ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ; ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿ ಹೈಕೋರ್ಟ್‌ ಆದೇಶ

2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು, ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಕೊಲೆ ಮಾಡಲಾಗಿತ್ತು. ಇದಕ್ಕೆ ಸಂಬಂಧಟ್ಟ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್​ ನಿರಾಕರಿಸಿದೆ.

ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ; ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿ ಹೈಕೋರ್ಟ್‌ ಆದೇಶ
ಬಿಜೆಪಿ ಕಾರ್ಯಕರ್ತ ಪ್ರವೀಣ್​ ನೆಟ್ಟಾರು
Edited By: ಕಿರಣ್ ಹನುಮಂತ್​ ಮಾದಾರ್

Updated on: Oct 04, 2023 | 8:52 PM

ಬೆಂಗಳೂರು,ಅ.04: ಬಿಜೆಪಿ ಕಾರ್ಯಕರ್ತ (BJP Worker) ಪ್ರವೀಣ್‌ ನೆಟ್ಟಾರು(Praveen Nettar)ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಿರಾಕರಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಎಚ್‌.ಬಿ. ಪ್ರಭಾಕರ್‌ ಶಾಸ್ತ್ರಿ, ನ್ಯಾ. ಅನಿಲ್‌ ಕೆ.ಕಟ್ಟಿ ಅವರಿದ್ದ ವಿಭಾಗೀಯ ಪೀಠವು, ಆತನ ಹತ್ಯೆ ಸಂಬಂಧ ಸಂಚಿನಲ್ಲಿ‌ ಆರೋಪಿಗಳು ಭಾಗಿಯಾದ ಆರೋಪವಿದೆ ಹೀಗಾಗಿ  ಕೆ.ಇಸ್ಮಾಯಿಲ್‌ ಶಫಿ, (ಆರೋಪಿ 9), ಕೆ.ಮೊಹಮ್ಮದ್‌ ಇಕ್ಬಾಲ್‌ (ಆರೋಪಿ 10) ಹಾಗೂ ಎಂ.ಶಾಹೀದ್‌ (ಆರೋಪಿ 11) ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ ಎಂದು ಆದೇಶಿಸಿದೆ.

ಪ್ರವೀಣ್ ನೆಟ್ಟಾರು ಹತ್ಯೆ

2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು, ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು. ಇದರಿಂದ  ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಇದಾದ ಬಳಿಕ ದುಷ್ಕರ್ಮಿಗಳು ವಿವಿಧ ಕಡೆಗಳಿಗೆ ಪರಾರಿಯಾಗಿದ್ದರು.

ಇದನ್ನೂ ಓದಿ:ಪ್ರವೀಣ್‌ ನೆಟ್ಟಾರು ಪತ್ನಿ ನೌಕರಿ ರದ್ದು: ದಕ್ಷಿಣ ಕನ್ನಡ ಡಿಸಿ ಹೇಳಿದ್ದೇನು? ಬಿಜೆಪಿಗೆ ರೂಲ್ಸ್​ ಹೇಳಿಕೊಟ್ಟ ಕಾಂಗ್ರೆಸ್‌

ಬಳಿಕ ಈ ಹತ್ಯೆ ಪ್ರಕರಣ ಸಂಬಂಧ ತನಿಖೆ ಮುಂದುವರೆಸಿದ್ದ ಎನ್​ಐಎ ಅಧಿಕಾರಿಗಳ ತಂಡ ಪುತ್ತೂರು, ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಮನೆ, ಕೆಲ ಖಾಸಗಿ ಕಟ್ಟಡಗಳು ಸೇರಿ ಒಟ್ಟು 32 ಕಡೆಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಆರೋಪಿಗಳು ಮತ್ತು ಆರೋಪಿಗಳಿಗೆ  ಸಹಕರಿಸಿದವರ ವಿರುದ್ದ ವಿಚಾರಣೆ ಕೂಡ ನಡೆಯುತ್ತಿದ್ದು, ಎನ್​ಐಎ ಅಧಿಕಾರಿಗಳ ತಂಡಕ್ಕೆ ರಾಜ್ಯ ಪೊಲೀಸರು ಸಾಥ್ ನೀಡಿದ್ದರು. ಅಂದು ಈ ಹತ್ಯೆ ಇಡೀ ರಾಜ್ಯವನ್ನು ಬೆಚ್ಚಿಬಿಳಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
Loading...
Unable to load recommendations.
Follow Us