AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಅಭ್ಯರ್ಥಿ ಪದ್ಮನಾಭ ರೆಡ್ಡಿ ಸಹೋದರನ ಮನೆ ಮೇಲೆ ದಾಳಿ: ಇಬ್ಬರ ಬಂಧನ

ಬಿಜೆಪಿ ಅಭ್ಯರ್ಥಿ ಪದ್ಮನಾಭ ರೆಡ್ಡಿ ಅವರ ಸಹೋದರನ ನಿವಾಸದ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಪದ್ಮನಾಭ ರೆಡ್ಡಿ ಸಹೋದರನ ಮನೆ ಮೇಲೆ ದಾಳಿ: ಇಬ್ಬರ ಬಂಧನ
ಬಂಧಿತ ಆರೋಪಿಗಳು
ಗಂಗಾಧರ​ ಬ. ಸಾಬೋಜಿ
|

Updated on: May 15, 2023 | 5:35 PM

Share

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಪದ್ಮನಾಭ ರೆಡ್ಡಿ (Padmanabha Reddy) ಅವರ ಸಹೋದರನ ನಿವಾಸದ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಮುಬಾರಕ್ ಮತ್ತು ಹಫೀಜ್​ ಬಂಧಿತ ಆರೋಪಿಗಳು. ಪದ್ಮನಾಭ ರೆಡ್ಡಿ ಅವರ ಸಹೋದರ ಅನಿಲ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳಿಗೆ ಬೆಂಕಿ ಹಚ್ಚಿ ಅನಿಲ್ ಅವರ ಮಗನ ಮೇಲೆ ಹಲ್ಲೆ ನಡೆಸಿದ್ದರು. ಮತ ಎಣಿಕೆ ದಿನವಾದ ಮೇ 13ರ ಮಧ್ಯಾಹ್ನ ಈ ಘಟನೆ ನಡೆದಿತ್ತು.

ಆರೋಪಿಗಳ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆ ನಡೆಯುವ ಮೊದಲು ಆರೋಪಿಗಳು ಬಾಟಲಿಯಲ್ಲಿ ಪೆಟ್ರೋಲ್ ಸಾಗಿಸುತ್ತಿರುವುದು ಕಂಡುಬಂದಿದೆ. ಸದ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Gadag: 2 ಬೈಕ್​ಗೆ ಕಾರು ಡಿಕ್ಕಿ: ಬೈಕ್​ನಲ್ಲಿ ತೆರಳುತ್ತಿದ್ದ ಮೂವರು ಸಾವು

ಬಿಜೆಪಿ ಮುಖಂಡನ ಮೇಲೆ ಹಲ್ಲೆ

ಕಾರವಾರ: ಭಟ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್​ ಗೆಲುವು ಸಾಧಿಸುತ್ತಿದ್ದಂತೆ, ಕೇಸರಿ ಧ್ವಜದ ಪಕ್ಕ ಮುಸ್ಲಿಂ ಧ್ವಜ ಹಾರಾಟ ನಡೆಸಲಾಯಿತು. ಇದೀಗ ಬಿಜೆಪಿ ಮುಖಂಡನ ಮೇಲೆ ಹಲ್ಲೆ ನಡೆಸಲಾಗಿದೆ. ಉತ್ತರಕನ್ನಡ‌ ಜಿಲ್ಲೆಯ ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸುತ್ತಿದ್ದಂತೇ ಬಿಜೆಪಿ ಮುಖಂಡನ ಮನೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.

ಬಿಜೆಪಿ ಮುಖಂಡನ ಮನೆಗೆ ನುಗ್ಗಿದ ಸುಮಾರು 15 ಮಂದಿ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದು, ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಟ್ಕಳ ಮೂಡಶಿರಾಲಿಯ ರಾಮಚಂದ್ರ ನಾಯ್ಕ್, ಹಳೇಕೋಟೆ ಹನುಮಂತ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾಗಿದ್ದು, ಇವರ ಪತ್ನಿ, ಮಕ್ಕಳನ್ನು ದೂಡಿ ರಾಮಚಂದ್ರ ನಾಯ್ಕ್ ಹಾಗೂ ಸಂಬಂಧಿಕ ಯುವಕರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ‌ ನಡೆಸಿದ್ದಾರೆ.

ಇದನ್ನೂ ಓದಿ: ಆಪರೇಶನ್​ ಸಮುದ್ರಗುಪ್ತ: 12000 ಕೋಟಿ ಮೌಲ್ಯದ ಡ್ರಗ್ಸ್​ ಸೀಜ್​​, ಆರೋಪಿಗಳನ್ನು ಗೌಪ್ಯವಾಗಿಟ್ಟ NCB

ಮಣಿಪಾಲದ ಹೆಸರಾಂತ ಬಾರ್​ನಲ್ಲಿ ಮಾರಾಮಾರಿ

ಉಡುಪಿ: ಮಣಿಪಾಲದ ಹೆಸರಾಂತ ಬ್ಯಾಕಸ್ ಇನ್ ಬಾರ್​​ನಲ್ಲಿ ಎರಡು ತಂಡಗಳ ನಡುವೆ ಮಾರಾಮಾರಿ ನಡೆದಿರುವಂತಹ ಘಟನೆ ನಡೆದಿದೆ. ಚುನಾವಣೆ ಮತ ಎಣಿಕೆ ಹಿನ್ನಲೆಯಲ್ಲಿ ನಿನ್ನೆಯವರೆಗೂ ಬಾರ್​ ಬಂದ್ ಆಗಿತ್ತು. ಇಂದು ನಿತ್ಯ ವ್ಯವಹಾರದ ನಿಮಿತ್ತ ಬಾರ್ ತೆರೆಯಲು ಅವಕಾಶ ನೀಡಲಾಗಿತ್ತು. ಸಂಜೆ ವೇಳೆಗೆ ಬಾರ್ ಗೆ ಆಗಮಿಸಿದ ಎರಡು ತಂಡಗಳ ನಡುವೆ ವಾದ-ವಿವಾದ ಉಂಟಾಗಿದ್ದು, ವಾಗ್ವಾದ ಜೋರಾದ ಬಳಿಕ ಇತ್ತಂಡಗಳ ನಡುವೆ ಮಾರಾಮಾರಿ ನಡೆದಿದೆ. ಸದ್ಯ ಬಾರ್ ಗಲಾಟೆಯ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.