AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಇಂದು ಸಂಜೆ ಬಿಜೆಪಿ ಕೋರ್ ಕಮಿಟಿ ಸಭೆ

ಬೆಂಗಳೂರಿನಲ್ಲಿ ಇಂದು ಸಂಜೆ ರಾಜ್ಯ ಬಿಜೆಪಿ ಕೋರ್​ ಕಮಿಟಿ ಸಭೆ ನಡೆಯಲಿದೆ. ಇಂದು ಸಂಜೆ 5 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದೆ. ಕರ್ನಾಟಕದ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ನೇತೃತ್ವದಲ್ಲಿ ಸಂಜೆಯ ಸಭೆ ನಡೆಯಲಿದೆ.

ಬೆಂಗಳೂರಿನಲ್ಲಿ ಇಂದು ಸಂಜೆ ಬಿಜೆಪಿ ಕೋರ್ ಕಮಿಟಿ ಸಭೆ
Radha Mohan Das Agarwal
ಕಿರಣ್​ ಹನಿಯಡ್ಕ
| Updated By: ಸುಷ್ಮಾ ಚಕ್ರೆ|

Updated on:Oct 12, 2025 | 9:15 AM

Share

ಬೆಂಗಳೂರು, ಅಕ್ಟೋಬರ್ 12: ಇಂದು ಸಂಜೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ (BJP Office) ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಕರ್ನಾಟಕದ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಈ ಸಭೆಯ ನೇತೃತ್ವ ವಹಿಸಲಿದ್ದಾರೆ. ಅತಿವೃಷ್ಟಿಯಿಂದ ಆಗಿರುವ ಬೆಳೆನಷ್ಟ, ಬೆಂಗಳೂರಿನ ರಸ್ತೆಗುಂಡಿ, ಸುರಂಗ ಮಾರ್ಗ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ (GBA) ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಇಂದು ಸಂಜೆ ನಡೆಯಲಿರುವ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಮಾಡುವ ಸಾಧ್ಯತೆಯಿದೆ.

ಇಂದು ಸಂಜೆ 5 ಗಂಟೆಗೆ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ಅಗರವಾಲ್ ಸಮ್ಮುಖದಲ್ಲಿ ಕೋರ್ ಕಮಿಟಿ ಸದಸ್ಯರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಡಿವಿ ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ಶಾಸಕ ಆರ್. ಅಶೋಕ್ ಮುಂತಾದವರು ಇಂದಿನ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರಕ್ಕೆ ಅವಮಾನವಾಗೋ ರೀತಿ ಮಾಡಲು ಬಿಜೆಪಿ ಮಾಸ್ಟರ್ ಪ್ಲಾನ್: ಕೋರ್ ಕಮಿಟಿಯಲ್ಲಿ ಸಿದ್ಧವಾಯ್ತು ರಣ ತಂತ್ರ

ಇತ್ತೀಚೆಗಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್‌ ನೇತೃತ್ವದ 2 ತಂಡಗಳು ಉತ್ತರ ಕರ್ನಾಟಕ ಭಾಗದಲ್ಲಿ ನೆರೆಬಾಧಿತ ಪ್ರದೇಶಗಳ ಪರಿಶೀಲನೆ ನಡೆಸಿತ್ತು. ಇದುವರೆಗೆ ಸರ್ಕಾರದಿಂದ ನೀಡಿರುವ ಪರಿಹಾರ ಹಾಗೂ ಜಂಟಿ ಸಮೀಕ್ಷೆ ಇತ್ಯಾದಿ ವಿಚಾರಗಳ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆಗಳಿವೆ.

ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ವಿರೋಧಿಸಿ ರಾಜಕೀಯ ಹೋರಾಟ ನಡೆಸುವ ಬಗ್ಗೆಯೂ ಬಿಜೆಪಿ ನಾಯಕರು ಚರ್ಚೆ ನಡೆಸುವ ಸಾಧ್ಯತೆಯಿದೆ. ಅತಿವೃಷ್ಟಿಯಿಂದ ಬಳಲುತ್ತಿರುವ ರೈತರಿಗೆ ಪರಿಹಾರಕ್ಕೆ ಒತ್ತಾಯಿಸಿ ಹೋರಾಟ ನಡೆಸುವ ಬಗ್ಗೆಯೂ ಚರ್ಚಿಸುವ ಸಾಧ್ಯತೆಯಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:14 am, Sun, 12 October 25