AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಗತ ಪಾತಕಿಗಳ ಗರಡಿಯಲ್ಲಿ ಬೆಳೆದ ಡಿಕೆಶಿ KPCC ಅಧ್ಯಕ್ಷರಾಗಿದ್ದಾರೆ: ಕಾಂಗ್ರೆಸ್ ನಾಯಕರ​ ಟೀಕೆಗೆ ಬಿಜೆಪಿ ತಿರುಗೇಟು

ಗೂಂಡಾಗಿರಿ, ರೌಡಿಸಂ ಮೇರಿಟ್ ಅಂತ ಪರಿಗಣಿಸಿ ನಲಪಾಡ್​ಗೆ ಹುದ್ದೆ ನೀಡಲಾಗಿದೆ. ನಿಮಗೆ ಯುವ ಕಾಂಗ್ರೆಸ್ ಅಧ್ಯಕ್ಷರ ‘ಆ ದಿನಗಳು’ ಮರೆತು ಹೋಗಿದೆಯಾ? ಎಂದು ಟ್ವೀಟ್​​​ ಮೂಲಕ ಕಾಂಗ್ರೆಸ್​ ನಾಯಕರಿಗೆ ಬಿಜೆಪಿ ತಿರುಗೇಟು ನೀಡಿದೆ.

ಭೂಗತ ಪಾತಕಿಗಳ ಗರಡಿಯಲ್ಲಿ ಬೆಳೆದ ಡಿಕೆಶಿ KPCC ಅಧ್ಯಕ್ಷರಾಗಿದ್ದಾರೆ: ಕಾಂಗ್ರೆಸ್ ನಾಯಕರ​ ಟೀಕೆಗೆ ಬಿಜೆಪಿ ತಿರುಗೇಟು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 29, 2022 | 10:58 AM

Share

ಬೆಂಗಳೂರು: ರೌಡಿಶೀಟರ್​ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಭಾಗಿ ಆಗಿದ್ದ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕರ​ ಟೀಕೆಗೆ ಟ್ವೀಟ್ ಮೂಲಕ ಬಿಜೆಪಿ ತಿರುಗೇಟು ನೀಡಿದೆ. ಭೂಗತ ಪಾತಕಿಗಳ ಗರಡಿಯಲ್ಲಿ ಬೆಳೆದ ಡಿಕೆ ಶಿವಕುಮಾರ್ KPCC ಅಧ್ಯಕ್ಷರಾಗಿದ್ದಾರೆ. ಕೊಲೆ ಆರೋಪಿ ವಿನಯ್ ಕುಲಕರ್ಣಿ ಕಾಂಗ್ರೆಸ್ ನಾಯಕ. ಗೂಂಡಾಗಿರಿಯ ನಲಪಾಡ್ ರಾಜ್ಯ ಯುವ ಕಾಂಗ್ರೆಸ್​​ ಅಧ್ಯಕ್ಷ ಎಂದು ಟ್ವೀಟ್ ಮೂಲಕ ಬಿಜೆಪಿ ವಾಗ್ದಾಳಿ ನಡೆಸಿದೆ.

ನಿಮ್ಮ ಪಕ್ಷದ ನಾಯಕರ ‘ಆ ದಿನಗಳು’ ಹೇಗಿವೆ ಅಂತ ನೋಡಿ. ಒಂದು ಕಾಲದಲ್ಲಿ ಕೊತ್ವಾಲ್‌ನ ನೆಚ್ಚಿನ ಶಿಷ್ಯ ಆಗಿದ್ದವರು ತಿಹಾರ್ ಜೈಲಿನಿಂದ ಬಂದವರಿಗೆ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಗೆ ಭಡ್ತಿಯಾಗಿದ್ದಾರೆ. ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರ ‘ಆ ದಿನಗಳು’ ಮರೆತು ಹೋಗಿದೆಯಾ? ಗೂಂಡಾಗಿರಿ, ರೌಡಿಸಂ ಮೇರಿಟ್ ಅಂತ ಪರಿಗಣಿಸಿ ನಲಪಾಡ್​ಗೆ ಹುದ್ದೆ ನೀಡಲಾಗಿದೆ. ವಿರೋಧದ ನಡುವೆಯೂ ನಲಪಾಡ್ ಯುವ ಕಾಂಗ್ರೆಸ್ ಅಧ್ಯಕ್ಷರಾದರು. ನಿಮಗೆ ಯುವ ಕಾಂಗ್ರೆಸ್ ಅಧ್ಯಕ್ಷರ ‘ಆ ದಿನಗಳು’ ಮರೆತು ಹೋಗಿದೆಯಾ? ಎಂದು ಟ್ವೀಟ್​​​ ಮೂಲಕ ಕಾಂಗ್ರೆಸ್​ ನಾಯಕರಿಗೆ ಬಿಜೆಪಿ ತಿರುಗೇಟು ನೀಡಿದೆ.

