Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿದೆದ್ದ ಬಿಸಿಯೂಟ, ಅಂಗನವಾಡಿ ಕಾರ್ಯಕರ್ತೆಯರು, ರಾಜ್ಯ ಸರ್ಕಾರಕ್ಕೆ ಡಬಲ್ ಟ್ರಬಲ್…!

ಸರ್ಕಾರದ ಗಮನ ಸೆಳೆಯಲು ನ.06ರ ಸೋಮವಾರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಫ್ರೀಡಂ ಪಾರ್ಕ್‌ನಲ್ಲಿ ಸೋಮವಾರದಿಂದ ಸರ್ಕಾರ ಪರಿಹಾರ ಸೂಚಿಸುವವರೆಗೆ ಪ್ರತಿಭಟನೆ ಮುಂದುವರಿಸಲು ಕಾರ್ಯಕರ್ತರು ನಿರ್ಧರಿಸಿದ್ದಾರೆ. ಮನವಿಗೆ ಸ್ಪಂದನೆ ದೊರೆಯದೆ ಹೋದರೆ ಅನಿರ್ದಿಷ್ಟವಾದಿ ಪ್ರತಿಭಟನೆ ನಡೆಸುವ ಬಗ್ಗೆ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಿಗೆ AITUC ಮನವಿ ಪತ್ರ ಬರೆದಿದೆ. ಇದೆ ತಿಂಗಳ 6 ನೇ ತಾರೀಕಿನಂದು ಪ್ರತಿಭಟನೆ ನಡೆಸಲು ಸಿದ್ಧತೆ ನಡೆದಿದೆ.

ಸಿಡಿದೆದ್ದ ಬಿಸಿಯೂಟ, ಅಂಗನವಾಡಿ ಕಾರ್ಯಕರ್ತೆಯರು, ರಾಜ್ಯ ಸರ್ಕಾರಕ್ಕೆ ಡಬಲ್ ಟ್ರಬಲ್...!
ಸಾಂದರ್ಭಿಕ ಚಿತ್ರ
Follow us
Poornima Agali Nagaraj
| Updated By: ಆಯೇಷಾ ಬಾನು

Updated on: Nov 04, 2023 | 3:19 PM

ಬೆಂಗಳೂರು ಅ.31: ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಒತ್ತಾಯಿಸಿ ಬಿಸಿಯೂಟ ಕಾರ್ಯಕರ್ತೆಯರ ಹೋರಾಟ ಮುಂದುವರೆದಿದೆ. (Midday meal workers) ಇದರ ನಡುವೆ ಸರ್ಕಾರದ (Karnataka Government) ಗಮನ ಸೆಳೆಯಲು ನ.06ರ ಸೋಮವಾರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಫ್ರೀಡಂ ಪಾರ್ಕ್‌ನಲ್ಲಿ ಸೋಮವಾರದಿಂದ ಸರ್ಕಾರ ಪರಿಹಾರ ಸೂಚಿಸುವವರೆಗೆ ಪ್ರತಿಭಟನೆ ಮುಂದುವರಿಸಲು ಕಾರ್ಯಕರ್ತರು ನಿರ್ಧರಿಸಿದ್ದಾರೆ. ಅಲ್ಲದೆ ಬೆಂಗಳೂರು ನಗರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಗೊಳಿಸುಂತೆ ಅಂಗನವಾಡಿ, ಬಿಸಿಯೂಟ ಕಾರ್ಯಕರ್ತರು ಒತ್ತಾಯಿಸಿದ್ದರು. ಆದರೆ  ಕಳೆದ 3- 4 ವರ್ಷಗಳಿಂದ ಯಾವುದೇ ಕ್ರಮ ಕೈಗೊಳ್ಳದಿರುವ ಹಿನ್ನಲೆ ಸೋಮವಾರ ಪ್ರತಿಭಟನೆಗೆ ಕರೆ ನೀಡಿದ್ದಾರೆ.

ಮನವಿಗೆ ಸ್ಪಂದನೆ ದೊರೆಯದೆ ಹೋದರೆ ಅನಿರ್ದಿಷ್ಟವಾದಿ ಪ್ರತಿಭಟನೆ ನಡೆಸುವ ಬಗ್ಗೆ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಿಗೆ AITUC ಮನವಿ ಪತ್ರ ಬರೆದಿದೆ. ಇದೆ ತಿಂಗಳ 6 ನೇ ತಾರೀಕಿನಂದು ಪ್ರತಿಭಟನೆ ನಡೆಸಲು ಸಿದ್ಧತೆ ನಡೆದಿದೆ.

