ಸರ್ಕಾರಿ ಭೂಮಿ ಡಿನೋಟಿಫಿಕೇಶನ್: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತರಿಗೆ ದೂರು

ಮೀಸಲು ಪ್ರದೇಶದಲ್ಲಿ ಯಾವುದೇ ನಿರ್ಮಾಣ ಕಾರ್ಯಗಳು ನಡೆಯುವುದು ಕಾನೂನು ಬಾಹಿರ ಚಟುವಟಿಕೆ ಎನಿಸಿಕೊಳ್ಳುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸರ್ಕಾರಿ ಭೂಮಿ ಡಿನೋಟಿಫಿಕೇಶನ್: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತರಿಗೆ ದೂರು
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 12, 2022 | 1:34 PM

ಬೆಂಗಳೂರು: ಸರ್ಕಾರಿ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramiah) ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶ್ಯಾಮ್​​​ ಭಟ್​ ವಿರುದ್ಧ ಲೋಕಾಯುಕ್ತರಿಗೆ  (Lokayukta) ಬಿಜೆಪಿ ದಕ್ಷಿಣ ಬೆಂಗಳೂರು ಘಟಕದ ಮುಖಂಡ ಎನ್.ಆರ್.ರಮೆಶ್ ದೂರು ನೀಡಿದ್ದಾರೆ. ಖಾಸಗಿ ಬಿಲ್ಡರ್​​​ ಅಶೋಕ್​ ಧಾರಿವಾಲ್ ಎಂಬುವವರಿಗೆ ಕಾನೂನುಬಾಹಿರವಾಗಿ ಭೂಮಿಯನ್ನು ಡಿ-ನೊಟಿಫೈ ಮಾಡಿಕೊಡಲಾಗಿದೆ. ಬೆಂಗಳೂರು ದಕ್ಷಿಣ ತಾಲ್ಲೂಕು ಕಸಬಾ ಹೋಬಳಿಯ ಸಿದ್ದಾಪುರದ ಉದ್ಯಾನವನ ಮತ್ತು ಸಾರ್ವಜನಿಕ ಬಳಕೆಗೆ ಮೀಸಲಾಗಿದ್ದ ಭೂಮಿಯನ್ನು ಅವರು ಖರೀದಿಸಿದ್ದರು ಎಂದು ಹೇಳಲಾಗಿದೆ.

ಸರ್ವೆ ನಂಬರ್ 27/1, 28/4, 28/5 ಮತ್ತು 28/6 ರಲ್ಲಿರುವ ಸುಮಾರು 2.39 ಎಕರೆ ಭೂಮಿಯನ್ನು ಡಿ-ನೋಟಿಫೈ ಮಾಡಲಾಗಿದೆ. ಈ ಭೂಮಿಯ ಮೌಲ್ಯವು ₹ 200 ಕೋಟಿ ಎಂದು ಅಂದಾಜಿಸಲಾಗಿದೆ. ಪ್ರಭಾವಿ ಬಿಲ್ಡರ್ ಒಬ್ಬರ ಹಣದ ಪ್ರಭಾವಕ್ಕೆ ಒಳಗಾಗಿ ಕಾನೂನುಬಾಹಿರವಾಗಿ ಸರ್ಕಾರಿ ಸ್ವತ್ತನ್ನು ರಿ-ಡೂ (Re-Do) ಎಂಬ ಹೆಸರಿನಲ್ಲಿ De-Notification ಮಾಡಲಾಗಿದೆ ಎಂದು ಗಂಭೀರ ಆರೋಪ ಮಾಡಲಾಗಿದೆ. ಈ ಸ್ವತ್ತನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮಾಸ್ಟರ್ ಪ್ಲಾನ್​ ಪ್ರಕಾರ ಉದ್ಯಾನವನ ಮತ್ತು ಸಾರ್ವಜನಿಕ ಬಳಕೆಯ ಜಾಗ ಎಂದು ಮೀಸಲಿಟ್ಟಿತ್ತು. ನರ್ಸರಿಗಳಿದ್ದ ಸ್ವತ್ತುಗಳನ್ನು ಉದ್ಯಾನವನ ಮತ್ತು ಸಾರ್ವಜನಿಕರ ಬಳಕೆಗೆಂದು ಮೀಸಲಿಡಲಾಗಿತ್ತು. ಇದನ್ನು ಅಶೋಕ್ ಧಾರಿವಾಲ್ ಎಂಬ ಖಾಸಗಿ ಬಿಲ್ಡರ್ ಕಾನೂನುಬಾಹಿರವಾಗಿ ಕ್ರಯಕ್ಕೆ ಪಡೆದಿರುತ್ತಾರೆ ಎಂದು ದೂರಿನಲ್ಲಿ ಆರೋಪ ಮಾಡಲಾಗಿದೆ.

ನಿಯಮಗಳ ಪ್ರಕಾರ ಈ ಮೀಸಲು ಪ್ರದೇಶದಲ್ಲಿ ಯಾವುದೇ ನಿರ್ಮಾಣ ಕಾರ್ಯಗಳು ನಡೆಯುವುದು (No Development Area) ಕಾನೂನು ಬಾಹಿರ ಚಟುವಟಿಕೆ ಎನಿಸಿಕೊಳ್ಳುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಬಿಜೆಪಿ ವಿರುದ್ಧ ಪೇಸಿಎಂ ಪೋಸ್ಟರ್ ಅಭಿಯಾನ ಆರಂಭಿಸಿದ್ದ ಕಾಂಗ್ರೆಸ್ ಪಕ್ಷದ ಬಗ್ಗೆ ಬಿಜೆಪಿಯಲ್ಲಿ ಆಕ್ರೋಶ ಮೂಡಿತ್ತು. ಪಿಎಸ್​ಐ ನೇಮಕಾತಿ ಹಗರಣ, ಕೆಪಿಎಸ್​ಸಿ ಹಗರಣಗಳನ್ನು ಪದೇಪದೆ ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್ ಪಕ್ಷವು ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡುವ ಮೂಲಕ ಬಿಜೆಪಿ ತನ್ನ ಬತ್ತಳಿಕೆಯಲ್ಲಿದ್ದ ಹಳೆಯ ಅಸ್ತ್ರವನ್ನು ಮತ್ತೆ ಪ್ರಯೋಗಿಸಿದೆ.

Published On - 1:34 pm, Wed, 12 October 22

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು