ಬಿಜೆಪಿ ರಾಜ್ಯ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ: ಯಾವೆಲ್ಲ ಪ್ರಮುಖ ವಿಷಯಗಳು ಚರ್ಚೆ?

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಮಹತ್ವದ ಕೋರ್ ಕಮಿಟಿ ಸಭೆಯಲ್ಲಿ, ರಾಜ್ಯದ ಮಳೆ ಕೊರತೆ, ಪಿಂಚಣಿ ವಿವಾದ ಮತ್ತು ಮುಂಬರುವ ಉಪಚುನಾವಣೆ ಸೇರಿದಂತೆ ಸರ್ಕಾರದ ವಿರುದ್ಧ ಹಮ್ಮಿಕೊಳ್ಳಬೇಕಾದ ಹೋರಾಟಗಳ ಕುರಿತು ಚರ್ಚಿಸಲಾಗಿದೆ. ಕರ್ನಾಟಕದಲ್ಲಿ ಭೀಕರ ಬರವಿದ್ರೂ ಸರ್ಕಾರ ಕೈಕಟ್ಟಿಕುಳಿತಿದೆ. ಹೀಗಾಗಿ ಸದನವನ್ನ ರೈತರ ಧ್ವನಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದು ತೀರ್ಮಾನಿಸಲಾಗಿದೆ ಎನ್ನಲಾಗಿದೆ.

ಬಿಜೆಪಿ ರಾಜ್ಯ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ: ಯಾವೆಲ್ಲ ಪ್ರಮುಖ ವಿಷಯಗಳು ಚರ್ಚೆ?
ಬಿಜೆಪಿ ರಾಜ್ಯ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ
Image Credit source: BJP X Account
Edited By:

Updated on: Aug 02, 2026 | 12:45 PM

ಬೆಂಗಳೂರು, ಆಗಸ್ಟ್​​ 02: ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಹತ್ವದ ಕೋರ್ ಕಮಿಟಿ ಸಭೆ ನಡೆದಿದೆ. ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್, ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್​​. ಯಡಿಯೂರಪ್ಪ, ವಿಧಾನಪರಿಷತ್​ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಕಾರಜೋಳ, ಮಾಜಿ ಸಂಸದ ನಳಿನ್​ ಕುಮಾರ್​ ಸೇರಿ ಹಲವು ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದಾರೆ. ರಾಜ್ಯದಲ್ಲಿನ ಬರ ಪರಿಸ್ಥಿತಿ, ಮುಂಬರಲಿರುವ ಚುನಾವಣೆಗಳು ಸೇರಿ ಹಲವು ಪ್ರಮುಖ ವಿಚಾರಗಳನ್ನು ಈ ವೇಳೆ ಚರ್ಚಿಸಲಾಗಿದೆ.

ಸಿ.ಟಿ. ರವಿ ಹೇಳಿದ್ದೇನು?

CTRavi on BJP Meeting: ಬಿಜೆಪಿ ಕೋರ್ ಕಮಿಟಿ ಮೀಟಿಂಗ್ ಬಗ್ಗೆ ಪರಿಷತ್ ಸದಸ್ಯ ಸಿ.ಟಿ.ರವಿ ರಿಯಾಕ್ಷನ್ | #TV9D

ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ವಿಧಾನ ಪರಿಷತ್​​ ಸದಸ್ಯ ಸಿ.ಟಿ. ರವಿ, ಪರಿಷತ್ ಚುನಾವಣೆ, ಹಿರಿಯೂರು ಉಪ ಚುನಾವಣೆಯಲ್ಲಿ ಎನ್​​ಡಿಎ ಅಭ್ಯರ್ಥಿ ಗೆಲ್ಲಿಸುವ ಸಂಬಂಧ ಸಭೆಯಲ್ಲಿ ಚರ್ಚೆಯಾಗಿದೆ. ತಾಂತ್ರಿಕ ಕಾರಣ ಕೊಟ್ಟು 23 ಲಕ್ಷ ಜನರು ಪಿಂಚಣಿಯಿಂದ ವಂಚಿತರಾಗಿದ್ದಾರೆ. ಇದರಿಂದ ಅಸಹಾಯಕ ಅಂಗವಿಕಲರು, ವಿಧವೆಯರು, ವೃದ್ದರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನಾಲ್ಕು ತುತ್ತು ಅನ್ನ ತಿನ್ನುತ್ತಿದ್ದವರು ಅಸಹಾಯಕರಾಗಿರುವ ಬಗ್ಗೆ ಹೋರಾಟ ಮಾಡ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ‘ಸಂಪುಟ ವಿಸ್ತರಣೆ ಆಗೋವರೆಗೆ ಕಾದು ನೋಡಿ; ಕಾಂಗ್ರೆಸ್​ನ ಒಂದು ದಂಡೇ ಬಿಜೆಪಿ ಸೇರಲಿದೆ’: ಮುರುಗೇಶ್ ನಿರಾಣಿ

ಇನ್ನು, ಕರ್ನಾಟಕದಲ್ಲಿ ಭೀಕರ ಬರವಿದ್ರೂ ಸರ್ಕಾರ ಕೈಕಟ್ಟಿಕುಳಿತಿದೆ. ಹೀಗಾಗಿ ಸದನವನ್ನ ರೈತರ ಧ್ವನಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದು ಕೋರ್​​​ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಿರೋದಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಕೆಪಿಎಸ್ಸಿ ಯುವಕರಿಗೆ ಬಹಳ ದೊಡ್ಡ ಅನ್ಯಾಯ ಆಗುತ್ತಿದ್ದು, ವಿದ್ಯಾರ್ಥಿಗಳು ವರ್ಷಗಟ್ಟಲೆ ಶ್ರಮ‌ಪಟ್ಟರೂ ವ್ಯರ್ಥವಾಗ್ತಿದೆ. ಇದೆಲ್ಲವನ್ನೂ ಸದನದಲ್ಲಿ ಚರ್ಚೆ ಮಾಡ್ತೇವೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us