಿದೆ. ಅದಕ್ಕಾಗಿ ಡಾಪ್ಲರ್ ರಾಡಾರ್ ಅಳವಡಿಸಬೇಕು ಎಂದರು.

ಇದನ್ನೂ ಓದಿ: ಬಿಪೋರ್​​ಜಾಯ್​​​ ಚಂಡಮಾರುತ: ವಿಪತ್ತು ನಿರ್ವಹಣೆಗಾಗಿ ಮೂರು ಯೋಜನೆ ಘೋಷಿಸಿದ ಅಮಿತ್ ಶಾ

ಪ್ರಕೃತಿ ವಿಕೋಪಗಳ ಬಗ್ಗೆ ಹೆಚ್ಚು ಮುಂಜಾಗ್ರತೆ ವಹಿಸಬೇಕು. ಈ ಹಿನ್ನಲೆ ಚರ್ಚೆ ಮಾಡಲು ಇಂದು ಸಭೆ ನಡೆಸಲಾಯಿತು. ಕೇಂದ್ರ ಸರ್ಕಾರದ ಕೆಲವು ಮಾನದಂಡಗಳನ್ನು ಪಾಲಿಸಲು ಸೂಚಿಸಿದೆ. ಅಕ್ಟೋಬರ್​ನಲ್ಲಿ ಕೇಂದ್ರ ಸರ್ಕಾರ ಪಕೃತಿ ವಿಕೋಪ ಮಾರ್ಗಸೂಚಿಯಲ್ಲಿ ನಿಯಮ ಬದಲಾಯಿಸಿದೆ. ಸರ್ಕಾರ ನೀಡುವ ಪರಿಹಾರ ಮೊತ್ತದಲ್ಲಿ ವಿಮಾ ಕಂಪನಿಗಳು ವಿಮಾ ಮೊತ್ತವನ್ನು ಕಡಿತ ಗೊಳಿಸಿ ನೀಡುವ ನಿಯಮವನ್ನು ತೆಗೆದು ಹಾಕಬೇಕು. ಇದರಿಂದ ರೈತರು ಮತ್ತು ಸರ್ಕಾರಕ್ಕೆ ನಷ್ಟವಾಗುತ್ತಿದ್ದು ವಿಮಾ ಕಂಪನಿಗಳಿಗೆ ಲಾಭವಾಗುತ್ತಿದೆ ಎಂದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಿಪೋರ್​​ಜಾಯ್​​​ ಚಂಡಮಾರುತ ಹಿನ್ನೆಲೆ ವಿಪತ್ತು ನಿರ್ವಹಣೆ ಬಗ್ಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಚಿವರ ಜತೆ ಸಭೆ ನಡೆಸಿದರು. ಸಭೆಯಲ್ಲಿ ಅವರು, 8000 ಕೋಟಿ ರೂ. ಮೌಲ್ಯದ ಮೂರು ಪ್ರಮುಖ ಯೋಜನೆಗಳನ್ನು ಘೋಷಿಸಿದ್ದಾರೆ.

ಪೋರಬಂದರ್, ದೇವಭೂಮಿ ದ್ವಾರಕಾ ಜಿಲ್ಲೆಗಳಲ್ಲಿ ಕಚ್ ವರೆಗಿ ಗಾಳಿಯ ವೇಗವು ನಾಳೆ ಗಂಟೆಗೆ 65-75 ಕಿಮೀ ವೇಗದಲ್ಲಿ ಏರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾ ನಿರ್ದೇಶಕ ಡಾ.ಮೃತ್ಯುಂಜಯ್ ಮಹಪಾತ್ರ ಹೇಳಿದ್ದಾರೆ. ಜೂನ್ 15 ರಂದು, ಗುಜರಾತ್‌ನ ದ್ವಾರಕಾ, ಜಾಮ್‌ನಗರ, ಕಚ್ ಮತ್ತು ಮೊರ್ಬಿ ಜಿಲ್ಲೆಗಳಲ್ಲಿ ಗಾಳಿಯ ವೇಗ ಗಂಟೆಗೆ 125-135 ಕಿಮೀ ಮತ್ತು ಗಂಟೆಗೆ 150 ಕಿಮೀ ವೇಗದಲ್ಲಿ ಬೀಸುತ್ತದೆ. ಇದು ವ್ಯಾಪಕ ಹಾನಿ ಉಂಟುಮಾಡುವ ಸಾಮರ್ಥ್ಯ ಹೊಂದಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:48 pm, Tue, 13 June 23

ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?