ನಕಲಿ ವೋಟರ್ ಐಡಿ: ಬೈರತಿ ಸುರೇಶ್ ಶಾಸಕ ಸ್ಥಾನ ಅನರ್ಹಗೊಳಿಸುವಂತೆ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರಿನ ಹೆಬ್ಬಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕನಕ ನಗರದಲ್ಲಿ ಪತ್ತೆಯಾದ ನಕಲಿ ವೋಟರ್​​​ ಐಡಿ ಪತ್ತೆ ಪ್ರಕರಣ ಸಂಬಂಧ ಇಂದು ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಸಚಿವ ಭೈರತಿ ಸುರೇಶ್ ಶಾಸಕ ಸ್ಥಾನದಿಂದ ಅನರ್ಹತೆಗೆ ಆಗ್ರಹಿಸಿ ರಾಜಾಜಿನಗರ ಬಿಜೆಪಿ ಶಾಸಕ ಸುರೇಶ್ ಕುಮಾರ್ ನೇತೃತ್ವದಲ್ಲಿ ಚುನಾವಣಾಧಿಕಾರಿಗೆ ದೂರು ನೀಡಲಾಗಿದೆ.

ನಕಲಿ ವೋಟರ್ ಐಡಿ: ಬೈರತಿ ಸುರೇಶ್ ಶಾಸಕ ಸ್ಥಾನ ಅನರ್ಹಗೊಳಿಸುವಂತೆ ಆಯೋಗಕ್ಕೆ ಬಿಜೆಪಿ ದೂರು
ಬಿಜೆಪಿ
Follow us
ಕಿರಣ್​ ಹನಿಯಡ್ಕ
| Updated By: ಆಯೇಷಾ ಬಾನು

Updated on: Oct 26, 2023 | 3:25 PM

ಬೆಂಗಳೂರು, ಅ.26: ಹೆಬ್ಬಾಳ ಕ್ಷೇತ್ರದಲ್ಲಿ ನಕಲಿ ವೋಟರ್​​​ ಐಡಿ (Fake Voter ID Case) ಪತ್ತೆ ಪ್ರಕರಣ ಸಂಬಂಧ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಬಿಜೆಪಿ ನಿಯೋಗ ದೂರು ನೀಡಿದೆ. ಪ್ರಕರಣದ ಸೂಕ್ತ ತನಿಖೆ ಮತ್ತು ಸಚಿವ ಭೈರತಿ ಸುರೇಶ್ (Byrathi Suresh) ಶಾಸಕ ಸ್ಥಾನದಿಂದ ಅನರ್ಹತೆಗೆ ಆಗ್ರಹಿಸಿ ರಾಜಾಜಿನಗರ ಬಿಜೆಪಿ ಶಾಸಕ ಸುರೇಶ್ ಕುಮಾರ್ (Suresh Kumar) ನೇತೃತ್ವದಲ್ಲಿ ಚುನಾವಣಾಧಿಕಾರಿಗೆ ದೂರು ನೀಡಲಾಗಿದೆ. ನಿಯೋಗದಲ್ಲಿ ಬಿಜೆಪಿ ಎಂಎಲ್​ಸಿ ಛಲವಾದಿ ನಾರಾಯಣಸ್ವಾಮಿ, ಹೆಬ್ಬಾಳ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಕಟ್ಟಾ ಜಗದೀಶ್, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ಉಪಸ್ಥಿತರಿದ್ದರು.

ಈ ಪ್ರಕರಣವನ್ನು ಸಿಬಿಐ ಮತ್ತು ಎನ್ಐಎ ತನಿಖೆಗೆ ವಹಿಸಬೇಕು. ವಕಲಿ ಆಧಾರ್ ಕಾರ್ಡ್ ದೇಶದ ಭದ್ರತೆಗೆ ಅಪಾಯಕಾರಿಯಾಗಿದೆ. ಹಾಗಾಗಿ, ಪ್ರಕರಣವನ್ನು ಉನ್ನತ ತನಿಖೆಗೆ ವಹಿಸುವಂತೆ ಬಿಜೆಪಿ ಆಯೋಗ ಆರೋಪಿಸಿದೆ.

