AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್​ ಕಾಯಿನ್​ ಪ್ರಕರಣ: ಆರೋಪಿಗಳು ಸಿಐಡಿ ವಶಕ್ಕೆ

ಬಿಟ್ ಕಾಯಿನ್ ಪ್ರಕರಣದಲ್ಲಿ ನಿನ್ನೆ(ಜ.24) ಮಹತ್ತರ ಬೆಳವಣಿಗೆ ನಡೆದಿತ್ತು. ತನಿಖೆ ನಡೆಸುತ್ತಿರುವ ಎಸ್​ಐಟಿ ಮತ್ತೊಂದು ಪ್ರಕರಣ ದಾಖಲಿಸಿಕೊಂಡು ವಿಚಾರಣೆಗೆ ಕರೆದಿದ್ದವರನ್ನೆಲ್ಲಾ ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿತ್ತು. ಅದರಲ್ಲಿ ಇಬ್ಬರು ಪೊಲೀಸರಾದ ಇನ್ಸ್​ಪೆಕ್ಟರ್​​ ಪ್ರಶಾಂತ್ ಬಾಬು ಹಾಗೂ ಸೈಬರ್ ಎಕ್ಸ್​​ಪರ್ಟ್ ಸಂತೋಷ್ ಎಂದು ತಿಳಿದುಬಂದಿತ್ತು.

ಬಿಟ್​ ಕಾಯಿನ್​ ಪ್ರಕರಣ: ಆರೋಪಿಗಳು ಸಿಐಡಿ ವಶಕ್ಕೆ
ಬಿಟ್​ಕಾಯಿನ್​ ಆರೋಪಿಗಳು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jan 25, 2024 | 3:48 PM

Share

ಬೆಂಗಳೂರು, ಜ.25: ಬಿಟ್​ ಕಾಯಿನ್(Bitcoin case) ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪೊಲೀಸ್ ಇನ್ಸ್​ಪೆಕ್ಟರ್​​ ಪ್ರಶಾಂತ್ ಬಾಬು ಹಾಗೂ ಸೈಬರ್ ಎಕ್ಸ್​​ಪರ್ಟ್ ಸಂತೋಷ್ ಎಂಬಾತನನ್ನು ಸಿಐಡಿ(CID) ವಶಕ್ಕೆ ಪಡೆದಿದೆ. ಬೆಂಗಳೂರಿನ 1ನೇ ACMM ನ್ಯಾಯಾಲಯವು ಬಂಧಿತ ಆರೋಪಿಗಳನ್ನು ಜನವರಿ 31ರವರೆಗೆ ಸಿಐಡಿ ಕಸ್ಟಡಿಗೆ ಅಂದರೆ 6 ದಿನಗಳ ಕಾಲ ಸಿಐಡಿ ವಶಕ್ಕೆ ನೀಡಲು ಆದೇಶ ನೀಡಿದೆ.

ಬಿಟ್ ಕಾಯಿನ್ ಪ್ರಕರಣದಲ್ಲಿ ನಿನ್ನೆ(ಜ.24) ಮಹತ್ತರ ಬೆಳವಣಿಗೆ ನಡೆದಿತ್ತು. ತನಿಖೆ ನಡೆಸುತ್ತಿರುವ ಎಸ್​ಐಟಿ ಮತ್ತೊಂದು ಪ್ರಕರಣ ದಾಖಲಿಸಿಕೊಂಡು ವಿಚಾರಣೆಗೆ ಕರೆದಿದ್ದವರನ್ನೆಲ್ಲಾ ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿತ್ತು. ಅದರಲ್ಲಿ ಇಬ್ಬರು ಪೊಲೀಸರಾದ ಇನ್ಸ್​ಪೆಕ್ಟರ್​​ ಪ್ರಶಾಂತ್ ಬಾಬು ಹಾಗೂ ಸೈಬರ್ ಎಕ್ಸ್​​ಪರ್ಟ್ ಸಂತೋಷ್ ಎಂದು ತಿಳಿದುಬಂದಿತ್ತು. ಈ ಹಿನ್ನಲೆ ನಿನ್ನೆ ಇಬ್ಬರನ್ನು ವಶಕ್ಕೆ ಪಡೆಯಲಾಗಿತ್ತು. ಇಂದು ಮಧ್ಯಾಹ್ನ ಮೂರು ಘಂಟೆಗೆ ಎಸ್​ಐಟಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿತ್ತು.

