ಬಿಟ್​ ಕಾಯಿನ್ ದಂಧೆಯಲ್ಲಿ ಕಾಂಗ್ರೆಸ್​ನವರಿದ್ದರೆ ಹೆಸರು ಹೇಳಿ ಬಂಧಿಸಲಿ; ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಸವಾಲು

Karnataka Bitcoin Case: ಬಿಟ್‌ ಕಾಯಿನ್ ಕೇಸ್‌ನಲ್ಲಿ ಕಾಂಗ್ರೆಸ್‌ನವರಿರುವುದು ಸಾಬೀತಾದರೆ ಬಂಧಿಸಲಿ. ಅವರದ್ದೇ ಸರ್ಕಾರವಿದೆ, ಆರೋಪಿಗಳ ಹೆಸರು ಹೇಳಲಿ. ಹೆಸರು ಹೇಳಲು ಆಗಿಲ್ಲ ಅಂದ್ರೆ ಸರ್ಕಾರ ಬಿಟ್ಟು ಕೊಡಲಿ. ನಾವು ಅಧಿಕಾರಕ್ಕೆ ಬಂದು ಆರೋಪಿಗಳ ಹೆಸರು ಬಹಿರಂಗಪಡಿಸಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಬಿಟ್​ ಕಾಯಿನ್ ದಂಧೆಯಲ್ಲಿ ಕಾಂಗ್ರೆಸ್​ನವರಿದ್ದರೆ ಹೆಸರು ಹೇಳಿ ಬಂಧಿಸಲಿ; ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಸವಾಲು
ಸಿದ್ದರಾಮಯ್ಯ- ಬಸವರಾಜ ಬೊಮ್ಮಾಯಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Nov 10, 2021 | 4:06 PM

ಬೆಂಗಳೂರು: ಕರ್ನಾಟಕದಲ್ಲಿ ಬಿಟ್ ಕಾಯಿನ್ ದಂಧೆಯ ಕುರಿತ ಚರ್ಚೆ ತಾರಕಕ್ಕೇರಿದೆ. ಬಿಜೆಪಿ ಮತ್ತು ಕಾಂಗ್ರೆಸ್​ನವರು ಈ ಕುರಿತು ಪರಸ್ಪರ ಕೆಸರೆರಚಾಟ ಮಾಡಿಕೊಳ್ಳುತ್ತಲೇ ಇದ್ದಾರೆ. ಇದೀಗ ಈ ಕುರಿತು ಮತ್ತೆ ವಾಗ್ದಾಳಿ ನಡೆಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah), ಬಿಟ್‌ ಕಾಯಿನ್ ಹಗರಣದಲ್ಲಿ (Bitcoin Scam) ಬಿಜೆಪಿಯವರು ಇದ್ದಾರೆ ಎನ್ನುವ ಮೂಲಕ ಈ ಹಗರಣದಲ್ಲಿ ಕಾಂಗ್ರೆಸ್‌ನವರಿದ್ದಾರೆಂಬ ಸಿಎಂ ಬಸವರಾಜ ಬೊಮ್ಮಾಯಿ ಅವರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಅಲ್ಲದೆ, ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೆಸ್‌ನವರು ಇದ್ದರೆ ಅವರನ್ನು ಬಂಧಿಸಲಿ ಎಂದು ಸಿಎಂ ಬೊಮ್ಮಾಯಿ(Basavaraj Bommai)ಗೆ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಬಿಟ್‌ ಕಾಯಿನ್ ಕೇಸ್‌ನಲ್ಲಿ ಕಾಂಗ್ರೆಸ್‌ನವರಿರುವುದು ಸಾಬೀತಾದರೆ ಬಂಧಿಸಲಿ. ಈ ಪ್ರಕರಣದ ಬಗ್ಗೆ ಸಿಎಂ ಬೇಜವಾಬ್ದಾರಿತನದ ಹೇಳಿಕೆ ನೀಡ್ತಿದ್ದಾರೆ. ಕಾಂಗ್ರೆಸ್‌ ಪಕ್ಷದವರು ಭಾಗಿಯಾಗಿದ್ದರೆ ಅವರ ಹೆಸರು ಹೇಳಲಿ. ಅವರದ್ದೇ ಸರ್ಕಾರವಿದೆ, ಆರೋಪಿಗಳ ಹೆಸರು ಹೇಳಲಿ. ಹೆಸರು ಹೇಳಲು ಆಗಿಲ್ಲ ಅಂದ್ರೆ ಸರ್ಕಾರ ಬಿಟ್ಟು ಕೊಡಲಿ. ನಾವು ಅಧಿಕಾರಕ್ಕೆ ಬಂದು ಆರೋಪಿಗಳ ಹೆಸರು ಹೇಳ್ತೇವೆ. ಸಿಎಂ ಈ ರೀತಿ ಮಾತನಾಡಿದ್ದು ನೋಡಿದರೆ ಅನುಮಾನ ಹೆಚ್ಚಾಗುತ್ತಿದೆ. ಅವರೇ ಸಿಕ್ಕಿಹಾಕಿಕೊಂಡಿರುವಂತೆ ನಡೆದುಕೊಳ್ಳುತ್ತಿದ್ದಾರೆ. ಆದ್ರೆ ನಾನು ಎಲ್ಲೂ ಸಿಎಂ ಬಸವರಾಜ ಬೊಮ್ಮಾಯಿ ಅವರ ಹೆಸರು ಹೇಳಿಲ್ಲ. ಆದರೂ ಅವರ ಹೇಳಿಕೆ ನೋಡುತ್ತಿದ್ದರೆ ಅನುಮಾನ ಬರ್ತಿದೆ. ಆರೋಪಿ ಶ್ರೀಕೃಷ್ಣ ಏನು ಹೇಳಿದ್ದಾರೆಂದು ಸರ್ಕಾರ ಬಹಿರಂಗಪಡಿಸಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಇನ್ನು, ಬಿಟ್ ಕಾಯಿನ್ ಪ್ರಕರಣದ ಕುರಿತು ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಕೂಡ ಪ್ರತಿಕ್ರಿಯೆ ನೀಡಿದ್ದು, ಬಿಟ್ ಕಾಯಿನ್ ಬಗ್ಗೆ ಬಿಜೆಪಿ, ಕಾಂಗ್ರೆಸ್​ ನಡುವೆ ಆರೋಪ ಹೆಚ್ಚಾಗಿದೆ. ಇವರ ಮೇಲೆ ಅವರು, ಅವರ ಮೇಲೆ ಇವರು ಆರೋಪಿಸುತ್ತಿದ್ದಾರೆ. 2 ಪಕ್ಷಗಳ ಕೆಸರೆರಚಾಟದಿಂದ ಸತ್ಯ ಹೊರಗೆ ಬರುವುದಿಲ್ಲ. ಆರೋಪ ಕೇವಲ ಪ್ರಚಾರಕ್ಕೆ ಮಾತ್ರ ಸೀಮಿತವಾಗುತ್ತಿದೆ. 2016-17ರಲ್ಲಿ ಬಿಟ್ ಕಾಯಿನ್ ದಂಧೆ ಬೆಳಕಿಗೆ ಬಂದಿತ್ತು. ಆಗ ಸಿಎಂ ಆಗಿದ್ದವರು ಈಗ ಪ್ರತಿಪಕ್ಷ ನಾಯಕರಾಗಿದ್ದಾರೆ ಎಂದು ಸಿದ್ದರಾಮಯ್ಯನವರ ವಿರುದ್ಧ ಪರೋಕ್ಷವಾಗಿ ಟೀಕಾ ಪ್ರಹಾರ ನಡೆಸಿದ್ದಾರೆ.

