Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ, ಅಮಿತ್ ಶಾ ತೀರ್ಥಸ್ನಾನದ ಕುರಿತಾದ ಖರ್ಗೆ ವ್ಯಂಗ್ಯಕ್ಕೆ ವಿಜಯೇಂದ್ರ ತಿರುಗೇಟು

ಪ್ರಯಾಗರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ತೀರ್ಥಸ್ನಾನ ಮಾಡಿದ್ದರು. ಇದನ್ನು ವ್ಯಂಗ್ಯವಾಡಿದ್ದ ಮಲ್ಲಿಕಾರ್ಜುನ ಖರ್ಗೆ, ಗಂಗಾನದಿಯ ಸ್ನಾನದಿಂದ ಬಡತನವನ್ನು ಕೊನೆಗೊಳಿಸಲು ಸಾಧ್ಯವೇ? ಎಂದು ಪ್ರಶ್ನಿಸಿದ್ದರು. ಕ್ಯಾಮೆರಾದಲ್ಲಿ ಚೆನ್ನಾಗಿ ಕಾಣುವವರೆಗೂ ಮೋದಿ, ಅಮಿತ್ ಶಾ ಸ್ನಾನ ಮಾಡುತ್ತಲೇ ಇದ್ದರು ಎಂದು ಖರ್ಗೆ ಲೇವಡಿ ಮಾಡಿದ್ದರು. ಇದಕ್ಕೆ ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಮೋದಿ, ಅಮಿತ್ ಶಾ ತೀರ್ಥಸ್ನಾನದ ಕುರಿತಾದ ಖರ್ಗೆ ವ್ಯಂಗ್ಯಕ್ಕೆ ವಿಜಯೇಂದ್ರ ತಿರುಗೇಟು
By Vijayendra
Follow us
ಸುಷ್ಮಾ ಚಕ್ರೆ
|

Updated on: Jan 27, 2025 | 10:13 PM

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಹಾಕುಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಗಂಗಾ ನದಿಯಲ್ಲಿ ತೀರ್ಥ ಸ್ನಾನ ಮಾಡಿದ ಬಗ್ಗೆ ಲೇವಡಿ ಮಾಡಿದ್ದರು. ಬಿಜೆಪಿ ಇದಕ್ಕೆ ತಿರುಗೇಟು ನೀಡಿದೆ. ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಈ ಬಗ್ಗೆ ಟೀಕಿಸಿದ್ದು, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರ ಗಂಗಾ ನದಿಯ ತೀರ್ಥ ಸ್ನಾನದ ಕುರಿತು ವ್ಯಂಗ್ಯದ ಮಾತುಗಳನ್ನಾಡುವ ಮೂಲಕ ಹಿಂದೂಗಳ ಧಾರ್ಮಿಕ ಶ್ರದ್ಧೆಯನ್ನು ಅವಮಾನಿಸಿದ್ದೀರಿ ಎಂದಿದ್ದಾರೆ.

