ಕಾರ್ಯಕರ್ತರ ಅಭಿಪ್ರಾಯ ಪಡೆದು ಟಿಕೆಟ್ ಕೊಟ್ಟಿರೋದು ಇದೊಂದೇ ಪಕ್ಷ -ಬಿ.ವೈ. ವಿಜಯೇಂದ್ರ

ನಾನು ಹಲವಾರು ವರ್ಷಗಳಿಂದ ಸಂಘಟನೆ ಕೆಲಸ ಮಾಡಿದ್ದೇನೆ. ಬಿಎಸ್ ವೈ ಮಗ ಅಂತ ಟಿಕೆಟ್ ಕೊಡೋದೇ ಆಗಿದ್ರೆ, ಕಳೆದ ಬಾರಿಯೇ ವರುಣದಿಂದ ಟಿಕೆಟ್ ಸಿಕ್ತಾ ಇತ್ತು ಎಂದು ಬಿ.ವೈ. ವಿಜಯೇಂದ್ರ ತಿಳಿಸಿದರು.

ಕಾರ್ಯಕರ್ತರ ಅಭಿಪ್ರಾಯ ಪಡೆದು ಟಿಕೆಟ್ ಕೊಟ್ಟಿರೋದು ಇದೊಂದೇ ಪಕ್ಷ -ಬಿ.ವೈ. ವಿಜಯೇಂದ್ರ
ಬಿವೈ ವಿಜಯೇಂದ್ರ
Follow us
ಆಯೇಷಾ ಬಾನು
|

Updated on:Apr 13, 2023 | 3:17 PM

ಬೆಂಗಳೂರು: ರಾಜ್ಯ ವಿದಾನಸಭಾ ಚುನಾವಣೆಗೆ(Karnataka Assembly Elections 2023) ಬಿಜೆಪಿ 2ನೇ ಪಟ್ಟಿ ರಿಲೀಸ್ ಮಾಡಿದ್ದು ಬಿಜೆಪಿ ವಲಯದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಶಿಕಾರಿಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ(BY Vijayendra) ಪ್ರತಿಕ್ರಿಯೆ ನೀಡಿದ್ದಾರೆ. ವಿಸ್ತೃತವಾಗಿ ಕಾರ್ಯಕರ್ತರ ಅಭಿಪ್ರಾಯ ಪಡೆದು, ಸರ್ವೇ ಮಾಡಿ ಟಿಕೆಟ್ ನೀಡಲಾಗಿದೆ. ಮಹಿಳೆಯರಿಗೆ, ಸಮಾಜದ ಎಲ್ಲಾ ವರ್ಗಗಳಿಗೆ ಅವಕಾಶ ಕೊಡಲಾಗಿದೆ. ಕಾರ್ಯಕರ್ತರ ಅಭಿಪ್ರಾಯ ಪಡೆದು ಟಿಕೆಟ್ ಕೊಟ್ಟಿರೋದು ಇದೊಂದೇ ಪಕ್ಷ. ಟಿಕೆಟ್ ಮಿಸ್ ಆದವರಿಂದ ಅಸಮಾಧಾನ, ಬಂಡಾಯ ಅನ್ನೋದು ಸಹಜ. ಪೈಪೋಟಿ ಸಹಜವಾಗಿ ಇದ್ದೇ ಇದೆ. ಇದೆಲ್ಲವನ್ನೂ ಕೂಡ ಸಿಎಂ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ, ಪಕ್ಷದ ಅಧ್ಯಕ್ಷರು ಕೂತು ಮಾತಾಡಿ ಸರಿ ಪಡಿಸುತ್ತಾರೆ ಎಂದರು.

ಲಕ್ಷ್ಮಣ್ ಸವದಿ ಅವರಿಗೆ ಪಕ್ಷ ಏನೇನು ಕೊಟ್ಟಿದೆ ಅಂತ ಎಲ್ಲರಿಗೂ ಗೊತ್ತಿದೆ. ಇದನ್ನೆಲ್ಲಾ ಪಕ್ಷದ ಹಿರಿಯರು ಸರಿ ಮಾಡುವ ಕೆಲಸ ಮಾಡ್ತಾರೆ. ವರುಣ ಸೇರಿದಂತೆ ಪಕ್ಷ ಎಲ್ಲಿ ಹೇಳುತ್ತೋ ಅಲ್ಲಿ ಪ್ರಚಾರ ಮಾಡುತ್ತೇನೆ ಎಂದು ವಿಜಯೇಂದ್ರ ತಿಳಿಸಿದರು. ಇನ್ನು ಬಿಎಸ್ ಯಡಿಯೂರಪ್ಪ ಪುತ್ರ ಎಂಬ ಕಾರಣಕ್ಕೆ ಟಿಕೆಟ್ ನೀಡಿದ್ದಾರೆಂಬ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ನಾನು ಹಲವಾರು ವರ್ಷಗಳಿಂದ ಸಂಘಟನೆ ಕೆಲಸ ಮಾಡಿದ್ದೇನೆ. ಬಿಎಸ್ ವೈ ಮಗ ಅಂತ ಟಿಕೆಟ್ ಕೊಡೋದೇ ಆಗಿದ್ರೆ, ಕಳೆದ ಬಾರಿಯೇ ವರುಣದಿಂದ ಟಿಕೆಟ್ ಸಿಕ್ತಾ ಇತ್ತು.

ಇದನ್ನೂ ಓದಿ: Karnataka Assembly Election: ಸಿದ್ದರಾಮಯ್ಯ ಜೀ ಕೋ ಗುಸ್ಸಾ ಕ್ಯೋಂ ಆತಾ ಹೈ? ಮತ್ತೊಮ್ಮೆ ಸಾರ್ವಜನಿಕವಾಗಿ ರೇಗಿದ ವಿರೋಧ ಪಕ್ಷದ ನಾಯಕ!

ಇಂಥಹ ಪರಿಪಾಠ ಈ‌ ಪಕ್ಷದಲ್ಲಿ ಇಲ್ಲ. ಪಕ್ಷ ಅವಲೋಕನ ಮಾಡಿಯೇ ಟಿಕೆಟ್ ಕೊಡುವುದು. ಬಿಎಸ್ ವೈ ಮಗ ಅಂತ ಟಿಕೆಟ್ ಕೊಟ್ಟಿದಾರೆ ಅಂತ ನನಗೆ ಅನ್ನಿಸಿಲ್ಲ. 19 ರಂದು ನಾನು ನಾಮಪತ್ರ ಸಲ್ಲಿಕೆ ಮಾಡುತ್ತೇನೆ. ಶಿರಾ ಹಾಗೂ ಕೆ.ಆರ್. ಪೇಟೆಯಲ್ಲಿ ಗೆದ್ದದ್ದು ವಿಜಯೇಂದ್ರನಿಂದ ಅಲ್ಲ. ಕಾರ್ಯಕರ್ತರ ಸಂಘಟನೆಯಿಂದ ನಾವು ಅಲ್ಲಿ ಆಗ ಗೆದ್ದೆವು. ವಿಜಯೇಂದ್ರ ಅನ್ನೋದು ನೆಪ ಮಾತ್ರ. ಯಾರು ಸಿಎಂ ಆಗ್ತಾರೆ ಅನ್ನೋದು‌ ಮುಖ್ಯ ಅಲ್ಲ. ಬಿಜೆಪಿ ಅಧಿಕಾರಕ್ಕೆ ಬರೋದು ಮುಖ್ಯ ಎಂದರು.

ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:15 pm, Thu, 13 April 23

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್