ಪ್ರಧಾನಿ ಅಮೆರಿಕ ಪ್ರವಾಸದಲ್ಲಿದ್ದಾಗ ಮಾಹಿತಿ ತಿಳಿದಿದೆಯಂತೆ. ಸರ್ಕಾರದಲ್ಲಿ ಇರುವವರು ಸತ್ಯವನ್ನು ಬಯಲು ಮಾಡಬೇಕು. ಯಾವ ತನಿಖೆ ಮಾಡಿದ್ರೂ ಸರ್ಕಾರದ ಅಡಿಯಲ್ಲೇ ನಡೆಯುತ್ತದೆ. ನಿಖರವಾಗಿ ಮಾಹಿತಿ ಇಲ್ಲದೆ ಪ್ರಚಾರಕ್ಕೆ ಹೇಳಿಕೆ ನೀಡಲ್ಲ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಹೆಚ್​ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ವಸೂಲಿ ಕಿಂಗ್, ಬಿಟ್ ಕಾಯಿನ್ ದಂಧೆ ಕುರಿತು ದಾಖಲೆಯಿದ್ದರೆ ಬಹಿರಂಗಪಡಿಸಲಿ; ಸಚಿವ ಈಶ್ವರಪ್ಪ ಸವಾಲ್

ಬಿಟ್ ಕಾಯಿನ್ ಪ್ರಕರಣ ಸಿಎಂ ಬಲಿ ಪಡೆಯುತ್ತೆ; ಶಾಸಕ ಪ್ರಿಯಾಂಕ್ ಖರ್ಗೆ ಹೇಳಿಕೆ

Published On - 4:02 pm, Wed, 10 November 21

ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು
ಬಿಗ್​ಬಾಸ್ ಮನೆಯಲ್ಲಿ ಕಸದ ಬುಟ್ಟಿ: ಚೈತ್ರಾ ಕಸಕ್ಕೆ ಸಮಾನವೆ?
ಬಿಗ್​ಬಾಸ್ ಮನೆಯಲ್ಲಿ ಕಸದ ಬುಟ್ಟಿ: ಚೈತ್ರಾ ಕಸಕ್ಕೆ ಸಮಾನವೆ?
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​
ಬಾಕ್ಸಿಂಗ್ ಡೇ ಟೆಸ್ಟ್​ಗಾಗಿ ಬೆವರಿಳಿಸಿದ ಟೀಮ್ ಇಂಡಿಯಾ ಬೌಲರ್​ಗಳು
ಬಾಕ್ಸಿಂಗ್ ಡೇ ಟೆಸ್ಟ್​ಗಾಗಿ ಬೆವರಿಳಿಸಿದ ಟೀಮ್ ಇಂಡಿಯಾ ಬೌಲರ್​ಗಳು