ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ: ಅರುಣ್ ಸಿಂಗ್, ಯಡಿಯೂರಪ್ಪ ಸೇರಿ ಹಿರಿಯ ನಾಯಕರು ಭಾಗಿ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Oct 03, 2021 | 2:48 PM

ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ಆರಂಭವಾಗಿದ್ದು, ಹಲವು ಹಿರಿಯ ನಾಯಕರು ಪಾಲ್ಗೊಂಡಿದ್ದಾರೆ

ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ: ಅರುಣ್ ಸಿಂಗ್, ಯಡಿಯೂರಪ್ಪ ಸೇರಿ ಹಿರಿಯ ನಾಯಕರು ಭಾಗಿ
ಬಿಜೆಪಿ ಕರ್ನಾಟಕ ರಾಜ್ಯ ಕಚೇರಿ
Follow us on

ಬೆಂಗಳೂರು: ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ಆರಂಭವಾಗಿದ್ದು, ಹಲವು ಹಿರಿಯ ನಾಯಕರು ಪಾಲ್ಗೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್​, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಗೋವಿಂದ ಕಾರಜೋಳ, ಶ್ರೀರಾಮುಲು, ಡಾ.ಅಶ್ವತ್ಥ್ ನಾರಾಯಣ, ಆರ್.ಅಶೋಕ್​, ಲಕ್ಷ್ಮಣ ಸವದಿ, ಮಾಜಿ ಮುಖ್ಯಮಂತ್ರಿಗಳಾದ ಸದಾನಂದಗೌಡ, ಜಗದೀಶ್ ಶೆಟ್ಟರ್​​, ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪಚುನಾವಣೆ ಇದೇ 30ರಂದು ನಡೆಯಲಿದೆ. ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮತ್ತು ಕಾರ್ಯತಂತ್ರ ರೂಪಿಸುವ ವಿಚಾರ ಸಭೆಯಲ್ಲಿ ಮುಖ್ಯವಾಗಿ ಪ್ರಸ್ತಾಪವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಸಭೆಗೂ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಅರುಣ್ ಸಿಂಗ್, ರಾಜ್ಯ ಸರ್ಕಾರದ ಕಾರ್ಯನಿರ್ವಹಣೆ ಬಗ್ಗೆ ಸಂತೃಪ್ತಿ ವ್ಯಕ್ತಪಡಿಸಿದ್ದರು. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ಸರ್ಕಾರದ ಯೋಜನೆಗಳನ್ನೇ ಜನರ ಮುಂದಿಟ್ಟು ಪ್ರಚಾರ ಮಾಡುತ್ತೇವೆ. ಮುಂದಿನ ಯೋಜನೆ, ಕಾರ್ಯಕ್ರಮಗಳ ಬಗ್ಗೆ ಹಾಗೂ ಬೂತ್ ಮಟ್ಟದಲ್ಲಿ ಪಕ್ಷವನ್ನು ಸದೃಢಗೊಳಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.

(BJP Core Committee Meeting Begins Arun Singh Yediyurappa Basavaraj Bommai in Discussion on Hanagal Sindagi By Election)

ಇದನ್ನೂ ಓದಿ: ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

ಇದನ್ನೂ ಓದಿ: ಬಿಜೆಪಿ ನಾಯಕ ಸಿ ಟಿ ರವಿ ಬಾಲಕಿಯರ ಹಾಸ್ಟೆಲ್​ನಲ್ಲಿನ ಶೌಚಾಲಯ ಸ್ವಚ್ಛಗೊಳಿಸಿದ್ದು ಅನುಕರಣೀಯ