Sign In

By signing in or creating an account, you agree with Associated Broadcasting Company's Terms & Conditions and Privacy Policy.

Janotsav: ನಾಳೆ ನಡೆಯಬೇಕಿದ್ದ ಬಿಜೆಪಿಯ ಜನೋತ್ಸವ ಭಾನುವಾರಕ್ಕೆ ಮುಂದೂಡಿಕೆ

ನಾಳೆ (ಸೆ. 8) ರಂದು ನಡೆಯಬೇಕಿದ್ದ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು ಭಾನುವಾರ (ಸೆ. 11) ಕ್ಕೆ ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿಯಲ್ಲಿ ಹೇಳಿದ್ದಾರೆ.

Janotsav: ನಾಳೆ ನಡೆಯಬೇಕಿದ್ದ ಬಿಜೆಪಿಯ ಜನೋತ್ಸವ ಭಾನುವಾರಕ್ಕೆ ಮುಂದೂಡಿಕೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 07, 2022 | 3:43 PM

ಬೆಂಗಳೂರು: ನಾಳೆ (ಸೆ. 8) ರಂದು ನಡೆಯಬೇಕಿದ್ದ ಬಿಜೆಪಿಯ (BJP) ಜನೋತ್ಸವ (Janostav) ಕಾರ್ಯಕ್ರಮವನ್ನು ಭಾನುವಾರ (ಸೆ. 11) ಕ್ಕೆ ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಬೆಳಗಾವಿಯಲ್ಲಿ (Belagavi) ಹೇಳಿದ್ದಾರೆ. ದೊಡ್ಡಬಳ್ಳಾಪುರ ಪಟ್ಟಣದಲ್ಲಿ ನಿಗದಿಯಾಗಿದ್ದ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು, ಅರಣ್ಯ ಸಚಿವ ಉಮೇಶ್ ಕತ್ತಿ ನಿಧನರಾದ ಹಿನ್ನೆಲೆ ಮುಂದೂಡಲಾಗಿದೆ ಎಂದು ಹೇಳಿದರು.

ಹೃದಯಾಘಾತದಿಂದ ಅರಣ್ಯ ಸಚಿವ ಉಮೇಶ್ ಕತ್ತಿ(61) ನಿಧನವಾದ ಹಿನ್ನೆಲೆ ರಾಜ್ಯಾದ್ಯಂತ 3 ದಿನಗಳ ಕಾಲ ಶೋಕಾಚರಣೆಗೆ ನಿರ್ಧರಿಸಿದ್ದೇವೆ. ಶೋಕಾಚರಣೆ ಹಿನ್ನೆಲೆ ಯಾವುದೇ ಸರ್ಕಾರ ಕಾರ್ಯಕ್ರಮವಿರುವುದಿಲ್ಲ. ತುರ್ತಾಗಿ ಪ್ರವಾಹ ನಿರ್ವಹಣೆ ಬಿಟ್ಟರೆ ಸರ್ಕಾರದ ಕಾರ್ಯಕ್ರಮವಿಲ್ಲ ಎಂದರು.

ಉಮೇಶ್ ಕತ್ತಿ ಆತ್ಮಿಯ ಸ್ನೇಹಿತ ಸಚಿವ ಸಂಪುಟದ ಹಿರಿಯ ಸಹೋದ್ಯೋಗಿ ರಾಜ್ಯ ಕಂಡ ಧಿಂಮತ ನಾಯಕರಾಗಿದ್ದರು. ನಾನು ಭಾರದ ಹೃದಯದಿಂದ ಬೆಳಗಾವಿಗೆ ಬಂದಿದ್ದೇನೆ. ಈ ಸಂದರ್ಭದಲ್ಲಿ ಹೆಚ್ಚು ಮಾತನಾಡಲ್ಲ. ಅಂತ್ಯಕ್ರಿಯೆಗೆ ಎಲ್ಲ ವ್ಯವಸ್ಥೆ ಮಾಡಲಾಗಿದೆ, ಅಂತಿಮ ದರ್ಶನಕ್ಕೂ ವ್ಯವಸ್ಥೆ ಇದೆ. ಜನರು ದೊಡ್ಡ ಪ್ರಮಾಣದಲ್ಲಿ ಬಂದಿದ್ದಾರೆ, ಜನ ಸಹಕಾರ ಮಾಡಬೇಕು. ರಾಜ್ಯ ಸರ್ಕಾರದಿಂದ ಗೌರವ ಸಲ್ಲಿಕೆ ಮಾಡುತ್ತೆವೆ ಎಂದು ತಿಳಿಸಿದರು.

ಜನೋತ್ಸವ ಹಿನ್ನೆಲೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಬಿಜೆಪಿ ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಆಯೋಜಿಸಲಾಗಿತ್ತು. ಆದರೆ ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ನಡೆದಿದ್ದು, ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಕಾರ್ಯಕರ್ತರಿಂದಲೇ ಸರ್ಕಾರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಜನೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್​ 8 ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಈಗ ಅರಣ್ಯ ಸಚಿವ ಉಮೇಶ ಕತ್ತಿ ಹೃದಯಾಘಾತದಿಂದ ನಿಧನ ಹೊಂದಿದ ಹಿನ್ನೆಲೆ ಜನೋತ್ಸವ ಕಾರ್ಯಕ್ರಮವನ್ನು ಸೆ. 11 ಭಾನುವಾರಕ್ಕೆ ಮುಂದೂಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:16 pm, Wed, 7 September 22

ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ
ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ
ನಿನ್ನ ಕೋಚ್ ಕೂಡ ಗೊತ್ತು ಕಣೋ... ಎಲ್ಲೆ ಮೀರಿದ ಕಿರಿಕ್ ಕೊಹ್ಲಿ
ನಿನ್ನ ಕೋಚ್ ಕೂಡ ಗೊತ್ತು ಕಣೋ... ಎಲ್ಲೆ ಮೀರಿದ ಕಿರಿಕ್ ಕೊಹ್ಲಿ