ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಡವರ ಪರ ಹಮ್ಮಿಕೊಂಡಿರುವ ಹಲವು ಯೋಜನೆಗಳಿಗೆ ಹಣದ ಅವಶ್ಯಕತೆ ಇದ್ದು, ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆ ಹೆಚ್ಚಳವಾದ ಹಣದಿಂದ ಭರಿಸಲಾಗುವುದು. ಮುಂದಿನ ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಆಗುವ ವಿಶ್ವಾಸವಿದೆ. ಯಾರೂ ಒಂದು ಈರುಳ್ಳಿ, ಒಂದು ಟೊಮ್ಯಾಟೋ ಬಗ್ಗೆ ಚರ್ಚಿಸಬೇಡಿ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ಹಣದುಬ್ಬರ ನಿಯಂತ್ರಣದಲ್ಲಿ ಇದೆ. ಈಕುರಿತು ಚರ್ಚೆ ನಡೆಸಿ ಎಂದು ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಲವರ್ಧನೆಗೆ ಪ್ರವಾಸ ಮಾಡಿದ್ದೇನೆ. ಪಕ್ಷ ಬಲವರ್ಧನೆಗೆ ಬೂತ್ ಕಮಿಟಿಗಳು ರಚನೆಯಾಗಬೇಕು. ನಾವು ನಳೀನ್ ಕುಮಾರ್ ಕಟೀಲ್ ಮತ್ತು ಬೊಮ್ಮಾಯಿ ನೇತೃತ್ವದಲ್ಲಿ ಕೆಲಸ ಮಾಡುತ್ತಿರುವ ರೀತಿ ನೋಡಿದರೆ ಖಂಡಿತವಾಗಿಯೂ ಹಳೆ ಮೈಸೂರು ಭಾಗದಲ್ಲಿ ಪಕ್ಷ ಹೆಚ್ಚಿನ ಸ್ಥಾನ ಗಳಿಸುತ್ತದೆ. ಹಳೆ ಮೈಸೂರು ಭಾಗದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲಲು ಪ್ರತಿ ಕಾರ್ಯಕರ್ತರು ಕಟಿಬದ್ಧರಾಗಿ ಕೆಲಸ ಮಾಡುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಯೋಜನೆಗಳು ಜನಪ್ರಿಯಗೊಳ್ಳಬೇಕು, ಜನರಿಗೆ ತಲುಪಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ಯೋಜನೆಗಳು ಜನಪ್ರಿಯಗೊಳ್ಳಬೇಕು. ಆ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು ಎಂದು ಅವರು ಕರೆ ನೀಡಿದರು. ಕಾರ್ಯಕರ್ತರಿಗೆ ಈ ಸೂಚನೆಗಳನ್ನು ನೀಡಿದ್ದೇನೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಕರ್ನಾಟಕದಲ್ಲಿ ಡಬಲ್ ಇಂಜಿನ್ ಸರ್ಕಾರ ಇದೆ. ಕರ್ನಾಟಕದಲ್ಲಿ ಅಭಿವೃದ್ಧಿ ಕೆಲಸ ಆಗುತ್ತದೆ ಎಂದ ಅವರು ಮಾಜಿ ಸಿಎಂ ಕುಮಾರಸ್ವಾಮಿ ಗೌರವದಿಂದ ಮಾತನಾಡಬೇಕು ಎಂದು ಸಹ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.
ಇದನ್ನೂ ಓದಿ:
ಬೆಂಗಳೂರಿನ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ; 8-9 ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್: ದೇವೇಗೌಡ
ಬಿಜೆಪಿ ನಾಯಕರಿಗೆ ಅಧಿಕಾರದ ಮದ ಹೆಚ್ಚಾಗಿದೆ, ವೋಟ್ ಹಾಕ್ಬೇಡಿ; ವೈರಲ್ ಆಯ್ತು ಕಲಬುರಗಿಯ ಬಿಜೆಪಿ ಕಾರ್ಯಕರ್ತನ ಹೇಳಿಕೆ
(BJP Karnataka in charge Arun Singh says PM Modi uses petrol diesel and LPG price hike money for the poor)