‘ಕೈ’ ಗೆ ಬಂದ ತುತ್ತು ಬಾಯಿಗೆ ಬರಲಿಲ್ಲ! ಕೊನೆಗೂ ಜಯನಗರ ಕ್ಷೇತ್ರದ ಫಲಿತಾಂಶ ಪ್ರಕಟ, ಬಿಜೆಪಿಗೆ ಗೆಲುವು – ನಡುರಾತ್ರಿ ಕಣ್ಣೀರು ಹಾಕಿದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ

Jayanagar Election Result: ಬಾಯಿಗೆ ಬಂದ ತುತ್ತು 'ಕೈ' ಗೆ ಬರಲಿಲ್ಲ! ಕೊನೆಗೂ ಜಯನಗರ ಕ್ಷೇತ್ರದ ಫಲಿತಾಂಶ ಪ್ರಕಟ, ಬಿಜೆಪಿಗೆ ಗೆಲುವು - ನಡುರಾತ್ರಿ ಕಣ್ಣೀರು ಹಾಕಿದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ

'ಕೈ' ಗೆ ಬಂದ ತುತ್ತು ಬಾಯಿಗೆ ಬರಲಿಲ್ಲ! ಕೊನೆಗೂ ಜಯನಗರ ಕ್ಷೇತ್ರದ ಫಲಿತಾಂಶ ಪ್ರಕಟ, ಬಿಜೆಪಿಗೆ ಗೆಲುವು - ನಡುರಾತ್ರಿ ಕಣ್ಣೀರು ಹಾಕಿದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ
ಜಯನಗರ ಕೊನೆಗೂ ಸಿ.ಕೆ.ರಾಮಮೂರ್ತಿಗೆ ಗೆಲುವು - ನಡುರಾತ್ರಿ ಕಣ್ಣೀರು ಹಾಕಿದ ಸೋತ ಅಭ್ಯರ್ಥಿ ಸೌಮ್ಯಾ ರೆಡ್ಡಿ
Follow us
|

Updated on:May 14, 2023 | 5:26 AM

ಬೆಂಗಳೂರು: ತೀವ್ರ ಕುತೂಹಲ ಮತ್ತು ಆತಂಕದ ಗೂಡಾದ ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶವನ್ನು (Jayanagar Election Result) ಅಳೆದೂ ಸುರಿದು ಕೇಂದ್ರ ಚುನಾವಣಾ ಆಯೋಗ ಅಂತಿಮವಾಗಿ ಪ್ರಕಟಿಸಿದೆ. ನಾಲ್ಕು ಬಾರಿ ಮತ್ತೆ ಮತ್ತೆ ಎಣಿಸಿದರೂ 16 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಗೆ ನಿಚ್ಚಳ ಗೆಲುವು ಎಂದು ಚುನಾವಣಾ ಆಯೋಗ ಸಾರಿದೆ. ಬಿಜೆಪಿ ಅಭ್ಯರ್ಥಿ ಸಿ.ಕೆ.ರಾಮೂರ್ತಿಗೆ (BJP CK Ramamurthy) 57,797 ಮತಗಳು ಮತ್ತು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿಗೆ 57,781 ಮತಗಳು ಎಂದು ಚುನಾವಣಾಧಿಕಾರಿಗಳಿಂದ ಜಯನಗರ ಕ್ಷೇತ್ರದ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ‘ಕೈ’ ಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಯಿತಲ್ಲ ಎಂದು ಜಯನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ (Sowmya Reddy) ನಡುರಾತ್ರಿ ಕಣ್ಣೀರು ಹಾಕಿದ್ದಾರೆ. ಮೊದಲ ಸುತ್ತಿನಲ್ಲಿ 116 ಮತಗಳಿಂದ ಗೆದ್ದುಬೀಗಿದ್ದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಆ ನಂತರ ಮರು ಮರು ಎಣಿಕೆಯಾದಾಗ ಫಲಿತಾಂಶ ಕಾಂಗ್ರೆಸ್​ನ ‘ಕೈ’ ಚೆಲ್ಲಿತ್ತು. ವಿಜಯ ಲಕ್ಷ್ಮಿ ಬಿಜೆಪಿ ಅಭ್ಯರ್ಥಿ ಸಿ.ಕೆ.ರಾಮಮೂರ್ತಿ ಅವರ ಕೊರಳಿಗೆ ಜಯದ ಹಾರ ಹಾಕಿದ್ದಳು.

ಇನ್ನು, ಜಯನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು ಎಂದು ಅಂತಿಮವಾಗಿ ಅಧಿಕೃತ ಘೋಷಣೆಯಾಗುತ್ತಿದ್ದಂತೆ ಮೊದಲ ಬಾರಿ ಮತ ಎಣಿಕೆಯಲ್ಲಿ ಗೆಲುವಿನ ನಗೆ ಬೀರಿದ್ದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಮತ ಕೇಂದ್ರದ ಬಳಿ ಕಣ್ಣೀರು ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಇಂದು ಭಾನುವಾರವೇ ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶ ವಿಚಾರವಾಗಿ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಸೌಮ್ಯಾರೆಡ್ಡಿ ಘೋಷಿಸಿದರು. ಈ ಇಡೀ ಪ್ರಹಸನಕ್ಕೆ ಜಯನಗರದ ಪಕ್ಕದ ಅಸೆಂಬ್ಲಿ ಕ್ಷೇತ್ರ ಬಿಟಿಎಂ ಲೇಔಟಿನಿಂದ 8ನೇ ಬಾರಿಗೆ ಸತತವಾಗಿ ಗೆಲುವು ಸಾಧಿಸಿದ ಸೌಮ್ಯಾ ರಡ್ಡಿ ಅವರ ಅಪ್ಪ ರಾಮಲಿಂಗಾರೆಡ್ಡಿ ಸಾಕ್ಷಿಯಾದರು.

ಮೊದಲ ಬಾರಿ ಮತ ಎಣಿಕೆಯಲ್ಲಿ ನನಗೆ ಗೆಲುವಾಗಿತ್ತು. ತೇಜಸ್ವಿ‌ ಸೂರ್ಯ, ಅಶೋಕ್ ಅಕ್ರಮವಾಗಿ ಮತ ಎಣಿಕೆ ಕೊಠಡಿಗೆ ಎಂಟ್ರಿ ಕೊಟ್ಟಿದ್ದರು. ಅಕ್ರಮವಾಗಿ ಬಂದು ಬಿಜೆಪಿ ಅಭ್ಯರ್ಥಿ ಗೆಲ್ಲುವಂತೆ ಮಾಡಿದ್ದಾರೆಂದು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಜಯನಗರ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಸೌಮ್ಯಾ ರೆಡ್ಡಿ ಹೇಳಿದ್ದಾರೆ.

ಜಯನಗರ ಅಸೆಂಬ್ಲಿ ಕ್ಷೇತ್ರದಲ್ಲಿ ಒಟ್ಟು 2,09,942 ಮತದಾರರು ಇದ್ದರು. 105582 ಮಂದಿ ಪುರುಷರು, 1,04,345 ಮಹಿಳೆಯರು ಇದ್ದಾರೆ. ಕಣದಲ್ಲಿ 15  ಮಂದಿ ಅಭ್ಯರ್ಥಿಗಳು ಇದ್ದರು. ಶೇ. 53.72ರಷ್ಟು ಮತದಾನವಾಗಿತ್ತು.

ಕಾಂಗ್ರೆಸ್‌ಗೆ ಪ್ರಚಂಡ ಬಹುಮತ: ಕೇಂದ್ರ ಚುನಾವಣಾ ಆಯೋಗದಿಂದ ಅಂತಿಮ ಫಲಿತಾಂಶ ಪ್ರಕಟ

ಕರ್ನಾಟಕ ರಾಜ್ಯದಲ್ಲಿ 224 ಸ್ಥಾನಗಳಿಗೆ ನಡೆದ ವಿಧಾನಸಭಾ ಚುನಾವಣೆಯ ಅಂತಿಮ ಫಲಿತಾಂಶವನ್ನು ಕೇಂದ್ರ ಚುನಾವಣಾ ಆಯೋಗ ಅಂತಿಮವಾಗಿ ಪ್ರಕಟಿಸಿದೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಪ್ರಚಂಡ ಬಹುಮತ ಗಳಿಸಿದೆ. 224 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ 135 ಕ್ಷೇತ್ರಗಳಲ್ಲಿ ಭರ್ಜರಿ ಜಯ ದಕ್ಕಿದೆ. ಕೇವಲ 66 ಕ್ಷೇತ್ರಗಳಲ್ಲಿ ಮಾತ್ರ ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ ಗೆಲುವು ಪಡೆದಿದ್ದು, ಒಟ್ಟಾರೆ ಬಿಜೆಪಿ ಹೀನಾಯ ಸೋಲುನ ಅನುಭವಿಸಿದೆ.

ಇನ್ನು ಕಿಂಗ್​​ ಮೇಕರ್​ ಆಗಿ ಅಧಿಕಾರದ ಆಕನಸುನ ಕಾಣುತ್ತಿದ್ದ ಜಾತ್ಯತೀತ ಜನತಾದಳ ಜೆಡಿಎಸ್​​ ಪಕ್ಷ 19 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. KRPP 1 ಕ್ಷೇತ್ರ (ಗಂಗಾವತಿಯಲ್ಲಿ ಜನಾರ್ದನ ರೆಡ್ಡಿ), ಸರ್ವೋದಯ ಕರ್ನಾಟಕ ಪಕ್ಷ 1 ಕ್ಷೇತ್ರದಲ್ಲಿ ಜಯ ಪಡೆದಿದೆ. ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷೇತರ ಅಭ್ಯರ್ಥಿಗಳಿಗೆ ಗೆಲುವು ಸಿಕ್ಕಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 5:05 am, Sun, 14 May 23