ಮತದಾರರ ಮಾಹಿತಿ ಸೋರಿಕೆ ಪ್ರಕರಣ: ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಬಿಜೆಪಿ

ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ವಿವೇಕ್ ರೆಡ್ಡಿ ಮುಖ್ಯ ಚುನಾವಣಾಧಿಕಾರಿಯನ್ನು ಭೇಟಿ ಮಾಡಿ ದೂರು ಪತ್ರ ನೀಡಿದರು.

ಮತದಾರರ ಮಾಹಿತಿ ಸೋರಿಕೆ ಪ್ರಕರಣ: ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಬಿಜೆಪಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Nov 23, 2022 | 12:39 PM

ಬೆಂಗಳೂರು: ನಗರದಲ್ಲಿ ನಡೆದಿರುವ ಮತದಾರರ ಮಾಹಿತಿ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ. ನಗರದ ಶೇಷಾದ್ರಿ ರಸ್ತೆಯಲ್ಲಿರುವ ಶೇಷಾದ್ರಿ ರಸ್ತೆಯಲ್ಲಿರುವ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿದ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ವಿವೇಕ್ ರೆಡ್ಡಿ ಮುಖ್ಯ ಚುನಾವಣಾಧಿಕಾರಿಯನ್ನು ಭೇಟಿ ಮಾಡಿ ದೂರು ಪತ್ರ ನೀಡಿದರು. ‘ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು. ಬಿಜೆಪಿಯು ನಿನ್ನೆಯಷ್ಟೇ (ನ 22) ಕೇಂದ್ರ ಚುನಾವಣಾ ಆಯೋಗಕ್ಕೆ ಫ್ಯಾಕ್ಸ್ ಮೂಲಕ ದೂರು ಸಲ್ಲಿಸಿತ್ತು.

ಹುಬ್ಬಳ್ಳಿಯಲ್ಲಿಯೂ ಮತದಾರರ ಮಾಹಿತಿ ಸಂಗ್ರಹ

ಬೆಂಗಳೂರಿನಲ್ಲಿ ಚಿಲುಮೆ ಸಂಸ್ಥೆ ನಡೆಸಿರುವ ಅಕ್ರಮದಂಥದ್ದೇ ಮಾದರಿಯ ಅವ್ಯವಹಾರ ಹುಬ್ಬಳ್ಳಿಯಲ್ಲಿಯೂ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ಬೆಂಗಳೂರು ಮೂಲದ ಐಐಎಂಟಿ ಸಂಸ್ಥೆಯು ಧಾರವಾಡ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ 6 ತಿಂಗಳ ಹಿಂದೆಯೇ ಮಾಹಿತಿ ಸಂಗ್ರಹಿಸಲಾಗಿದೆ. ಈ ಕುರಿತು ಕಾಂಗ್ರೆಸ್ ಮಹಾನಗರ ಪಾಲಿಕೆ ಸದಸ್ಯರ ಕ್ಷೇತ್ರಗಳ ವ್ಯಾಪ್ತಿಯಲ್ಲಿಯೇ ಮತದಾರರ ಮಾಹಿತಿ ಸಂಗ್ರಹ ಮಾಡಲಾಗಿದೆ. ‘ಸ್ಮಾರ್ಟ್​ ಸಿಟಿ’ ವಿಭಾಗದಿಂದ ಸರ್ವೆಗೆ ಬಂದಿರುವುದಾಗಿ ತಂಡದ ಸದಸ್ಯರು ಹೇಳಿಕೊಂಡಿದ್ದರು. ಗಾರ್ಡನ್​ ರೀಸರ್ಚ್​​ ಸೊಸೈಟಿ ಕೇಳಿದ್ದ ಪಾಲಿಕೆ ಅನುಮತಿ ಪತ್ರಕ್ಕೆ ಆಯುಕ್ತರು ಕೇವಲ ಸ್ವೀಕೃತಿ ಪತ್ರ ಮಾತ್ರ ನೀಡಿದ್ದರು. ಅನುಮತಿ ಪತ್ರ ನೀಡಿರಲಿಲ್ಲ ಎಂದು ಸದಸ್ಯರು ವಿವರಿಸಿದ್ದಾರೆ.

ಕನಕಗಿರಿ ಕ್ಷೇತ್ರದಲ್ಲಿ ಮತದಾರರ ಸಂಖ್ಯೆ ಕುಸಿತ

ಕನಕಗಿರಿ ಕ್ಷೇತ್ರದಲ್ಲಿಯೂ ಸುಮಾರು 9 ಸಾವಿರ ಮತದಾರರ ಸಂಖ್ಯೆ ಕಡಿಮೆ ಆಗಿದೆ. ​ಬಿಜೆಪಿಯವರು ಸೋಲಿನ ಭೀತಿಯಿಂದ ಈ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ನಾವು ನಮ್ಮ ಕಾರ್ಯಕರ್ತರ ಮೂಲಕ ಬೂತ್ ಮಟ್ಟದಲ್ಲಿ ಮತದಾರರ ಪಟ್ಟಿಯನ್ನು ಪರಿಶೀಲಿಸುತ್ತಿದ್ದೇವೆ. ಎಸ್​ಸಿ, ಎಸ್​ಟಿ, ಒಬಿಸಿ ಮತಗಳನ್ನು ಟಾರ್ಗೆಟ್ ಮಾಡಿ ಬಿಜೆಪಿಯವರು ಆಟ ಆಡುತ್ತಿದ್ದಾರೆ. ಮತದಾರರ ಹಕ್ಕು ಕಸಿದುಕೊಳ್ಳುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಅವರು ತಿಳಿಸಿದರು.

ದಾವಣಗೆರೆಯಲ್ಲಿಯೂ ಅವ್ಯವಹಾರ

ಬೆಂಗಳೂರಿನಲ್ಲಿ ನಡೆದ ಅವ್ಯವಹಾರದ ಬಗ್ಗೆ ತಿಳಿದ ನಂತರ ದಾವಣಗೆರೆಯ ಮತದಾರರು ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ 1,718 ಸಾವಿರಾರು ಮಂದಿಯ ಹೆಸರು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಯಾವುದೇ ವ್ಯಕ್ತಿಯು ಮತದಾರರ ಪಟ್ಟಿಯಿಂದ ಹೆಸರು ತೆಗೆಸಲು ಫಾರ್ಮ್ ನಂಬರ್ 7 ಭರ್ತಿ ಮಾಡಬೇಕು. ಆದರೆ ಈ ಪ್ರಕ್ರಿಯೆಯೇ ನಡೆಯದೇ ಹೆಸರುಗಳನ್ನು ಕೈಬಿಡಲಾಗಿದೆ ಎಂದು ಕಾಂಗ್ರೆಸ್ ನಾಯಕರಾದ ಎ.ನಾಗರಾಜ್ ಹೇಳಿದ್ದಾರೆ.

Published On - 12:39 pm, Wed, 23 November 22

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