ಪುಡಿ ರೌಡಿಯಂತೆ ಡಿಕೆ ಶಿವಕುಮಾರ್ ವರ್ತಿಸ್ತಿದಾರೆ, ರೌಡಿ ಕೊತ್ವಾಲನ ಶಿಷ್ಯ ಎಂಬುದನ್ನು ತೋರಿಸಿಕೊಡ್ತಿದೀರಾ? ಬಿಜೆಪಿ ಟ್ವೀಟ್
ಸುಳ್ಳು ಪ್ರತಿಪಾದನೆಗೆ ಹೊರಟಿರುವ ರಾಜ್ಯ ಕಾಂಗ್ರೆಸ್ ನಾಯಕರು ಹತ್ತಾರು ಪ್ರಶ್ನೆ ಕೇಳುವ ಮುನ್ನ ನಮ್ಮ ಒಂದು ಪ್ರಶ್ನೆಗೆ ಉತ್ತರಿಸಿ. ಮೇಕೆದಾಟು ಯೋಜನೆಗೆ ತಡೆಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು ಯಾರು? ಅರ್ಜಿ ಸಲ್ಲಿಸಿದ್ದ ಸರ್ಕಾರದ ಜತೆ ಕಾಂಗ್ರೆಸ್ ಮೈತ್ರಿಯಲ್ಲಿದೆ. -ರಾಜ್ಯ ಬಿಜೆಪಿ ಟ್ವೀಟ್
ಬೆಂಗಳೂರು: ‘ಪಾದಯಾತ್ರೆ ತಡೆಯಲು ಮತ್ತೊಂದು ಜನ್ಮ ಎತ್ತಿ ಬರಬೇಕು’ ‘ತಾಕತ್ತಿದ್ದರೆ ತಡೆಯಿರಿ ನೋಡೋಣ’ ಎಂದು ಡಿಕೆ ಶಿವಕುಮಾರ್ ಹಾಕಿದ್ದ ಸವಾಲಿಗೆ ಬಿಜೆಪಿ ಘಟಕ ಟ್ವೀಟ್ ಮೂಲಕ ತಿರುಗೇಟು ಕೊಟ್ಟಿದೆ. ಪುಡಿ ರೌಡಿಯ ರೀತಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವರ್ತಿಸುತ್ತಿದ್ದಾರೆ. ರೌಡಿ ಕೊತ್ವಾಲನ ಶಿಷ್ಯ ಎಂಬುದನ್ನು ತೋರಿಸಿಕೊಡುತ್ತಿದ್ದೀರಾ? ಸುಳ್ಳಿನಜಾತ್ರೆ ಎಂದು ಪ್ರಶ್ನೆ ಮಾಡಿದೆ.
ಸುಳ್ಳು ಪ್ರತಿಪಾದನೆಗೆ ಹೊರಟಿರುವ ರಾಜ್ಯ ಕಾಂಗ್ರೆಸ್ ನಾಯಕರು ಹತ್ತಾರು ಪ್ರಶ್ನೆ ಕೇಳುವ ಮುನ್ನ ನಮ್ಮ ಒಂದು ಪ್ರಶ್ನೆಗೆ ಉತ್ತರಿಸಿ. ಮೇಕೆದಾಟು ಯೋಜನೆಗೆ ತಡೆಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು ಯಾರು? ಅರ್ಜಿ ಸಲ್ಲಿಸಿದ್ದ ಸರ್ಕಾರದ ಜತೆ ಕಾಂಗ್ರೆಸ್ ಮೈತ್ರಿಯಲ್ಲಿದೆ. ತಮಿಳುನಾಡಲ್ಲಿ ಡಿಎಂಕೆ ಜತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ. ಮೇಕೆದಾಟು ಯೋಜನೆ ಈಗ ಸ್ಟಾಲಿನ್ ಸರ್ಕಾರದ ಅಂಗಳದಲ್ಲಿದೆ. ಸುಳ್ಳಿನ ಜಾತ್ರೆ ಮಾಡುವ ಬದಲು, ಅವರ ಜತೆ ಮಾತುಕತೆ ನಡೆಸಿ ಎಂದು ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮೂಲಕ ಪ್ರಶ್ನೆ ಮಾಡಿದೆ.
