AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಮಾಜಿ ಮುಖಂಡನ ಪುತ್ರನಿಂದ ಯುವತಿಗೆ ದೋಖಾ ಕೇಸ್​: ಹೈಕೋರ್ಟ್​​ನಿಂದ ಮಹತ್ವದ ಆದೇಶ

ಬಿಜೆಪಿ ಮಾಜಿ ನಾಯಕನ ಪುತ್ರ ಕೃಷ್ಣ ಜೆ. ರಾವ್ ಯುವತಿಗೆ ವಂಚಿಸಿದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಯುವತಿ ಹಾಗೂ ಮಗುವಿನ ಭವಿಷ್ಯಕ್ಕಾಗಿ ಮುಂದಿನ ಆದೇಶದವರೆಗೆ ಕೃಷ್ಣ ಜೆ. ರಾವ್ ಮಾಸಿಕ 75,000 ರೂ. ಪಾವತಿಸುವಂತೆ ನ್ಯಾಯಾಲಯ ಸೂಚಿಸಿದೆ. ಪ್ರಕರಣ ರದ್ದು ಕೋರಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಕೇಸ್​​ಗೆ ಮಧ್ಯಂತರ ತಡೆ ನೀಡಿದೆ. 

ಬಿಜೆಪಿ ಮಾಜಿ ಮುಖಂಡನ ಪುತ್ರನಿಂದ ಯುವತಿಗೆ ದೋಖಾ ಕೇಸ್​: ಹೈಕೋರ್ಟ್​​ನಿಂದ ಮಹತ್ವದ ಆದೇಶ
ಹೈಕೋರ್ಟ್​​ನಿಂದ ಮಹತ್ವದ ಆದೇಶ
ರಮೇಶ್​ ಎಮ್​.
| Edited By: |

Updated on:Apr 24, 2026 | 1:04 PM

Share

ಬೆಂಗಳೂರು, ಏಪ್ರಿಲ್​​ 24: ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಮಗುವಿಗೆ ಜನ್ಮ ನೀಡಿದ ಬಳಿಕ ವಂಚಿಸಿದ್ದ ಪುತ್ತೂರಿನ ಬಿಜೆಪಿ ಮಾಜಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಮೇಲಿನ ಪ್ರಕರಣ ಸಂಬಂಧ ಹೈಕೋರ್ಟ್​​ ಮಹತ್ವದ ಆದೇಶ ನೀಡಿದೆ. ಪ್ರಕರಣ ರದ್ದು ಕೋರಿ ಕೃಷ್ಣ ಜೆ.ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಷರತ್ತಿನ ಮೇರೆಗೆ ಕೃಷ್ಣ ಜೆ.ರಾವ್ ವಿರುದ್ಧದ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ.

ಮಾಸಿಕ 75 ಸಾವಿರ ರೂ. ಪಾವತಿಸಲು ಆದೇಶ

ಆರೋಪಿಯ ದೈಹಿಕ ಸಂಪರ್ಕದಿಂದ ಯುವತಿಗೆ ಮಗುವಾಗಿದೆ. 10 ತಿಂಗಳ ಮಗು, ತಾಯಿಯನ್ನು ಅನಾಥವನ್ನಾಗಿಸುವುದು ಬೇಡ. ಹೀಗಾಗಿ ಮುಂದಿನ ಆದೇಶದವರೆಗೂ ಮಗು ಹಾಗೂ ತಾಯಿಗೆ ಮಾಸಿಕ 75 ಸಾವಿರ ರೂಪಾಯಿ ಪಾವತಿಸುವಂತೆ ಅರ್ಜಿದಾರ ಕೃಷ್ಣ ಜೆ. ರಾವ್​ಗೆ ಹೈಕೋರ್ಟ್ ಸೂಚನೆ ನೀಡಿದೆ. ಜೊತೆಗೆ ಸಂತ್ರಸ್ತೆ ಹಾಗೂ ಸಂಬಂಧಿಕರು ಮಾಧ್ಯಮಗಳಿಗೆ ಹೇಳಿಕೆ ನೀಡದಂತೆ ತಿಳಿಸಿದೆ.

ಇದನ್ನೂ ಓದಿ: ಬಿಜೆಪಿ ನಾಯಕನ ಪುತ್ರನಿಂದ ಯುವತಿಗೆ ದೋಖಾ; ಆರೋಪಿಯಿಂದಲೇ ಮಗುವಾಗಿರುವುದರಿಂದ ಮದ್ವೆಯಾಗುವುದೇ ಉತ್ತಮ ಎಂದ ಕೋರ್ಟ್

ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ ಕೃಷ್ಣ ಜೆ.ರಾವ್ ಪರ ವಾದ ಮಂಡಿಸಿದ್ದ ವಕೀಲ ಪಿ.ಪಿ.ಹೆಗ್ಡೆ, 7 ವರ್ಷಗಳ ಪ್ರೀತಿ ಇತ್ತು, ಕ್ರಿಮಿನಲ್ ಕೇಸ್ ನಿಂದಾಗಿ ರಾಜಿಯಾಗಿಲ್ಲ. ರಾಜಕೀಯ ವಿರೋಧಿಗಳು ಆರೋಪಿ ತಂದೆಯ ತೇಜೋವಧೆ ಮಾಡಿದ್ದಾರೆ. ಕ್ರಿಮಿನಲ್ ಕೇಸ್​​ನಲ್ಲೂ ಆರೋಪಿಗಳನ್ನಾಗಿಸಿದ್ದಾರೆ ಎಂದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಕೋರ್ಟ್, ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಮದುವೆಯಾಗುವುದೇ ಉತ್ತಮ. ಯುವತಿ ಮತ್ತು ಮಗುವನ್ನು ಅನಾಥವನ್ನಾಗಿಸುವುದು ಸರಿಯಲ್ಲ. ತಂದೆಯಾಗಿರುವುದರಿಂದ ಮಗುವಿನ ಆರೈಕೆ ಮಾಡುವುದು ಆರೋಪಿ ಕರ್ತವ್ಯ ಎಂದು ಅಭಿಪ್ರಾಯಪಟ್ಟಿತ್ತು. ಅಲ್ಲದೇ ಯುವತಿಗೆ ಮಾಸಿಕ 10 ಸಾವಿರ ಜೀವನಾಂಶ ನೀಡಲು ಸಿದ್ದರಿದ್ದಾರಾ ಎಂದು ಆರೋಪಿ ಪರ ವಕೀಲರಿಗೆ ಪ್ರಶ್ನಿಸಿದ್ದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ, ಇದಕ್ಕೆ ಅಭಿಪ್ರಾಯ ತಿಳಿಸುವಂತೆ ಸೂಚಿಸಿ ವಿಚಾರಣೆಯನ್ನು ಏಪ್ರಿಲ್ 24ಕ್ಕೆ ಅಂದರೆ ಇಂದಿಗೆ ಮುಂದೂಡಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:00 pm, Fri, 24 April 26

Follow Us
ರಮೇಶ್​ ಎಮ್​.
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