AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂಕೋರ್ಟ್ ಆದೇಶ ಬಂದರೆ ಬಿಬಿಎಂಪಿ ಚುನಾವಣೆ; ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ

ಕಾಂಗ್ರೆಸ್​ನಿಂದ ಬಿಜೆಪಿಗೆ ಬಂದವರಿಗೆ ಚುನಾವಣೆಯಲ್ಲಿ ಟಿಕೆಟ್ ನೀಡಲು ಶಾಸಕರು ಒಲವು ತೋರುತ್ತಿದ್ದಾರೆ. ಶಾಸಕರ ಜೊತೆಗೆ ಸ್ಥಳೀಯ ಕಾಂಗ್ರೆಸ್ ಕಾರ್ಪೋರೇಟರ್​ಗಳು ಕೂಡಾ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ.

ಸುಪ್ರೀಂಕೋರ್ಟ್ ಆದೇಶ ಬಂದರೆ ಬಿಬಿಎಂಪಿ ಚುನಾವಣೆ; ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 26, 2021 | 9:19 AM

Share

ಬೆಂಗಳೂರು: ಸಾಕಷ್ಟು ವಿಳಂಬವಾಗಿರುವ ಬಿಬಿಎಂಪಿ (BBMP) ಚುನಾವಣೆ ಸುಪ್ರೀಂಕೋರ್ಟ್ ಆದೇಶ ಬಂದರೆ ನಡೆಯಲಿದೆ. ಅಲ್ಲದೇ ಬಿಬಿಎಂಪಿ ಚುನಾವಣೆ ನಡೆಸಬೇಕೆಂದು ಶಾಸಕರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮೇಲೆ ಒತ್ತಡ ಹೇರಿದ್ದಾರೆ. ಬಿಬಿಎಂಪಿ ಚುನಾವಣೆ ಬಗ್ಗೆ ಚರ್ಚೆ ಶುರುವಾದ ಬೆನ್ನಲೆ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಆತಂಕ ಶುರುವಾಗಿದೆ. ಇನ್ನು ಚುನಾವಣೆ ಹಿನ್ನೆಲೆ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಬಿಜೆಪಿ ಟಿಕೆಟ್ ವಿಚಾರವಾಗಿ ಅಸಮಾಧಾನ ಸ್ಫೋಟಗೊಂಡಿದೆ.

ಕಾಂಗ್ರೆಸ್​ನಿಂದ ಬಿಜೆಪಿಗೆ ಬಂದವರಿಗೆ ಚುನಾವಣೆಯಲ್ಲಿ ಟಿಕೆಟ್ ನೀಡಲು ಶಾಸಕರು ಒಲವು ತೋರುತ್ತಿದ್ದಾರೆ. ಶಾಸಕರ ಜೊತೆಗೆ ಸ್ಥಳೀಯ ಕಾಂಗ್ರೆಸ್ ಕಾರ್ಪೋರೇಟರ್​ಗಳು ಕೂಡಾ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ. ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಬಂದವರಿಗೆ ಟಿಕೆಟ್ ಕೊಡಲು ಚಿಂತನೆ ನಡೆಸಲಾಗುತ್ತಿದೆ. ಇದಕ್ಕೆ ಮೂಲ ಬಿಜೆಪಿಗರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

ಕಳೆದ ಬಾರಿ ಇವರ ಎದುರು ಸ್ಪರ್ಧಿಸಿ ನಾವು ಸೋತಿದ್ದೇವೆ. ಈಗ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿಗೆ ಬಂದವರಿಗೆ ಟಿಕೆಟ್ ಕೊಟ್ಟರೆ ನಾವೇನು ಮಾಡುವುದೆಂದು ಪ್ರಶ್ನಿಸಿದ್ದಾರೆ. ಮತ್ತೊಂದೆಡೆ ಅಭ್ಯರ್ಥಿಗಳಿಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಸಮಸ್ಯೆ ಎದುರಾಗಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಬಿಜೆಪಿ ಸೇರಿರುವ ಹಿನ್ನೆಲೆ ಗೆಲ್ಲುವ ಹೊಸ ಅಭ್ಯರ್ಥಿಗಳಿಗಾಗಿ ಕಾಂಗ್ರೆಸ್ ಹುಡುಕಾಟ ನಡೆಸುತ್ತಿದೆ.

ಇದನ್ನೂ ಓದಿ

ಶಿಕ್ಷಣ ವ್ಯವಸ್ಥೆ ಬದಲಾವಣೆಗೆ ನನ್ನ ಬಲಿದಾನ ದಾರಿ ದೀಪವಾಗಲಿ’, ಅಂತ್ಯಸಂಸ್ಕಾರಕ್ಕೆ ಸಿಎಂ ಬೊಮ್ಮಾಯಿ ಬರಬೇಕು; ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಇಂದು ಅಯೋಧ್ಯೆಯಲ್ಲಿ ರಾಮಲಲ್ಲಾಗೆ ಫೂಜೆ ಸಲ್ಲಿಸಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್; ಬಿಜೆಪಿಯಿಂದ ವ್ಯಂಗ್ಯ​