ಸತ್ತರೂ ಸರಿ, ಮೇಕೆದಾಟು ಪಾದಯಾತ್ರೆ ನಿಲ್ಲದು: ಡಿಕೆ ಶಿವಕುಮಾರ್ ನಾಕಾಬಂದಿ ಹಾಕಿ ಕಾರ್ಯಕರ್ತರನ್ನು ತಡೆದರೂ, ಏನು ಮಾಡಿದರೂ ಮೇಕೆದಾಟು ಯೋಜನೆಗೆ ಆಗ್ರಹಿಸಿ ನಡೆಸಲು ಉದ್ದೇಶಿಸಿರುವ ಪಾದಯಾತ್ರೆ ನಿಲ್ಲುವುದಿಲ್ಲ. ಅವರು ಏನು ಬೇಕಾದರೂ ಮಾಡಲಿ, ಕಾರ್ಯಕರ್ತರನ್ನು ಬೇಕಾದರೆ ತಡೆಯಲಿ. ಸಿದ್ದರಾಮಯ್ಯ, ನಮ್ಮ 100 ಜನ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ನಡೆಯುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಆಡಳಿತ ಪಕ್ಷದವರೇ ಕೊವಿಡ್ ಕೇಸ್‌ಗಳನ್ನು ಹೆಚ್ಚಿಸಿ ನಿರ್ಬಂಧ ತಂದಿದ್ದಾರೆ. ಚುನಾವಣೆ ಸೋಲಿನ ಭೀತಿಯಿಂದ ಪಾದಯಾತ್ರೆಗೆ ತಡೆಯೊಡ್ಡಲು ಮುಂದಾಗಿದ್ದಾರೆ. ನಮ್ಮ ರಾಜ್ಯದಲ್ಲಿ ಸ್ಪೆಷಲ್ ಬಿಜೆಪಿ ಕರ್ಫ್ಯೂ ತಂದು, ವರ್ತಕರು, ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾರೆ. ನಮ್ಮ ಕಾರ್ಯಕ್ರಮ ಮೊಟಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ರಾಮನಗರದ ಪ್ರವಾಸಿ ತಾಣಗಳಲ್ಲಿ ನಿರ್ಬಂಧ ಹೇರಿದ್ದಾರೆ. ಇದು ಒಮಿಕ್ರಾನ್ ಅಲ್ಲ, ಬಿಜೆಪಿ ಕಾಯಿಲೆ ಎಂದು ಅವರು ಕಿಡಿಕಾರಿದರು. 15 ದಿನಗಳ ಹಿಂದೆಯೇ ಸಂಗಮದಲ್ಲಿ ಹೋಟೆಲ್ ಬುಕ್ ಮಾಡಿದ್ದೆವು. ಆದರೆ ಈಗ ಹೊಟೆಲ್ ಮಾಲೀಕರನ್ನು ಹೆದರಿಸಿ ಹೋಟೆಲ್ ಬಂದ್ ಮಾಡಿಸುತ್ತಿದ್ದಾರೆ. ಹೋಟೆಲ್ನಲ್ಲಿ ನೀವು ರೂಮ್ ನೀಡದಿದ್ದರೆ ಪ್ರಕೃತಿ ಮಡಿಲಲ್ಲೇ ಮಲಗುತ್ತೇವೆ ಎಂದು ಹೇಳಿದರು. ನೀವು ನಮ್ಮನ್ನು ಒಂದು ದಿನ ಬಂಧನದಲ್ಲಿ ಇರಿಸಬಹುದು. ಮರುದಿನ ಬಿಡುಗಡೆ ಮಾಡಲೇ ಬೇಕಾಗುತ್ತದೆ. ಸೋಮವಾರದಿಂದ ಕರ್ಫ್ಯೂ ಇಲ್ಲ. ಹೀಗಾಗಿ ನಮ್ಮನ್ನು ತಡೆಯಲು ಆಗುವುದಿಲ್ಲ ಎಂದರು.
ಇದನ್ನೂ ಓದಿ: ಸತ್ತರೂ ಸರಿ, ಮೇಕೆದಾಟು ಪಾದಯಾತ್ರೆ ನಿಲ್ಲದು: ಡಿಕೆ ಶಿವಕುಮಾರ್
Published On - 1:44 pm, Fri, 7 January 22