ಬಿಟ್ ಕಾಯಿನ್ ಹಗರಣ ಪ್ರಕರಣ: ‘ಎಸ್​ಐಟಿ’ ಯಿಂದ ಮೊದಲ ಚಾರ್ಜ್ ಶೀಟ್ ಸಲ್ಲಿಕೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 06, 2024 | 2:44 PM

ಇದೇ 2015ರಲ್ಲಿ ಕೆಂಪೇಗೌಡನಗರ ಠಾಣೆಯಲ್ಲಿ ದಾಖಲಾಗಿದ್ದ ಡ್ರಗ್ಸ್ ಕೇಸ್‌ನಲ್ಲಿ ಶ್ರೀಕಿಯನ್ನು ಬಂಧಿಸಲಾಗಿತ್ತು. ಈ ಪ್ರಕರಣವನ್ನು ತನಿಖೆ ಮಾಡುತ್ತಿದ್ದ ವೇಳೆ ಬಿಟ್‌ಕಾಯಿನ್ ಪ್ರಕರಣ ಬೆಳಕಿಗೆ ಬಂದಿತ್ತು. ಈ ಹಿನ್ನಲೆ ಎಸ್​ಐಟಿ ಯಿಂದ ಮೊದಲ ಚಾರ್ಜ್ ಶೀಟ್(charge sheet) ಸಲ್ಲಿಕೆಯಾಗಿದೆ. ಕೆಜಿ ನಗರದ ಡ್ರಗ್ಸ್ ಕೇಸ್​ನಲ್ಲಿ ಶ್ರೀಖಿ, ರಾಬಿನ್ ಖಂಡೇವಾಲ ಹಾಗೂ ಸುನೀಶ್ ಹೆಗ್ಡೆ ಸೇರಿ ಒಟ್ಟು 6 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಬಿಟ್ ಕಾಯಿನ್ ಹಗರಣ ಪ್ರಕರಣ: ‘ಎಸ್​ಐಟಿ’ ಯಿಂದ ಮೊದಲ ಚಾರ್ಜ್ ಶೀಟ್ ಸಲ್ಲಿಕೆ
ಬಿಟ್ ಕಾಯಿನ್ ಹಗರಣ ಪ್ರಕರಣ: ‘ಎಸ್​ಐಟಿ’ ಯಿಂದ ಮೊದಲ ಚಾರ್ಜ್ ಶೀಟ್ ಸಲ್ಲಿಕೆ
Follow us on

ಬೆಂಗಳೂರು, ಜೂ.06: ಬಿಟ್ ಕಾಯಿನ್ ಹಗರಣ ಪ್ರಕರಣ(Bitcoin Scam Case)ದ ತನಿಖೆ ಚುರುಕುಗೊಂಡಿದ್ದು, ಎಸ್​ಐಟಿ ಯಿಂದ ಮೊದಲ ಚಾರ್ಜ್ ಶೀಟ್(charge sheet) ಸಲ್ಲಿಕೆಯಾಗಿದೆ. ಕೆಜಿ ನಗರ ಡ್ರಗ್ಸ್ ಕೇಸ್​ನಲ್ಲಿ ಶ್ರೀಖಿ, ರಾಬಿನ್ ಖಂಡೇವಾಲ ಹಾಗೂ ಸುನೀಶ್ ಹೆಗ್ಡೆ ಸೇರಿ ಒಟ್ಟು 6 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ. ಮೂರು ಎಫ್​ಐಆರ್​ಗಳನ್ನು ಎಸ್​ಐಟಿ ತನಿಖೆ ಮಾಡುತ್ತಾ ಇತ್ತು. ಬಿಟ್ ಕಾಯಿನ್ ಹಗರಣದ ಮುನ್ನ ಡ್ರಗ್ಸ್ ಕೇಸ್ ಬಂದಿತ್ತು. ಆ ಕುರಿತು ತನಿಖೆ ನಡೆಸಿದಾಗ ಬಿಟ್ ಕಾಯಿನ್ ಹಗರಣ ಬೆಳಕಿಗೆ ಬಂದಿತ್ತು. ಈ ಹಿನ್ನಲೆ ಇಂದು(ಜೂ.06) ಎಸ್ ಐ ಟಿ ಮೊದಲನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.

