ಹಾನಗಲ್- ಸಿಂದಗಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳಿಬ್ಬರೂ ಹೆಚ್ಚು ಮತಗಳಿಂದ ಜಯ ಗಳಿಸ್ತಾರೆ -ಕರ್ನಾಟಕ ಉಸ್ತುವಾರಿ ನಾಯಕ ಅರುಣ್ ಸಿಂಗ್

| Updated By: ಆಯೇಷಾ ಬಾನು

Updated on: Oct 27, 2021 | 11:06 AM

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸುತ್ತಲೇ ಕೆಲವು ಜನಪರ ಯೋಜನೆಗಳನ್ನು ಘೋಷಿಸುವ ಮೂಲಕ ತಾವು ಸಮಗ್ರ ಅಭಿವೃದ್ಧಿ ಪರ ಚಿಂತನೆಯುಳ್ಳ ನೇತಾರ ಎನ್ನುವುದನ್ನು ಸಾಬೀತು ಮಾಡಿದ್ದಾರೆ. -ಕರ್ನಾಟಕ ಉಸ್ತುವಾರಿ ನಾಯಕ ಅರುಣ್ ಸಿಂಗ್

ಹಾನಗಲ್- ಸಿಂದಗಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳಿಬ್ಬರೂ ಹೆಚ್ಚು ಮತಗಳಿಂದ ಜಯ ಗಳಿಸ್ತಾರೆ -ಕರ್ನಾಟಕ ಉಸ್ತುವಾರಿ ನಾಯಕ ಅರುಣ್ ಸಿಂಗ್
ಅರುಣ್ ಸಿಂಗ್ (ಸಂಗ್ರಹ ಚಿತ್ರ)
Follow us on

ಬೆಂಗಳೂರು: ಅಕ್ಟೋಬರ್ 30ರಂದು ಹಾನಗಲ್, ಸಿಂದಗಿ ಕ್ಷೇತ್ರಗಳ ಉಪಚುನಾವಣೆ ನಡೆಯುವ ಹಿನ್ನೆಲೆ ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ಕೊನೆಯ ದಿನ. ಆದ್ರೆ ಮನೆ ಮನೆಗೆ ತೆರಳಿ ಪ್ರಚಾರ ಮಾಡಲು ಯಾವುದೇ ಅಡ್ಡಿ ಇಲ್ಲ. ಗಮನದಲ್ಲಿಡಬೇಕಾದ ಅಂಶವೆಂದರೆ ಪ್ರಚಾರದಲ್ಲಿ 5ಕ್ಕಿಂತ ಹೆಚ್ಚು ಜನ ಒಂದು ಗುಂಪಿನಲ್ಲಿ ಇರುವಂತಿಲ್ಲ. ಸದ್ಯ ಹಾನಗಲ್ ಮತ್ತು ಸಿಂದಗಿ ಉಪಚುನಾವಣೆ ಹಿನ್ನೆಲೆ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಹಾನಗಲ್ ಮತ್ತು ಸಿಂದಗಿ ಉಪಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಅತ್ಯಧಿಕ ಮತಗಳಿಂದ ಜಯ ಗಳಿಸುತ್ತಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸುತ್ತಲೇ ಕೆಲವು ಜನಪರ ಯೋಜನೆಗಳನ್ನು ಘೋಷಿಸುವ ಮೂಲಕ ತಾವು ಸಮಗ್ರ ಅಭಿವೃದ್ಧಿ ಪರ ಚಿಂತನೆಯುಳ್ಳ ನೇತಾರ ಎನ್ನುವುದನ್ನು ಸಾಬೀತು ಮಾಡಿದ್ದಾರೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರ ಪಾರದರ್ಶಕ ಆಡಳಿತ ಕೂಡ ರಾಜ್ಯದ ಜನರಲ್ಲಿ ಬಿಜೆಪಿ ಕುರಿತು ಸದಭಿಪ್ರಾಯ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಉಪಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ಆಶೀರ್ವಾದ ಮಾಡುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಉಪಚುನಾವಣೆಯಲ್ಲಿ ಗೆಲ್ಲುವ ಭರವಸೆಯನ್ನು ಅರುಣ್ ಸಿಂಗ್ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉಪಚುನಾವಣೆ ​ ಪ್ರಚಾರ: ಆಸಕ್ತಿ ತೋರದ ಸಚಿವ ನಿರಾಣಿ! ಸಿಎಂ ಬೊಮ್ಮಾಯಿ ಸುಸ್ತು, ಮತದಾರರಿಗೆ ತಲುಪಿದ ಸಂದೇಶ ಏನು?