ಸ್ವಾತಂತ್ರ್ಯಾ ನಂತರದ ದಿನಗಳಿಂದಲೂ ನೆಹರು ಕುಟುಂಬದ ಭಟ್ಟಂಗಿಗಳಾಗಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಗಳನ್ನು ಕಸದ ಬುಟ್ಟಿಗೆ ಎಸೆದು ಬಡವರು, ಶೋಷಿತರು, ರೈತರು ಹಾಗೂ ಕೂಲಿ ಕಾರ್ಮಿಕರ ಬದುಕನ್ನು ನರಕಕ್ಕೆ ತಳ್ಳಿದ ಕುಖ್ಯಾತಿ ಕಾಂಗ್ರೆಸ್ಸಿಗರದು. ಈ ಕಾರಣಕ್ಕಾಗಿಯೇ ಭಾರತದ ರಾಜಕೀಯ ಭೂಪಟದಲ್ಲಿ ಪ್ರಾದೇಶಿಕ ಪಕ್ಷಗಳನ್ನೂ ಎದುರಿಸಲಾಗದ ಸ್ಥಿತಿಗೆ ತಲುಪಿ ಕಾಂಗ್ರೆಸ್ ಅವನತಿಯ ಹಾದಿಯಲ್ಲಿದೆ. ಇಂತಹ ಸ್ಥಿತಿಯಲ್ಲಿ ನೀವು ಆ ಪಕ್ಷದ ಅಧ್ಯಕ್ಷರಾಗಿದ್ದೀರಿ. ಇಷ್ಟಾದರೂ ನಿಮ್ಮ ಅನುಭವ ಹಾಗೂ ಹಿರಿತನವನ್ನು ಗುಲಾಮಗಿರಿ ಪಕ್ಷಕ್ಕೆ ಒತ್ತೆಯಿಟ್ಟವರಂತೆ ವರ್ತಿಸುತ್ತಿರುವ ನಿಮ್ಮ ಬಗ್ಗೆ ನಮಗೆ ಗೌರವಪೂರ್ವಕ ಕನಿಕರವಿದೆ ಎಂದು ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ನಿಮ್ಮ ನಾಲಿಗೆಯಿಂದ ಹೊರಡುತ್ತಿರುವ ಮಾತುಗಳ ಬಗ್ಗೆ ಬೇಸರವಿದೆ. ನಿಮ್ಮ ಮೇಲಿನ ಹೈಕಮಾಂಡ್ ಓಲೈಸಲು ಹಿಂದೂ ಧಾರ್ಮಿಕ ನಂಬಿಕೆ, ಆಚಾರ – ವಿಚಾರಗಳನ್ನು ಉಲ್ಲೇಖಿಸಿ ನೀವು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಟೀಕಿಸುತ್ತಿರುವ ಪರಿ ತುಕ್ಕು ಹಿಡಿದ ನಿಮ್ಮ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತಿದೆ. ಎಲ್ಲಿ ಕಾಂಗ್ರೆಸ್ ಆಡಳಿತ ಇರುತ್ತದೋ ಅಲ್ಲಿ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರಗಳು ಹಾಗೂ ರಾಷ್ಟ್ರವಿದ್ರೋಹಿ ಭಯೋತ್ಪಾದಕ ಚಟುವಟಿಕೆಗಳು ತಾಂಡವವಾಡುತ್ತವೆ ಎಂಬುದಕ್ಕೆ ಕರ್ನಾಟಕದ ನಿಮ್ಮ ಸರ್ಕಾರದ ಆಡಳಿತವೇ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಕಾಂಗ್ರೆಸ್ ಅಧಿವೇಶನ; ಸೋನಿಯಾ ಗಾಂಧಿ ಬಡವರಿಗಾಗಿ ಅನೇಕ ಯೋಜನೆಗಳನ್ನು ನೀಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ಮೈಕ್ರೋ ಫೈನಾನ್ಸ್ ಹಾವಳಿಯಿಂದ ದಿನವೂ ಬಡವರು ಹಾಗೂ ಗ್ರಾಮೀಣ ಪ್ರದೇಶದ ಜನರು ಊರು ಬಿಡುತ್ತಿದ್ದಾರೆ, ಸರಣಿ ರೂಪದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಹಾಡು ಹಗಲಲ್ಲೇ ದರೋಡೆ ಹಾಗೂ ಬ್ಯಾಂಕ್ ಲೂಟಿ ಎಗ್ಗಿಲ್ಲದೆ ಸಾಗಿದೆ, ಸ್ವತಃ ಮುಖ್ಯಮಂತ್ರಿಗಳೇ ಮೈಸೂರು ಮುಡಾ ಹಗರಣದ ನಿವೇಶನ ಲೂಟಿಯ ಮುಂಚೂಣಿ ಫಲಾನುಭವಿಯಾಗಿದ್ದಾರೆ, ಬಾಣಂತಿಯರ ಸಾಲು ಸಾಲು ಸಾವು ಹೆಂಗರುಳಿಲ್ಲದ ನಿಮ್ಮ ಹೈಕಮಾಂಡ್’ಗೆ ಈಗಲೂ ತಾಗಿಲ್ಲ ಎಂದು ಟೀಕಿಸಿದ್ದಾರೆ.

ಇಂತಹ ಕ್ರೂರ ಮನಸ್ಥಿತಿಯ ದಪ್ಪಚರ್ಮದ ಬಡವರ ವಿರೋಧಿ ಆಡಳಿತ ನಡೆಸುತ್ತಿರುವ ನಿಮ್ಮ ಸರ್ಕಾರಕ್ಕೆ ಕಿವಿ ಹಿಂಡಬೇಕೆಂದು ನಿಮಗೆ ಇನ್ನೂ ಜ್ಞಾನೋದಯ ಆಗಿಲ್ಲ. ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಸತ್ತು ಬಿದ್ದಿದ್ದರೂ ಇನ್ನೊಬ್ಬರ ತಟ್ಟೆಯಲ್ಲಿ ನೊಣ ಹುಡುಕುವ” ರೀತಿಯಲ್ಲಿ ಮಾತನಾಡುತ್ತಿದ್ದೀರಿ. ನಿಮ್ಮ ಹಿರಿತನದ ಬಗ್ಗೆ ಗೌರವವಿದೆ ಆದರೆ ನಿಮ್ಮ ಮಾತುಗಳು ರಾಜಕೀಯ ಪರಿಭಾಷೆಯಿಲ್ಲದ ಪದ ಸಂಸ್ಕೃತಿಯನ್ನು ಮರೆತ ಕೀಳು ಅಭಿರುಚಿಯ ಮಾತುಗಳಾಡಿರುವುದು ನಿಮ್ಮ ಘನತೆ ಕುಗ್ಗಿಸಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಜಾಗತಿಕ ಶಾಂತಿಗಾಗಿ ಒಟ್ಟಾಗಿ ಕೆಲಸ ಮಾಡೋಣ; ಅಮೆರಿಕ ಅಧ್ಯಕ್ಷ ಟ್ರಂಪ್ ಜೊತೆ ಪ್ರಧಾನಿ ಮೋದಿ ಚರ್ಚೆ

ದೇಶದಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ 10 ವರ್ಷ ಸಮರ್ಥ ಆಡಳಿತ ನೀಡಿ ಭಾರತವನ್ನು ಜಾಗತಿಕ ಮಟ್ಟದಲ್ಲಿ ತಲೆ ಎತ್ತುವಂತೆ ಮಾಡಿದ್ದಾರೆ, ಗೃಹ ಸಚಿವರಾಗಿ ಮಾನ್ಯ ಅಮಿತ್ ಶಾ ರಾಷ್ಟ್ರದೊಳಗೆ ವಿದ್ವಾಂಸಕ ಕೃತ್ಯ ನಡೆಸಿ ಅಟ್ಟಹಾಸ ಮೆರೆಯುತ್ತಿದ್ದ ಭಯೋತ್ಪಾದಕ ಸಂಘಟನೆಗಳನ್ನು ಬೇರು ಸಮೇತ ಕಿತ್ತೊಗೆದಿದ್ದಾರೆ. ಭಾರತಾಂಬೆ ಈ ಇಬ್ಬರ ರಕ್ಷಣೆಗೆ ನಿಂತಿದ್ದಾಳೆ. ಈ ಕಾರಣದಿಂದಲೇ ಮೂರನೇ ಅವಧಿಗೂ ಇವರ ಭಾರತ ಕಟ್ಟುವ ವಿಜಯ ಯಾತ್ರೆ ನಾಗಾಲೋಟದಲ್ಲಿ ಸಾಗಿದೆ. ಇದನ್ನು ಸಹಿಸಿಕೊಳ್ಳಲಾಗದ ನೀವು ಹಾಗೂ ನಿಮ್ಮ ಕಾಂಗ್ರೆಸ್ಸಿಗರು ಹತಾಶೆಯಿಂದ ವಿವೇಕ ಸುಟ್ಟುಕೊಂಡವರಂತೆ ಮಾತನಾಡುತ್ತಿರುವುದು ಭಾರತದ ಪ್ರಜಾತಂತ್ರ ವ್ಯವಸ್ಥೆಯ ವಿರೋಧ ಪಕ್ಷ ದುರ್ಬಲ ಸ್ಥಿತಿಗೆ ತಲುಪಿರುವುದನ್ನು ಸಾಕ್ಷೀಕರಿಸುತ್ತಿದೆ ಎಂದು ವಿಜಯೇಂದ್ರ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಖರ್ಗೆ ಹೇಳಿದ್ದೇನು?:

ಗಂಗಾನದಿಯ ಸ್ನಾನದಿಂದ ಬಡತನವನ್ನು ಕೊನೆಗೊಳಿಸಲು ಸಾಧ್ಯವೇ? ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದರು. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಬಿಜೆಪಿ ನಾಯಕರು ಕ್ಯಾಮೆರಾಗಳ ಮುಂದೆ ಸ್ನಾನ ಮಾಡಲು ಪರಸ್ಪರ ಪೈಪೋಟಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಬಿಜೆಪಿ ನಾಯಕರು ಕ್ಯಾಮೆರಾದಲ್ಲಿ ಚೆನ್ನಾಗಿ ಕಾಣುವವರೆಗೂ ಸ್ನಾನ ಮಾಡುತ್ತಲೇ ಇದ್ದರು. ಜನರು ನರೇಂದ್ರ ಮೋದಿಯವರ ಸುಳ್ಳು ಭರವಸೆಗಳ ಬಲೆಗೆ ಬೀಳಬಾರದು. ಗಂಗಾನದಿಯ ಸ್ನಾನದಿಂದ ಬಡತನ ಕೊನೆಗೊಳ್ಳುತ್ತದೆಯೇ? ಅದು ನಿಮ್ಮ ಹೊಟ್ಟೆಯನ್ನು ತುಂಬುತ್ತದೆಯೇ? ಎಂದು ಖರ್ಗೆ ಕೇಳಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