ಬಿಜೆಪಿಯಲ್ಲಿ ಈ ಮೊದಲು ವೈಟ್ ಕಾಲರ್ ರೌಡಿಗಳಿದ್ದರು

ಫೈಟರ್​ ರವಿ ಬಿಜೆಪಿ ಸೇರಿದ ವಿಚಾರಕ್ಕೆ ಕಾಂಗ್ರೆಸ್ ಟ್ವೀಟ್​​ ಮಾಡಿದೆ. ಬಿಜೆಪಿಯಲ್ಲಿ ಈ ಮೊದಲು ವೈಟ್ ಕಾಲರ್ ರೌಡಿಗಳಿದ್ದರು. ಈಗ ರಿಯಲ್ ರೌಡಿಗಳು ಸೇರಿದ್ದಾರೆ ಎಂದು ಟಾಂಗ್ ಕೊಟ್ಟಿದೆ. ಮುಂದೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕೂಡ ಬಿಜೆಪಿ ಸೇರಿ ಪಾವನನಾಗಬಹುದು. ಪಾತಕಿಗಳು, ದರೋಡೆಕೋರರು, ಡ್ರಗ್ ಪೆಡ್ಲರ್‌ಗಳು, ಕ್ರೀಮಿನಲ್‌ಗಳು, ಭ್ರಷ್ಟರು, ರೇಪಿಸ್ಟರು ಎಲ್ಲರಿಗೂ ಬಿಜೆಪಿ ಪಕ್ಷ ತವರು ಮನೆ ಇದ್ದಂತೆ ಎಂದು ಟ್ವೀಟ್ ಮಾಡಿದೆ.

ಪೊಲೀಸರ ಕೈಗೆ ಸಿಗದ ರೌಡಿ, ಬಿಜೆಪಿ ನಾಯಕರ ಕೈಗೆ ಸಿಕ್ಕಿದ್ದೇಗೆ?

ಬಿಜೆಪಿ ಪಕ್ಷಕ್ಕೆ ರೌಡಿಶೀಟರ್​ಗಳ ಸೇರ್ಪಡೆ ಹಾಗೂ ಚಾಮರಾಜಪೇಟೆಯಲ್ಲಿ ಸೈಲೆಂಟ್ ಸುನೀಲ್ ಸ್ಫರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಕಾಂಗ್ರೆಸ್​ ಟ್ವೀಟ್​ ಮೂಲಕ ಕಿಡಿಕಾರಿದೆ. ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು ಅಂದ್ರೆ ಅದು ಬಿಜೆಪಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ವಾಂಟೆಡ್ ಲಿಸ್ಟ್‌ನಲ್ಲಿರುವ ರೌಡಿ ಪೊಲೀಸರ ಕೈಗೆ ಸಿಗುವುದಿಲ್ಲ. ಆದರೆ ಬಿಜೆಪಿ ನಾಯಕರ ಜೊತೆಯಲ್ಲಿರುತ್ತಾನೆ ಎಂದು ಕಾಂಗ್ರೆಸ್​ ಟ್ವೀಟ್​ ಮೂಲಕ ಕಿಡಿಕಾರಿದೆ.

ಪೊಲೀಸರು ಹುಡುಕುತ್ತಿದ್ದ ರೌಡಿಯ ಜೊತೆಗೆ ನಿಮ್ಮ ನಾಯಕರಿಗೆ ಏನು ಕೆಲಸ ಎಂದು ಕಾಂಗ್ರೆಸ್​ ಪ್ರಶ್ನೆ ಮಾಡಿದೆ.ರೌಡಿಶೀಟರ್​ ಬಂಧನ ಆಗದಿರುವ ಹಿಂದೆ ಬಿಜೆಪಿ ಕೈವಾಡವಿದೆಯೇ? ಕ್ರಿಮಿನಲ್‌ಗಳೊಂದಿಗೆ ಬಿಜೆಪಿಯ ನೆಂಟಸ್ತಿಕೆ ಇರುವಾಗ ರಾಜ್ಯದಲ್ಲಿ ಅಪರಾಧ ಪ್ರಕರಣ ಸಂಖ್ಯೆ ಏರದಿರುತ್ತದೆಯೇ ಎಂದು ಕಾಂಗ್ರೆಸ್​ ಟ್ವೀಟ್​ ಮೂಲಕ ಕಿಡಿಕಾರಿದೆ.

ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ?

ಬಿಜೆಪಿಯ ಕೃಪಾಕಟಾಕ್ಷದಿಂದ ಸೈಲೆಂಟ್ ಸುನಿಲ್ ಎಂಬ ರೌಡಿಯ ಮುಂದೆ ಈಗ ಪೊಲೀಸರೇ ಸೈಲೆಂಟ್! ಸಚಿವ ಜ್ಞಾನೇಂದ್ರ ಅರಗ ಅವರೇ, ಸೈಲೆಂಟ್ ಸುನೀಲನಿಗೆ ಪೊಲೀಸರು ಹುಡುಕುತ್ತಿರಲಿಲ್ಲವೇ? ಬಿಜೆಪಿ ನಾಯಕರೊಂದಿಗೆ ವೇದಿಕೆಯಲ್ಲಿದ್ದಾಗ ಅಲ್ಲಿ ಪೊಲೀಸರೀರಲಿಲ್ಲವೇ? ಬಂಧಿಸದಂತೆ ಪೊಲೀಸರಿಗೆ ತಡೆದವರು ಯಾರು? ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? ಎಂದು ಕಾಂಗ್ರೆಸ್​ ಟ್ವೀಟ್​ ಮಾಡಿದೆ.

ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:58 am, Tue, 29 November 22

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು