BS Yediyurappa Press Meet: ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಯಡಿಯೂರಪ್ಪ ದಿಢೀರ್ ಸುದ್ದಿಗೋಷ್ಠಿ, ಇಲ್ಲಿದೆ ಮುಖ್ಯಾಂಶಗಳು

|

Updated on: Mar 30, 2023 | 12:27 PM

ಬಿಎಸ್ ಯಡಿಯೂರಪ್ಪ ಸುದ್ದಿಗೋಷ್ಠಿ ಮುಖ್ಯಾಂಶ: ಬಿಎಸ್​ ಯಡಿಯೂರಪ್ಪ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

BS Yediyurappa Press Meet:  ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಯಡಿಯೂರಪ್ಪ ದಿಢೀರ್ ಸುದ್ದಿಗೋಷ್ಠಿ, ಇಲ್ಲಿದೆ ಮುಖ್ಯಾಂಶಗಳು
ಬಿಎಸ್​ ಯಡಿಯೂರಪ್ಪ
Follow us on

ಬೆಂಗಳೂರು: ಕರ್ನಾಟಕ ವಿಧಾನ ಸಭಾ ಚುನಾವಣೆ(Karnataka Assembly Elections 2023) ದಿನಾಂಕ ಘೋಷಣೆ ಬೆನ್ನಲ್ಲೆ ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ(BS Yediyurappa) ಸುದ್ದಿಗೋಷ್ಠಿ ನಡೆಸಿದ್ದು ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ನಾವು ಸರ್ಕಾರ ರಚಿಸುತ್ತೇವೆ. ರಾಜ್ಯದಲ್ಲಿ ನಾಲ್ಕು ತಂಡಗಳಾಗಿ ವಿಜಯ ಸಂಕಲ್ಪ ಯಾತ್ರೆ ಮಾಡಿದ್ದೇವೆ. ವಿಜಯ ಸಂಕಲ್ಪ ಯಾತ್ರೆಗೆ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ ಎಂದರು.

ಕಾಂಗ್ರೆಸ್​ ಪಕ್ಷದಲ್ಲಿ ಸಿಎಂ ಹುದ್ದೆಗಾಗಿ ಹಗಲುಗನಸು ಕಾಣುತ್ತಿದ್ದಾರೆ

ಶೀಘ್ರದಲ್ಲೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಆಗಲಿದೆ. ಹೈಕಮಾಂಡ್ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ. ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಾಯಕ ಇಲ್ಲ. ಪ್ರಧಾನಮಂತ್ರಿ ಮೋದಿ, ಅಮಿತ್​ ಶಾ ಅವರಿಗೆ ಜನಬೆಂಬಲ ಸಿಗುತ್ತಿದೆ. ಶಿವಮೊಗ್ಗ ಏರ್​ಪೋರ್ಟ್​ ಉದ್ಘಾಟನೆ ವೇಳೆ 2 ಲಕ್ಷಕ್ಕೂ ಹೆಚ್ಚು ಜನ ಭಾಗಿಯಾಗಿದ್ದರು. ಬಿಜೆಪಿಯ ಜನಬೆಂಬಲ ನೋಡಿ ಕಾಂಗ್ರೆಸ್​ನವರು ದಿಗ್ಭ್ರಾಂತರಾಗಿದ್ದಾರೆ. ಸಿಎಂ ಬೊಮ್ಮಾಯಿ ಎಲ್ಲಾ ವರ್ಗದವರಿಗೂ ನ್ಯಾಯ ಒದಗಿಸಿದ್ದಾರೆ. ರಾಜ್ಯದ ಜನರಿಗಾಗಿ ನಾನು ಹಲವು ಕಾರ್ಯಕ್ರಮ ಜಾರಿಗೆ ತಂದಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ಸಿಕ್ಕಿದಷ್ಟೇ ಬೆಂಬಲ ಈಗಲೂ ಸಿಗಲಿದೆ. ಮೋದಿ, ಅಮಿತ್ ಶಾ ಇನ್ನೂ 3-4 ಬಾರಿ ರಾಜ್ಯಕ್ಕೆ ಬರಲಿದ್ದಾರೆ. ಪ್ರಧಾನಿ ಮೋದಿಯವರಿಗೆ ರಾಹುಲ್ ಗಾಂಧಿ ಸಮನಾಗಲು ಸಾಧ್ಯವಿಲ್ಲ. ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್​ ಇಲ್ಲಸಲ್ಲದ ಆರೋಪ ಮಾಡ್ತಿದೆ. ಕಾಂಗ್ರೆಸ್ ಆರೋಪಗಳನ್ನು ರಾಜ್ಯದ ಜನ ನಂಬುವುದಿಲ್ಲ. ಕಾಂಗ್ರೆಸ್​ ಪಕ್ಷದಲ್ಲಿ ಸಿಎಂ ಹುದ್ದೆಗಾಗಿ ಹಗಲುಗನಸು ಕಾಣುತ್ತಿದ್ದಾರೆ. ಅದು ಕೇವಲ ತಿರುಕನ ಕನಸಾಗಲಿದೆ. ಕಾಂಗ್ರೆಸ್ ಪಕ್ಷ 70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಯಡಿಯೂರಪ್ಪ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು.

ಇದನ್ನೂ ಓದಿ: ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪ ನೀಡಿದ ಸೀರೆಗಳಿಗೆ ಬೆಂಕಿ ಇಟ್ಟ ಮಹಿಳೆಯರು

ಎರಡ್ಮೂರು ದಿನಗಳಲ್ಲಿ ನಾನು ರಾಜ್ಯ ಪ್ರವಾಸ ಆರಂಭಿಸುತ್ತೇನೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ. 130 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ. ಮೀಸಲಾತಿ ವಿಚಾರದಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡಿಲ್ಲ. EWS ಅಡಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸಲಾಗಿದೆ. ಮೀಸಲಾತಿ ವಿಚಾರದಲ್ಲಿ ಯಾರಿಗೂ ಕೂಡ ಅನ್ಯಾಯ ಮಾಡಿಲ್ಲ. ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸಲಾಗಿದೆ. ಒಳಮೀಸಲಾತಿ ವಿಚಾರದಲ್ಲಿ ಬಂಜಾರ ಸಮುದಾಯ ತಪ್ಪು ಗ್ರಹಿಕೆಯಿಂದ ಕಲ್ಲುತೂರಾಟ ಪ್ರಕರಣ ನಡೆದಿದೆ. ಬಂಜಾರ ಸಮುದಾಯವನ್ನು ಮನವೊಲಿಸುವ ಕೆಲಸ ಮಾಡುತ್ತೇನೆ ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:23 pm, Thu, 30 March 23