ಇದನ್ನೂ ಓದಿ: ನಕಲಿ ವೋಟರ್ ಐಡಿ: ಸಚಿವ ಭೈರತಿ ಸುರೇಶ್​​ ವಿರುದ್ಧ ಎನ್​ ರವಿಕುಮಾರ್​ ವಾಗ್ದಾಳಿ

ವೋಟರ್ ಐಡಿ, ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್​ನಂತಹ ಕೆಲವು ನಕಲಿ ದಾಖಲೆಗಳನ್ನು ಸೃಷ್ಟಿಸಿ ಅದನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದ್ದಾರೆ. ವಿಚಾರಣೆಗೆ ಒಳಪಟ್ಟ ಮೌನೇಶ್ ಕುಮಾರ್, ಭಗತ್ ಹಾಗೂ ರಾಘವೇಂದ್ರ ಮೂವರಲ್ಲಿ ಮೌನೇಶ್ ಕುಮಾರ್ ಹೆಬ್ಬಾಳ ಠಾಣಾ ವ್ಯಾಪ್ತಿಯ ಕನಕ ನಗರದಲ್ಲಿ ಎಂಎಸ್ಎಲ್ ಟೆಕ್ನೋ ಸೊಲ್ಯೂಷನ್ ಎಂಬ ಕಚೇರಿ ನಡೆಸುತ್ತಿದ್ದಾರೆ. ಜೊತೆಗೆ ಮೌನೇಶ್ ಸಚಿವ ಭೈರತಿ ಸುರೇಶ್ ಅವರಿಗೆ ಆಪ್ತ ಎಂದು ಹೇಳಲಾಗುತ್ತಿದೆ. ಬಿಜೆಪಿ ಈ ಹಿಂದೆ ಸಚಿವ ಭೈರತಿ ಸುರೇಶ್ ಹಾಗೂ ಮೌನೇಶ್ ಜೊತೆಗಿರುವ ಫೋಟೋಗಳನ್ನು ರಿಲೀಸ್ ಮಾಡಿ ಗಂಭೀರ ಆರೋಪ ಮಾಡಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ
ರೀಲ್ಸ್​​ ನೋಡುತ್ತಾ ಸರ್ಕಾರಿ ಬಸ್ ​ಚಲಾಯಿಸಿದ್ದ ಚಾಲಕ ಅಮಾನತು
ರೀಲ್ಸ್​​ ನೋಡುತ್ತಾ ಸರ್ಕಾರಿ ಬಸ್ ​ಚಲಾಯಿಸಿದ್ದ ಚಾಲಕ ಅಮಾನತು
ಪಿಡಿಓಗಳು ಕುಬೇರರು ಅನ್ನೋದನ್ನು ಸಾಬೀತು ಮಾಡಿರುವ ಹಿರೇಮಠ
ಪಿಡಿಓಗಳು ಕುಬೇರರು ಅನ್ನೋದನ್ನು ಸಾಬೀತು ಮಾಡಿರುವ ಹಿರೇಮಠ
ಸಂಸತ್ತಿನ ಬಜೆಟ್ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
ಸಂಸತ್ತಿನ ಬಜೆಟ್ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ದಾವಣಗೆರೆಯ ಈಜುಪಟು
ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ದಾವಣಗೆರೆಯ ಈಜುಪಟು
Budget Session 2025: ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಮಾತು
Budget Session 2025: ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಮಾತು
ನಮ್ಮ ಮನೆಯಲ್ಲಿ ನಾನು ಆಸ್ತಿಕ ಅದರೆ ನಮ್ಮ ತಂದೆ ನಾಸ್ತಿಕ: ಯತೀಂದ್ರ
ನಮ್ಮ ಮನೆಯಲ್ಲಿ ನಾನು ಆಸ್ತಿಕ ಅದರೆ ನಮ್ಮ ತಂದೆ ನಾಸ್ತಿಕ: ಯತೀಂದ್ರ
ಮನೆಯೊಡತಿ ಸಾವಿನ ಸುದ್ದಿ ತಿಳಿದು ಸಾಕು ನಾಯಿಯ ಮೂಕರೋಧನೆ
ಮನೆಯೊಡತಿ ಸಾವಿನ ಸುದ್ದಿ ತಿಳಿದು ಸಾಕು ನಾಯಿಯ ಮೂಕರೋಧನೆ
ಸಿದ್ದರಾಮಯ್ಯರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲು ಇಡಿ ಯತ್ನ: ಯತೀಂದ್ರ
ಸಿದ್ದರಾಮಯ್ಯರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲು ಇಡಿ ಯತ್ನ: ಯತೀಂದ್ರ