ಬೆಂಗಳೂರು: ಬಿಟ್ ಕಾಯಿನ್ ಕುರಿತು ಅಧಿಕಾರಿಗಳ ಆಡಿಯೋ ವೈರಲ್ ಹಿನ್ನೆಲೆ ಆಡಿಯೋ ಬಗ್ಗೆ ಸಿಐಡಿ ಸೈಬರ್ ಕ್ರೈಮ್ ತನಿಖೆ ನಡೆಸಿದೆ. ಪೊಲೀಸ್ ಸಿಬ್ಬಂದಿ ಚರ್ಚಿಸಿದ ಆಡಿಯೋ ವೈರಲ್ ಹಿನ್ನೆಲೆ ತನಿಖೆಯಲ್ಲಿ ಆಡಿಯೋದಲ್ಲಿನ ಸತ್ಯಾಸತ್ಯತೆ ಬಹಿರಂಗಪಡಿಸಲಾಗಿದೆ. ಸಿಐಡಿಯ ಓರ್ವ ಕಾನ್ಸ್ಟೇಬಲ್, ಇನ್ಸ್ಪೆಕ್ಟರ್ ಚರ್ಚೆ ಮಾಡಿದ್ದಾರೆ. 6 ತಿಂಗಳ ಹಿಂದೆ ನಿವೃತ್ತಿ ಆದ ಇನ್ಸ್ಪೆಕ್ಟರ್ ಮಧ್ಯೆ ಚರ್ಚೆ ನಡೆದಿದೆ. ಇಬ್ಬರನ್ನೂ ವಿಚಾರಣೆ ನಡೆಸಿ ಪೊಲೀಸರು ಹೇಳಿಕೆ ಪಡೆದಿದ್ದಾರೆ.
ಬಿಟ್ ಕಾಯಿನ್ ಹೆಚ್ಚು ಚರ್ಚೆಯಲ್ಲಿರುವುದರಿಂದ ಮಾತು ಬಂದಿದೆ. ಚರ್ಚೆಯಲ್ಲಿದ್ದರಿಂದ ಮಾತನಾಡಿದ್ದಾಗಿ ಇಬ್ಬರಿಂದ ಹೇಳಿಕೆ ನೀಡಲಾಗಿದೆ. ಸೈಬರ್ ಕ್ರೈಂ ಪೊಲೀಸರು ಹೇಳಿಕೆ ಪಡೆದಿದ್ದಾರೆ.
ಬಿಟ್ ಕಾಯಿನ್ ಹಗರಣ ಆರೋಪದ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಿಂದ ಸ್ಪಷ್ಟನೆ
ಸರ್ಕಾರದ ವಿರುದ್ಧ ಬಿಟ್ ಕಾಯಿನ್ ಹಗರಣ ಆರೋಪದ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಿಂದ ಸ್ಪಷ್ಟನೆ ನೀಡಲಾಗಿದೆ. ಪ್ರಕರಣದ ತನಿಖೆಯನ್ನ ಪಾರದರ್ಶಕವಾಗಿ ನಡೆಸಲಾಗಿದೆ. ಯಾವುದೇ ಬಾಹ್ಯ ಒತ್ತಡಗಳಿಗೆ ಒಳಗಾಗಿ ತನಿಖೆ ನಡೆಸಿಲ್ಲ. ಹಗರಣ ಸಂಬಂಧ 3 ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಸೈಬರ್ ಕ್ರೈಂ, ಕೆ.ಜಿ.ನಗರ, ಅಶೋಕನಗರ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿತ್ತು. ಕೆ.ಜಿ.ನಗರ ಠಾಣೆಯಲ್ಲಿ ದಾಖಲಾದ ದೂರಿನಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು. ಈಗಾಗಲೇ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಿಂದ ಸ್ಪಷ್ಟನೆ ನೀಡಲಾಗಿದೆ.
ಬಿಟ್ ಕಾಯಿನ್ ಹಗರಣದ ಬಗ್ಗೆ ಪ್ರಧಾನಿ ಮಹತ್ವದ ಸಭೆ
ಬಿಟ್ ಕಾಯಿನ್ ಹಗರಣದ ಬಗ್ಗೆ ಪ್ರಧಾನಿ ಮಹತ್ವದ ಸಭೆ ನಡೆಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಹಿರಿಯ ಅಧಿಕಾರಿಗಳ ಜೊತೆ ಪ್ರಧಾನಿ ಮೋದಿ ಚರ್ಚೆ ಮಾಡಿದ್ದಾರೆ. ಆರ್‌ಬಿಐ, ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳು, ಕೇಂದ್ರ ಗೃಹ ಇಲಾಖೆ ಹಿರಿಯ ಅಧಿಕಾರಿಗಳ ಜತೆ ಸಭೆ ಮಾಡಲಾಗಿದೆ. ತಜ್ಞರ ಜೊತೆ ಪ್ರಧಾನಿ ಮಹತ್ವದ ಸಭೆ ನಡೆಸುತ್ತಿದ್ದಾರೆ. ದೆಹಲಿಯ ಪ್ರಧಾನಿ ನಿವಾಸದಲ್ಲಿ ಸಭೆ ನಡೆಯುತ್ತಿದೆ.
ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣ: ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಬಸವರಾಜ ಬೊಮ್ಮಾಯಿ ಚರ್ಚೆ
ಇದನ್ನೂ ಓದಿ: ಬಿಟ್ಕಾಯಿನ್ ಪ್ರಕರಣ ತನಿಖೆ ಬಗ್ಗೆ ಪ್ರಧಾನಿ ಮೋದಿ ಮೇಲೆ ನಂಬಿಕೆ ಇಡೋಣ: ಹೆಚ್ಡಿ ಕುಮಾರಸ್ವಾಮಿ
Published On - 8:30 pm, Sat, 13 November 21