ಪ್ರಧಾನಿ ಮೋದಿ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲಗಳ ಬೆಲೆ ಹೆಚ್ಚಳದ ಹಣವನ್ನು ಬಡವರ ಯೋಜನೆಗೆ ಬಳಸುತ್ತಾರೆ: ಅರುಣ್ ಸಿಂಗ್

ಯಾರೂ ಒಂದು ಈರುಳ್ಳಿ, ಒಂದು ಟೊಮ್ಯಾಟೋ ಬಗ್ಗೆ ಚರ್ಚಿಸಬೇಡಿ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ಹಣದುಬ್ಬರ ನಿಯಂತ್ರಣದಲ್ಲಿ ಇದೆ. ಈಕುರಿತು ಚರ್ಚೆ ನಡೆಸಿ ಎಂದು ಅವರು ಮನವಿ ಮಾಡಿದರು.

ಪ್ರಧಾನಿ ಮೋದಿ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲಗಳ ಬೆಲೆ ಹೆಚ್ಚಳದ ಹಣವನ್ನು ಬಡವರ ಯೋಜನೆಗೆ ಬಳಸುತ್ತಾರೆ: ಅರುಣ್ ಸಿಂಗ್
ಅರುಣ್ ಸಿಂಗ್
Follow us
TV9 Web
| Updated By: guruganesh bhat

Updated on: Sep 02, 2021 | 8:54 PM

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಡವರ ಪರ ಹಮ್ಮಿಕೊಂಡಿರುವ ಹಲವು ಯೋಜನೆಗಳಿಗೆ ಹಣದ ಅವಶ್ಯಕತೆ ಇದ್ದು, ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆ ಹೆಚ್ಚಳವಾದ ಹಣದಿಂದ ಭರಿಸಲಾಗುವುದು. ಮುಂದಿನ ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಆಗುವ ವಿಶ್ವಾಸವಿದೆ. ಯಾರೂ ಒಂದು ಈರುಳ್ಳಿ, ಒಂದು ಟೊಮ್ಯಾಟೋ ಬಗ್ಗೆ ಚರ್ಚಿಸಬೇಡಿ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ಹಣದುಬ್ಬರ ನಿಯಂತ್ರಣದಲ್ಲಿ ಇದೆ. ಈಕುರಿತು ಚರ್ಚೆ ನಡೆಸಿ ಎಂದು ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಲವರ್ಧನೆಗೆ ಪ್ರವಾಸ ಮಾಡಿದ್ದೇನೆ. ಪಕ್ಷ ಬಲವರ್ಧನೆಗೆ ಬೂತ್ ಕಮಿಟಿಗಳು ರಚನೆಯಾಗಬೇಕು. ನಾವು ನಳೀನ್ ಕುಮಾರ್ ಕಟೀಲ್ ಮತ್ತು ಬೊಮ್ಮಾಯಿ‌ ನೇತೃತ್ವದಲ್ಲಿ ಕೆಲಸ ಮಾಡುತ್ತಿರುವ ರೀತಿ ನೋಡಿದರೆ ಖಂಡಿತವಾಗಿಯೂ ಹಳೆ ಮೈಸೂರು ಭಾಗದಲ್ಲಿ ಪಕ್ಷ ಹೆಚ್ಚಿನ ಸ್ಥಾನ ಗಳಿಸುತ್ತದೆ. ಹಳೆ ಮೈಸೂರು ಭಾಗದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲಲು ಪ್ರತಿ ಕಾರ್ಯಕರ್ತರು ಕಟಿಬದ್ಧರಾಗಿ ಕೆಲಸ ಮಾಡುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಯೋಜನೆಗಳು ಜನಪ್ರಿಯಗೊಳ್ಳಬೇಕು, ಜನರಿಗೆ ತಲುಪಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸರ್ಕಾರದ ಯೋಜನೆಗಳು ಜನಪ್ರಿಯಗೊಳ್ಳಬೇಕು. ಆ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು ಎಂದು ಅವರು ಕರೆ ನೀಡಿದರು. ಕಾರ್ಯಕರ್ತರಿಗೆ ಈ ಸೂಚನೆಗಳನ್ನು ನೀಡಿದ್ದೇನೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಕರ್ನಾಟಕದಲ್ಲಿ ಡಬಲ್ ಇಂಜಿನ್ ಸರ್ಕಾರ ಇದೆ. ಕರ್ನಾಟಕದಲ್ಲಿ ಅಭಿವೃದ್ಧಿ ಕೆಲಸ ಆಗುತ್ತದೆ ಎಂದ ಅವರು ಮಾಜಿ ಸಿಎಂ ಕುಮಾರಸ್ವಾಮಿ ಗೌರವದಿಂದ ಮಾತನಾಡಬೇಕು ಎಂದು ಸಹ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.

ಇದನ್ನೂ ಓದಿ: 

ಬೆಂಗಳೂರಿನ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ; 8-9 ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್: ದೇವೇಗೌಡ

ಬಿಜೆಪಿ ನಾಯಕರಿಗೆ ಅಧಿಕಾರದ ಮದ ಹೆಚ್ಚಾಗಿದೆ, ವೋಟ್ ಹಾಕ್ಬೇಡಿ; ವೈರಲ್ ಆಯ್ತು ಕಲಬುರಗಿಯ ಬಿಜೆಪಿ ಕಾರ್ಯಕರ್ತನ ಹೇಳಿಕೆ (BJP Karnataka in charge Arun Singh says PM Modi uses petrol diesel and LPG price hike money for the poor)

Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