ಬಿಜೆಪಿ ಸುಳ್ಳು ಹೇಳ್ಕೊಂಡು ಅಧಿಕಾರ ಮಾಡ್ತಿದೆ, ಚಿನ್ನವನ್ನೆಲ್ಲಾ ಬ್ಯಾಂಕ್ನಲ್ಲಿ ಇಟ್ಟು ಜನ ಜೀವನ ಮಾಡಬೇಕಿದೆ: ಸಿದ್ದರಾಮಯ್ಯ
ರಾಜ್ಯ ಸರ್ಕಾರ ಸೆಸ್ ಅನ್ನು ಕೂಡ ಕಡಿಮೆ ಮಾಡುತ್ತಿಲ್ಲ. ಸರ್ಕಾರ ಸುಳ್ಳು ಹೇಳಿಕೊಂಡು ಅಧಿಕಾರ ಮಾಡುತ್ತಿದೆ. ಇದರಿಂದ ಜನರು ಚಿನ್ನವನ್ನೆಲ್ಲಾ ಬ್ಯಾಂಕ್ನಲ್ಲಿ ಇಟ್ಟು ಜೀವನ ಮಾಡಬೇಕಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರು: ಬೆಲೆ ಏರಿಕೆ ವಿರೋಧಿಸಿ ಎತ್ತಿನ ಗಾಡಿ ಚಲೋ ಮಾಡಿದ್ದೆವು. ಆದರೆ ಸರ್ಕಾರ ಬೆಲೆ ಏರಿಕೆ ನಿಯಂತ್ರಣ ಮಾಡಲೇ ಇಲ್ಲ. ಇನ್ನು ಈ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದ್ದೆವು. ಆದರೆ ಸರ್ಕಾರದಿಂದ ಯಾವುದೇ ಉತ್ತರ ಬಂದಿಲ್ಲ. ಹೀಗಾಗಿ ಇಂದು ಮತ್ತೆ ಸೈಕಲ್ ಜಾಥಾ ಮಾಡುತ್ತಿದ್ದೇವೆ. ಸದನ ಮುಗಿದ ಬಳಿಕವೂ ಹೋರಾಟ ಮುಂದುವರಿಯುತ್ತದೆ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಸಬ್ಸಿಡಿ ಕೊಡ್ತಿದ್ದನ್ನು ಸರ್ಕಾರ ನಿಲ್ಲಿಸಿಬಿಟ್ಟಿದೆ. ಇದರಿಂದ ಜನ ಸಾಮಾನ್ಯರಿಗೆ ತೊಂದರೆಯಾಗಿದೆ. ರಾಜ್ಯ ಸರ್ಕಾರ ಸೆಸ್ ಅನ್ನು ಕೂಡ ಕಡಿಮೆ ಮಾಡುತ್ತಿಲ್ಲ. ಸರ್ಕಾರ ಸುಳ್ಳು ಹೇಳಿಕೊಂಡು ಅಧಿಕಾರ ಮಾಡುತ್ತಿದೆ. ಇದರಿಂದ ಜನರು ಚಿನ್ನವನ್ನೆಲ್ಲಾ ಬ್ಯಾಂಕ್ನಲ್ಲಿ ಇಟ್ಟು ಜೀವನ ಮಾಡಬೇಕಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕ್ವೀನ್ಸ್ ರಸ್ತೆಯಲ್ಲಿ ಕಾಂಗ್ರೆಸ್ ಸೈಕಲ್ ಜಾಥಾಗೆ ಪೊಲೀಸರಿಂದ ತಡೆ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ಇಂದು ಕಾಂಗ್ರೆಸ್ ಸೈಕಲ್ ಜಾಥಾ ನಡೆಯುತ್ತಿದೆ. ಪೆಟ್ರೋಲ್, ಡೀಸೆಲ್, ಅಗತ್ಯವಸ್ತುಗಳ ಬೆಲೆ ಏರಿಕೆಗೆ ಖಂಡನೆ ವ್ಯಕ್ತಡಿಸಿದ ವಿರೋಧ ಪಕ್ಷದ ನಾಯಕರು, ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ವಿರೋಧಿಸಿ ಜಾಥಾ ನಡೆಸುತ್ತಿದ್ದಾರೆ. ಆದರೆ ಕ್ವೀನ್ಸ್ ರಸ್ತೆಯಲ್ಲಿ ಸೈಕಲ್ ಜಾಥಾವನ್ನು ಪೊಲೀಸರು ತಡೆದಿದ್ದಾರೆ. ಬ್ಯಾರಿಕೇಡ್ ತಳ್ಳಿ ಮುಂದೆ ನುಗ್ಗಲು ಪ್ರತಿಭಟನಾಕಾರರು ಯತ್ನಿಸಿದ್ದಾರೆ. ಆದರೆ ಶಾಸಕರನ್ನು ಮಾತ್ರ ಸೈಕಲ್‌ನಲ್ಲಿ ತೆರಳಲು ಪೊಲೀಸರು ಅವಕಾಶ ನೀಡಿದ್ದಾರೆ.
ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟ ಡಿ.ಕೆ.ಶಿವಕುಮಾರ್ ಮೊನ್ನೆ ಎತ್ತಿನಗಾಡಿಯಲ್ಲಿ ತೆರಳಿ ಪ್ರತಿಭಟನೆ ನಡೆಸಿದ್ದೆವು. ಇಂದು ಸೈಕಲ್‌ನಲ್ಲಿ ತೆರಳಿ ಪ್ರತಿಭಟನೆ ನಡೆಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ನಡೆದುಕೊಂಡು ಹೋಗಿ ಪ್ರತಿಭಟನೆ ನಡೆಸುತ್ತೇವೆ. ಮೊನ್ನೆ ಎತ್ತಿನಗಾಡಿಯಲ್ಲಿ ತೆರಳಿ ಪ್ರತಿಭಟನೆ ನಡೆಸಿದಾಗ ಅದರ ಬಗ್ಗೆ ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದರು. ನಡೆದುಕೊಂಡು ಬರಬೇಕಿತ್ತು ಎಂದಿದ್ದರು. ಹೀಗಾಗಿ ನಮ್ಮ ಪ್ರತಿಭಟನೆಗೆ ಸರಿಯಾದ ಉತ್ತರ ಸಿಗದಿದ್ದರೆ ಮುಂದಿನ ದಿನಗಳಲ್ಲಿ ನಡೆದುಕೊಂಡು ಹೋಗಿ ಪ್ರತಿಭಟನೆ ಮಾಡುತ್ತೇವೆ ಎಂದು ಸೈಕಲ್ ಜಾಥಾ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧ ತಲುಪಿದ ಕಾಂಗ್ರೆಸ್ ಸೈಕಲ್ ಜಾಥಾ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಸೈಕಲ್ ಜಾಥಾ ನಡೆಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಸಿದ್ದರಾಮಯ್ಯ, ಖಂಡ್ರೆ, ರಾಮಲಿಂಗಾರೆಡ್ಡಿ ಸೇರಿ ಹಲವು ನಾಯಕರು ಜಾಥಾ ನಡೆಸುತ್ತಿದ್ದಾರೆ. ಸದ್ಯ ವಿಧಾನಸೌಧದ ಕೆಂಗಲ್ ಗೇಟ್ ಬಳಿ ಸೈಕಲ್ ಜಾಥಾ ತಲುಪಿದೆ.
ಟ್ರಾಫಿಕ್‌ನಲ್ಲಿ ಸಿಲುಕಿರುವ ಆ್ಯಂಬುಲೆನ್ಸ್ ಬೆಂಗಳೂರಲ್ಲಿ ಕಾಂಗ್ರೆಸ್ ನಾಯಕರ ಪ್ರತಿಭಟನೆ ಹಿನ್ನೆಲೆ, ಸಂಚಾರ ದಟ್ಟಣೆಯಿಂದ ವಾಹನ ಸವಾರರು ಪರದಾಟ ನಡೆಸುವಂತಾಗಿದೆ. ಈ ವೇಳೆ ಟ್ರಾಫಿಕ್‌ಜಾಮ್‌ನಲ್ಲಿ ಆ್ಯಂಬುಲೆನ್ಸ್ ಸಿಲುಕಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿಂದು ಸಾಲು ಸಾಲು ಪ್ರತಿಭಟನೆ; ಟ್ರಾಫಿಕ್ ಸಮಸ್ಯೆ ಸಾಧ್ಯತೆ ಹೆಚ್ಚು
ಪೆಟ್ರೋಲ್ ಡೀಸೆಲ್ಗಳನ್ನು ಜಿಎಸ್ಟಿ ಅಡಿ ತರಬಾರದು: ಸಿದ್ದರಾಮಯ್ಯ ಆಗ್ರಹ
Published On - 10:49 am, Mon, 20 September 21