AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ; ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ

ರಾಜೀನಾಮೆ ಕೊಡ್ಬೇಕು. ಸಿಎಂ ರಾಜೀನಾಮೆ ಕೊಡ್ಬೇಕು. ಭ್ರಷ್ಟ ಕಾಂಗ್ರೆಸ್ ತೊಲಗಬೇಕು ಎಂದು ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ, ಇತ್ತ ವಿಧಾನಸೌಧದಲ್ಲಿ ಬಿಜೆಪಿ-ಜೆಡಿಎಸ್ ದೋಸ್ತಿಗಳು ಕೂಡ ಅಖಾಡಕ್ಕೆ ಇಳಿದಿದ್ದಾರೆ. ರಾಜ್ಯಪಾಲ ನಡೆ ಖಂಡಿಸಿ ಕಾಂಗ್ರೆಸ್ ಹೋರಾಟ ನಡೆಸಿದ್ರೆ, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಿಎಂ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ; ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ
ಬಿಜೆಪಿ-ಜೆಡಿಎಸ್ ಪ್ರತಿಭಟನೆ
TV9 Web
| Updated By: ಆಯೇಷಾ ಬಾನು|

Updated on: Aug 19, 2024 | 2:29 PM

Share

ಬೆಂಗಳೂರು, ಆಗಸ್ಟ್​.19: ಸಿಎಂ ಸಿದ್ದರಾಮಯ್ಯ (Siddaramaiah) ರಾಜೀನಾಮೆಗೆ ಒತ್ತಾಯಿಸಿ ಪಾದಯಾತ್ರೆ ನಡೆಸಿದ್ದ ಬಿಜೆಪಿ-ಜೆಡಿಎಸ್ ನಾಯಕರಿಗೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಬ್ರಹ್ಮಾಸ್ತ್ರವಾಗಿ ಸಿಕ್ಕಿದೆ. ಹೀಗಾಗಿ ಇದೇ ಬ್ರಹ್ಮಾಸ್ತ್ರವನ್ನ ಬಳಸಿಕೊಂಡು ಹೋರಾಟಕ್ಕಿಳಿದಿರೋ ದೋಸ್ತಿಗಳು ಇವತ್ತು ಕಾಂಗ್ರೆಸ್ ಸರ್ಕಾರದ (Congress Government) ವಿರುದ್ಧ ಪ್ರತಿಭಟನೆ ಮಾಡಿದ್ರು. ಬೆಂಗಳೂರಿನ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದ್ರು. ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್‌ನ ನಾಯಕರು ಪ್ರತಿಭಟನೆ ನಡೆಸಿ ಸಿಎಂ ವಿರುದ್ಧ ಆಕ್ರೋಶ ಹೊರಹಾಕಿದ್ರು.

ಪ್ರತಿಭಟನೆ ವೇಳೆ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ಈ ಹಿಂದೆ ನೀಡಿದ್ದ ಹೇಳಿಕೆಯೊಂದರ ವಿಡಿಯೋ ಪ್ರದರ್ಶನ ಮಾಡಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಅಂದಿನ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ಅವಧಿಯಲ್ಲಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿದ್ದ ವಿಡಿಯೋ ಪ್ರದರ್ಶಿಸಿದ್ದಾರೆ. ವಿಡಿಯೋ ಪ್ಲೇ ಮಾಡಿ, ಸಿದ್ದರಾಮಯ್ಯ ಹೇಳಿಕೆ ನೀಡಿದ್ದ ಆಡಿಯೋವನ್ನ ಪ್ರತಿಭಟನೆಯಲ್ಲೇ ಪ್ರಸಾರ ಮಾಡಿದ್ದಾರೆ.

ಇದನ್ನೂ ಓದಿ: ರಾಜಕೀಯವಾಗಿ ನನ್ನನ್ನು ಮುಗಿಸಿಬಿಟ್ರೆ, ಇಡೀ ಕಾಂಗ್ರೆಸ್​ ಪಕ್ಷವನ್ನೇ ಮುಗಿಸಬಹುದು ಎಂಬ ಭ್ರಮೆಯಲ್ಲಿದ್ದಾರೆ – ಸಿದ್ದರಾಮಯ್ಯ

ಯಡಿಯೂರಪ್ಪರಂತೆ ತಲೆ ಭಾಗಿ ಸಿದ್ದರಾಮಯ್ಯ ರಾಜೀನಾಮೆ ಕೊಡ್ಬೇಕು ಅಂತಾ ವಿಪಕ್ಷ ನಾಯಕ ಆರ್‌.ಅಶೋಕ್ ಒತ್ತಾಯಿಸಿದ್ರು. ಸಿಎಂ ಸಿದ್ದರಾಮಯ್ಯನವರೇ ನೀವು ಕಳ್ಳತನ ಮಾಡಿದ್ದೀರಿ, ಲೂಟಿ ಹೊಡೆದಿದ್ದೀರಿ ಅಂತ ನಾವು ಹೇಳಿದ್ದೇವೆ. ಹೀಗಾಗಿ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಹಾಕಬೇಕು ಅಂತ ಒತ್ತಾಯಿಸಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಟಾಂಗ್ ಕೊಟ್ಟಿದ್ದಾರೆ. ವಿರೋಧಪಕ್ಷದ ನಾಯಕ ಆರ್.ಅಶೋಕ್ ಮತ್ತೊಮ್ಮೆ ತಮ್ಮ ಅಜ್ಞಾನವನ್ನು ಪ್ರದರ್ಶಿಸಿದ್ದಾರೆ ಅಂತಾ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ.ವೈ ವಿಜಯೇಂದ್ರ ಕಿಡಿ

ಪ್ರತಿಭಟನೆ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸಿಎಂ ವಿರುದ್ಧ ಗುಡುಗಿದರು, ಸಿಎಂ ಸಿದ್ದರಾಮಯ್ಯರನ್ನ ಟಾರ್ಗೆಟ್​ ಮಾಡಿ ಗರಂ ಆದ್ರು. ಸಿದ್ದರಾಮಯ್ಯನವರೇ ಭಂಡತನ ಬಿಟ್ಟು ರಾಜೀನಾಮೆ ಕೊಡಿ, ಮನೆಗೆ ತೊಲಗಿ ಅಂತೆಲ್ಲಾ ಆಕ್ರೋಶ ಭರಿತವಾಗಿ ಕಿಡಿಕಾರಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!