ಇದನ್ನೂ ಓದಿ:ಸಿಐಡಿ ಪೊಲೀಸರಿಗೆ ಶ್ರೀಕಿಯದ್ದೇ ತಲೆನೋವು: ವಿಚಾರಣೆಗೆ ಹಾಜರಾಗದೆ ಕುಂಟು ನೆಪ ಹೇಳುತ್ತಿರುವ ಬಿಟ್​ ಕಾಯಿನ್​ ಕಿಂಗ್​ಪಿನ್​

ಆರು ತಿಂಗಳು ಕಳೆದಿದ್ದರೂ ಇದುವರೆಗೆ ಯಾರನ್ನೂ ಅರೆಸ್ಟ್ ಮಾಡಿರಲಿಲ್ಲ ಎಸ್ಐಟಿ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ರಚನೆಯಾಗಿ ಆರು ತಿಂಗಳು ಕಳೆದಿದ್ದರೂ ಇದುವರೆಗೆ ಯಾರನ್ನೂ ಅರೆಸ್ಟ್ ಮಾಡಿರಲಿಲ್ಲ. ಇನ್ನು ಪ್ರಕರಣದಲ್ಲಿ ಸಾವಿರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂದು ಕಾಂಗ್ರೆಸ್ ಅರೋಪ ಮಾಡಿದ್ದ ಬೆನ್ನಲ್ಲೆ ತನಿಖೆ ಮಾಡಿದಾಗ ಕೇವಲ ಮೂರೂವರೆ ಲಕ್ಷ ರೂಪಾಯಿ ಮೌಲ್ಯದ ಬಿಟ್ ಕಾಯಿನ್ ವರ್ಗಾವಣೆ ಮಾಹಿತಿ ಲಭ್ಯವಾಗಿದೆ. ಸದ್ಯ ಪ್ರಕರಣ ಸಂಬಂಧ ಹೆಚ್ಚಿನ ತನಿಖೆಯನ್ನು ಸಿಐಟಿ ನಡೆಸುತ್ತಿದೆ. ತನಿಖೆಯಲ್ಲಿ ಏನೆಲ್ಲ ಅಂಶಗಳು ಬೆಳಕಿಗೆ ಬರಲಿವೆ ಎನ್ನುವುದುನ್ನು ಕಾದುನೋಡಬೇಕಿದೆ.

ಇನ್ನು ಶ್ರೀಕಿಯನ್ನು ಬಂಧಿಸಿ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಲಾಗಿತ್ತು. ಈ ವೇಳೆ ಸಿಸಿಬಿ ತನಿಖೆಯಲ್ಲಿ ಲೋಪ ನಡೆದಿದೆ ಎಂದು ಎಸ್‍ಐಟಿ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿಯೇ ಎಫ್‍ಐಆರ್ ಕೂಡ ದಾಖಲಾಗಿತ್ತು. ಇದೀಗ ಈ ಪ್ರಕರಣದ ಪ್ರಮುಖ ಸಾಕ್ಷಿ ಶ್ರೀಕಿ ತನಿಖೆಗೆ ಸಹಕರಿಸದೇ ಸತಾಯಿಸುತ್ತಿದ್ದಾನೆ. ಜೊತೆಗೆ ಈ ಪ್ರಕರಣದಲ್ಲಿ ಕೆಲ ಬಿಜೆಪಿ ನಾಯಕರ ಹೆಸರುಗಳು ಕೇಳಿಬಂದಿದ್ದವು. ಇದರಿಂದಲೇ ಈ ಬಿಟ್​ ಕಾಯಿನ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು. ಇದೀಗ ಎಸ್​ಐಟಿ ಅಧಿಕಾರಿಗಳು ಈ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್