ಇದೇ 2015ರಲ್ಲಿ ಕೆಂಪೇಗೌಡನಗರ ಠಾಣೆಯಲ್ಲಿ ದಾಖಲಾಗಿದ್ದ ಡ್ರಗ್ಸ್ ಕೇಸ್‌ನಲ್ಲಿ ಶ್ರೀಕಿಯನ್ನು ಬಂಧಿಸಲಾಗಿತ್ತು. ಈ ಪ್ರಕರಣವನ್ನು ತನಿಖೆ ಮಾಡುತ್ತಿದ್ದ ವೇಳೆ ಬಿಟ್‌ಕಾಯಿನ್ ಪ್ರಕರಣ ಬೆಳಕಿಗೆ ಬಂದಿತ್ತು. ಅದರಂತೆ 2020ರಲ್ಲಿ ಸುಮಾರು ಸಾವಿರ ಕೋಟಿ ಹಗರಣದ ಬಿಟ್‌ಕಾಯಿನ್ ಕೇಸ್‌ನಲ್ಲಿ ಶ್ರೀಕಿ ಬಂಧನವಾಗಿತ್ತು. ಇದಾದ ನಂತರ ಶ್ರೀಕಿ ಕಳೆದ ಐದಾರು ವರ್ಷಗಳಿಂದ ವಿವಿಧ ಕ್ರಿಪ್ಟೋ ಕರೆನ್ಸಿ ಮಾರಾಟ ಪ್ಲಾಟ್‌ಫಾರ್ಮ್‌ಗಳನ್ನು ಹ್ಯಾಕ್ ಮಾಡಿ ಅವುಗಳಿಂದ ಸಾವಿರಾರು ಬಿಟ್‌ಕಾಯಿನ್‌ಗಳನ್ನು ಎಗರಿಸಿದ್ದನು. ಅಲ್ಲದೇ ರಾಜ್ಯ ಸರ್ಕಾರದ ಇ-ಸಂಗ್ರಹಣಾ ಪೋರ್ಟಲ್​ ಜಾಲತಾಣ ಹ್ಯಾಕ್​ ಮಾಡಿದ್ದನು. ಈ ಪ್ರಕರಣವನ್ನು ಸಿಸಿಬಿ ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿದ್ದರು.

ಇದನ್ನೂ ಓದಿ:ಬಿಟ್ ಕಾಯಿನ್ ಪ್ರಕರಣದ ಆರೋಪಿಗಳ ವಿರುದ್ದ ಕೋಕಾ ಅಸ್ತ್ರ ಬಳಕೆ; ಏನಿದು ಕಾಯ್ದೆ?

ಇನ್ನು 2017ರಲ್ಲಿ ತುಮಕೂರು ಸೆನ್ ಠಾಣೆಯಲ್ಲಿ ದಾಖಲಾಗಿದ್ದ ಬಿಟ್ ಕಾಯಿನ್ ಪ್ರಕರಣದ ಹಿನ್ನಲೆ ಇತ್ತೀಚೆಗಷ್ಟೇ ಶ್ರೀಕಿ ಅಂಡ್ ಟೀಮ್ ಮೇಲೆ ಕೋಕಾ ಕಾಯಿದೆ ಜಾರಿ ಮಾಡಲಾಗಿತ್ತು. ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ ಕೇಸ್ ದಾಖಲಾಗಲಿದೆ. ಈ ಕಾಯ್ದೆಯಲ್ಲಿ ಕನಿಷ್ಠ ಒಂದು ವರ್ಷ ಅಪರಾಧಿಗಳಿಗೆ ಜಾಮೀನು ಸಿಗುವುದಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