AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ.ಎಸ್​.ಯಡಿಯೂರಪ್ಪ ರಾಜೀನಾಮೆ ವಿಚಾರದ ಬಗ್ಗೆ ಅರುಣ್​ ಸಿಂಗ್​ ಮೌನ; ಅಚ್ಚರಿ ಮೂಡಿಸಿದ ರಾಜ್ಯ ಉಸ್ತುವಾರಿಯ ನಡೆ

Arun Singh: ಪಕ್ಷದಲ್ಲಿ ಸಣ್ಣ ಮಟ್ಟದ ಆಂತರಿಕ ಭಿನ್ನಾಭಿಪ್ರಾಯಗಳು ಎದ್ದು, ಬಸನಗೌಡ ಪಾಟೀಲ್​ ಯತ್ನಾಳ್​ ಅವರು ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಒತ್ತಿಒತ್ತಿ ಹೇಳಿದಾಗಲೂ ಅರುಣ್​ ಸಿಂಗ್​ ವಹಿಸಿಕೊಂಡು ಬಂದಿದ್ದರು.

ಬಿ.ಎಸ್​.ಯಡಿಯೂರಪ್ಪ ರಾಜೀನಾಮೆ ವಿಚಾರದ ಬಗ್ಗೆ ಅರುಣ್​ ಸಿಂಗ್​ ಮೌನ; ಅಚ್ಚರಿ ಮೂಡಿಸಿದ ರಾಜ್ಯ ಉಸ್ತುವಾರಿಯ ನಡೆ
ಅರುಣ್ ಸಿಂಗ್
TV9 Web
| Edited By: |

Updated on:Jul 22, 2021 | 11:17 AM

Share

ಇನ್ನೆರಡು ಮೂರು ದಿನಗಳಲ್ಲಿ ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುತ್ತಾರೆ ಎಂಬುದು ಬಹುತೇಕ ಖಚಿತವಾಗುತ್ತಿದೆ. ಅದರಲ್ಲೂ ಇಂದು ಧನ್ವಂತರಿ ಹೋಮ ನಡೆಸಿದ ಯಡಿಯೂರಪ್ಪ ಬಳಿಕ ಮಾತನಾಡಿದ್ದನ್ನು ಕೇಳಿದರೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಖಂಡಿತವಾಗಿ ಆಗುತ್ತದೆ ಎಂದೇ ಹೇಳಲಾಗುತ್ತಿದೆ. ಇಷ್ಟೆಲ್ಲದರ ಮಧ್ಯೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ ಮೌನವೂ ಅಷ್ಟೇ ಕುತೂಹಲ ಕೆರಳಿಸಿದೆ. ಇತ್ತೀಚೆಗೆ ದೆಹಲಿಗೆ ಹೋಗಿದ್ದ ಬಿ.ಎಸ್​.ಯಡಿಯೂರಪ್ಪ ತುಂಬ ಖುಷಿಯಾಗಿಯೇ ವಾಪಸ್ ಬಂದಿದ್ದರು. ಆದರೆ ಅದರ ಬೆನ್ನಲ್ಲೇ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್​ ಅವರದ್ದು ಎನ್ನಲಾದ ಆಡಿಯೋವೊಂದು ವೈರಲ್ ಆಗಿ ಸಂಚಲನ ಸೃಷ್ಟಿಸಿತ್ತು. ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಖಚಿತ ಎಂಬ ಮಾತುಗಳು ಅದಾಗಿದ್ದವು. ಅಷ್ಟಾದರೂ ಸುಮ್ಮನಿದ್ದ ಬಿ.ಎಸ್​. ಯಡಿಯೂರಪ್ಪ ಇಂದು ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

ಆದರೆ ಅರುಣ್​ ಸಿಂಗ್​ ಯಾಕೆ ಏನೂ ಪ್ರತಿಕ್ರಿಯೆ ನೀಡುತ್ತಿಲ್ಲ ಎಂಬುದು ಕುತೂಹಲ ಕೆರಳಿಸಿದೆ. ಪಕ್ಷದಲ್ಲಿ ಸಣ್ಣ ಮಟ್ಟದ ಆಂತರಿಕ ಭಿನ್ನಾಭಿಪ್ರಾಯಗಳು ಎದ್ದು, ಬಸನಗೌಡ ಪಾಟೀಲ್​ ಯತ್ನಾಳ್​ ಅವರು ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಒತ್ತಿಒತ್ತಿ ಹೇಳಿದಾಗಲೂ ಅರುಣ್​ ಸಿಂಗ್​ ವಹಿಸಿಕೊಂಡು ಬಂದಿದ್ದರು. ಅಂಥ ಮಾತುಗಳಿಗೆ ತಲೆಕೆಡಿಸಿಕೊಳ್ಳಬೇಡಿ. ಕರ್ನಾಟಕದಲ್ಲಿ ಮುಖ್ಯಮಂತ್ರಿ ರಾಜೀನಾಮೆ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದೇ ಹೇಳಿದ್ದರು. ಆದರೀಗ ಮುಖ್ಯಮಂತ್ರಿ ರಾಜೀನಾಮೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಅರುಣ್​ ಸಿಂಗ್​ ಸಿದ್ಧರಿಲ್ಲ.  ಈ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದ್ದಕ್ಕೆ, ಏನೂ ಉತ್ತರ ನೀಡದ ಅವರು, ಮುಂದೊಂದು ದಿನ ಟೀ ಕುಡಿಯೋಣ ಎಂದು ಹೇಳಿ ಹೋಗಿದ್ದಾರೆ.   ರಾಜ್ಯ ರಾಜಕಾರಣ ಮತ್ತಷ್ಟು ಕುತೂಹಲ ಉಂಟು ಮಾಡಿದೆ. ಬಿಜೆಪಿ ವಲಯದಲ್ಲಿ ಏನಾಗುತ್ತಿದೆ ಎಂಬ ಸ್ಪಷ್ಟತೆಯೇ ಸಿಗದಂತಾಗಿದೆ.

ಇದನ್ನೂ ಓದಿ: Big Breaking: ಸಿಎಂ ಹುದ್ದೆಗೆ ರಾಜೀನಾಮೆ? ಸುಳಿವು ನೀಡಿದ ಬಿಎಸ್ ಯಡಿಯೂರಪ್ಪ

BJP Karnataka Incharge Arun Singh is not speaking on BS Yediyurappa resignation

Published On - 11:14 am, Thu, 22 July 21

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್