ಇನ್ನು ಕಳೆದ ಮೂರು-ನಾಲ್ಕು ದಿನಗಳಿಂದ ಸರ್ಕಾರದ ವಿರುದ್ಧ ಬಿಸಿಯೂಟ ಕಾರ್ಯಕರ್ತರು ಹೋರಾಟ ನಡೆಸುತ್ತಿದ್ದಾರೆ. ಬಿಸಿಲು, ಚಳಿ, ಗಾಳಿ ಎನ್ನದೇ ರಾತ್ರಿ ಪೂರ್ತಿ ಫ್ರೀಡಂ ಪಾರ್ಕ್ ನಲ್ಲಿ ಬಿಸಿಯೂಟ ಮಹಿಳಾ ಕಾರ್ಯಕರ್ತರು ಎಲ್ಲೆಂದರಲ್ಲಿ ಮಲಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅನಿರ್ಧಿಷ್ಠಾವಧಿ ಮುಷ್ಕರ ನಡೆಯುತ್ತಿದೆ. ನಿತ್ಯ ಜಿಲ್ಲೆವಾರು ಪ್ರತಿಭಟನೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಬೇಡಿಕೆ ಈಡೇರಿಸುವಂತೆ ಬೆಂಗಳೂರಲ್ಲಿ ಬಿಸಿಯೂಟ ಕಾರ್ಮಿಕರ ಅನಿರ್ದಿಷ್ಟಾವಧಿ ಪ್ರತಿಭಟನೆ

ಜಿಲ್ಲೆವಾರು ಪ್ರತಿಭಟನೆ

ಪ್ರತಿದಿನ ಒಂದೊಂದು ಜಿಲ್ಲೆಯ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗಿಯಾಗಿ ಸರ್ಕಾರಕ್ಕೆ ತಮ್ಮ ಮನವಿ ಸ್ವೀಕರಿಸುವಂತೆ ಒತ್ತಾಯಿಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾಗದ ಜಿಲ್ಲೆಯಲ್ಲಿ ಆ ದಿನ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸಂಪೂರ್ಣ ಬಂದ್ ಆಗಲಿದೆ. ದೀಪಾವಳಿವರೆಗೆ ಬೇಡಿಕೆ ಈಡೇರಿಕೆಗೆ ಪ್ರತಿಭಟನಾಕಾರರು ಡೆಡ್ ಲೈನ್ ಕೊಟ್ಟಿದ್ದಾರೆ. ಬೇಡಿಕೆ ಈಡೇರದಿದ್ದರೆ ಏಕ ಕಾಲಕ್ಕೆ ರಾಜ್ಯವ್ಯಾಪಿ ಬಿಸಿಯೂಟ ಸ್ಥಗಿತಗೊಳಿಸುವ ಎಚ್ಚರಿಕೆ ಕೊಟ್ಟಿದ್ದಾರೆ.

ಸೇವಾ ಭದ್ರತೆ ನೀಡಬೇಕು. ನಿವೃತ್ತಿಯಾದ ನೌಕರರಿಗೆ ಒಂದು ಲಕ್ಷ ಇಡುಗಂಟು ನೀಡಬೇಕು. ಕೆಲಸದ ಸ್ಥಳಗಳಲ್ಲಿ ಮರಣ ಹೊಂದಿದರೆ 25 ರೂ. ಲಕ್ಷ ಪರಿಹಾರ ನೀಡಬೇಕು. ರಾಜ್ಯದ ಪ್ರತಿ ಶಾಲೆಯಲ್ಲಿ ಕನಿಷ್ಠ ಇಬ್ಬರು ಅಡುಗೆಯವರು ಇರಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಬಿಸಿಯೂಟ ಕಾರ್ಯಕರ್ತರು ಸರ್ಕಾರದ ಮುಂದಿಟ್ಟಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರದ ಸಮಯದಲಲ್ಇ ಬಿಸಿಯೂಟ ತಯಾರಕರಿಗೆ ಹೆಚ್ಚುವರಿಯಾಗಿ ಒಂದು ಸಾವಿರ ನೀಡುವಂತೆ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಅದನ್ನು 2023ರ ಜನವರಿಯಿಂದ ಅನ್ವಯವಾಗುವಂತೆ ಜಾರಿಗೊಳಿಸಬೇಕು. ಅಕ್ಷರ ದಾಸೋಹ ಕೈಪಿಡಿಯಲ್ಲಿ ಕೆಲಸದ ಅವಧಿಯನ್ನು 4 ಗಂಟೆಯಿಂದ 6ಗಂಟೆಗೆ ಬದಲಾಯಿಸಬೇಕು. ಬೇಸಿಗೆ ಮತ್ತು ದಸರಾ ರಜೆಗಳಲ್ಲಿ ಕಡ್ಡಾಯವಾಗಿ ವೇತನ ಪಾವತಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