AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಗೀತೆಗೆ ಅಪಮಾನಿಸಿದ ಆರೋಪ: ಸಾಹಿತಿ ಬರಗೂರು ರಾಮಚಂದ್ರಪ್ಪ ವಿರುದ್ಧ ಬೆಂಗಳೂರು ಕಮಿಷನರ್​ಗೆ ದೂರು ನೀಡಿದ ಬಿಜೆಪಿ

ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆಂದು ಆರೋಪಿಸಿ ಸಾಹಿತಿ ಬರಗೂರು ರಾಮಚಂದ್ರಪ್ಪ ವಿರುದ್ಧ ಬೆಂಗಳೂರು ನಗರ ಕಮಿಷನರ್​ ಪ್ರತಾಪ್ ರೆಡ್ಡಿ ಅವರಿಗೆ ಎಂಎಲ್​ಸಿಗಳಾದ ರವಿಕುಮಾರ್ , ಛಲವಾದಿ ನಾರಾಯಣಸ್ವಾಮಿ ದೂರು ನೀಡಿದ್ದಾರೆ.

ರಾಷ್ಟ್ರಗೀತೆಗೆ ಅಪಮಾನಿಸಿದ ಆರೋಪ: ಸಾಹಿತಿ ಬರಗೂರು ರಾಮಚಂದ್ರಪ್ಪ ವಿರುದ್ಧ ಬೆಂಗಳೂರು ಕಮಿಷನರ್​ಗೆ ದೂರು ನೀಡಿದ ಬಿಜೆಪಿ
ಸಾಹಿತಿ ಬರಗೂರು ರಾಮಚಂದ್ರಪ್ಪ
TV9 Web
| Updated By: ವಿವೇಕ ಬಿರಾದಾರ|

Updated on:Aug 29, 2022 | 5:27 PM

Share

ಬೆಂಗಳೂರು: ರಾಷ್ಟ್ರಗೀತೆಗೆ (National Anthem) ಅಪಮಾನ ಮಾಡಿದ್ದಾರೆಂದು ಆರೋಪಿಸಿ ಸಾಹಿತಿ ಬರಗೂರು ರಾಮಚಂದ್ರಪ್ಪ (Baraguru Ramachandrappa) ವಿರುದ್ಧ ಬೆಂಗಳೂರು (Bengaluru) ನಗರ ಕಮಿಷನರ್​ ಪ್ರತಾಪ್ ರೆಡ್ಡಿ ಅವರಿಗೆ ಎಂಎಲ್​ಸಿಗಳಾದ ರವಿಕುಮಾರ್ (Ravikumar), ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ದೂರು ನೀಡಿದ್ದಾರೆ.

ಭರತನಗರಿ ಎಂಬ ಕಾದಂಬರಿಯಲ್ಲಿ ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದಾರೆ. ಈ ಕುರಿತು ಬಿಜೆಪಿ ವಿಧಾನ​ ಪರಿಷತ್​ ಸದಸ್ಯ ರವಿಕುಮಾರ್ ಮಾತನಾಡಿ 2016ರಲ್ಲಿ ವಿಪಕ್ಷನಾಯಕ ಸಿದ್ಧರಾಮಯ್ಯ ಸಿಎಂ ಆಗಿದ್ದಾಗ ಬರಗೂರು ರಾಮಚಂದ್ರಪ್ಪ ಅಕಾಡೆಮಿ ಅಧ್ಯಕ್ಷರಾಗಿದ್ದರು.

ಆಗ ರಾಮಚಂದ್ರಪ್ಪ ಭರತನಗರಿ ಎಂಬ ಕಾದಂಬರಿ ಬರೆದಿದ್ದಾರೆ. ಅದರಲ್ಲಿ ರಾಷ್ಟ್ರಗೀತೆ ಬಗ್ಗೆ ಅತ್ಯಂತ ಅವಹೇಳನವಾಗಿ ಬರೆದಿದ್ದಾರೆ. ಭಾರತವನ್ನ ಜಡ ಅಂದಿದ್ದಾರೆ. ಅತ್ಯಂತ ಕೆಟ್ಟ ಶಬ್ಧಗಳನ್ನು ಬರೆದಿದ್ದಾರೆ. ರಾಷ್ಟ್ರಗೀತೆ, ರಾಷ್ಟ್ರಧ್ವಜದ ಬಗ್ಗೆ ಅಪಮಾನವಾದಾಗ ಸಹಿಸಲು ಸಾಧ್ಯವಿಲ್ಲ. ಇದು ಅತ್ಯಂತ ಅವಹೇಳನ ಹಾಗೂ ತಲೆ ತಗ್ಗಿಸುವಂತ ವಿಚಾರ ಎಂದರು.

ಹೇಳಿಕೇಳಿ ಸಿದ್ದರಾಮಯ್ಯನವರು ಅತಿಸೂಕ್ಷ್ಮ. ಅಂದು ಯಾಕೆ ಕ್ರಮ ಕೈಗೊಂಡಿಲ್ಲ, ಅಥವಾ ಹೋಗಲಿ ಬಿಡಿ ಅಂತಾ ಸುಮ್ಮನಾದರಾ? ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದೇವೆ. ಬರಗೂರು ರಾಮಚಂದ್ರಪ್ಪನವರ ಕಾದಂಬರಿ ಬ್ಯಾನ್ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:27 pm, Mon, 29 August 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​