ವೋಟರ್​ ಐಡಿ ಅಕ್ರಮ: ನಕಲಿ ಮತದಾರರ ಹೆಸರು ಬಿಟ್ಟು ಹೋಗಿರುವುದರಿಂದ ಕಾಂಗ್ರೆಸ್ಸ್​​ಗೆ​ ಗೆಲ್ಲುವುದು ಸಾಧ್ಯವಿಲ್ಲವೆಂದು ಅನಿಸುತ್ತಿದೆ- ಕಟೀಲ್​ ಆರೋಪ

| Updated By: ವಿವೇಕ ಬಿರಾದಾರ

Updated on: Nov 19, 2022 | 3:34 PM

ನಕಲಿ ಮತದಾರರ ಹೆಸರು ಬಿಟ್ಟು ಹೋಗಿರುವುದರಿಂದ ಕಾಂಗ್ರೆಸ್ಸಿಗರಿಗೆ ತಾವು ಗೆಲ್ಲುವುದು ಸಾಧ್ಯವಿಲ್ಲ ಎಂದು ಅನಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಟ್ವೀಟ್​ ಮಾಡಿದ್ದಾರೆ.

ವೋಟರ್​ ಐಡಿ ಅಕ್ರಮ: ನಕಲಿ ಮತದಾರರ ಹೆಸರು ಬಿಟ್ಟು ಹೋಗಿರುವುದರಿಂದ ಕಾಂಗ್ರೆಸ್ಸ್​​ಗೆ​  ಗೆಲ್ಲುವುದು ಸಾಧ್ಯವಿಲ್ಲವೆಂದು ಅನಿಸುತ್ತಿದೆ- ಕಟೀಲ್​ ಆರೋಪ
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​
Follow us on

ಬೆಂಗಳೂರು: ವೋಟರ್ ಐಡಿ ಪರಿಷ್ಕರಣೆಯಲ್ಲಿ ನಡೆದ ಅಕ್ರಮ ಪ್ರಕರಣ (Voters Data Scam, Voters ID Revision) ರಾಜ್ಯ ರಾಜಕೀಯದಲ್ಲಿ ಪರ-ವಿರೋಧದ ಚರ್ಚೆಗೆ ಕಾರಣವಾಗುತ್ತಿದೆ. ಈ ಸಂಬಂಧ ವಿರೋಧ ಪಕ್ಷಗಳು ರಾಜ್ಯ ಬಿಜೆಪಿ ಸರ್ಕಾರವನ್ನು ತೀರ್ವ ಟೀಕೆ ಮಾಡುತ್ತಿದೆ. ಆದ್ರೆ, ಈ ಆರೋಪವನ್ನು ಬಿಜೆಪಿ ತಳ್ಳಿಹಾಕುತ್ತಿದೆ. ಇನ್ನು ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸರಣಿ ಟ್ವೀಟ್​ ಮೂಲಕ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ” ಇದು ನಕಲಿ ಮತದಾರರ ಹೆಸರು ಬಿಟ್ಟು ಹೋಗಿರುವುದರಿಂದ ಕಾಂಗ್ರೆಸ್ಸಿಗರಿಗೆ (Congress) ತಾವು ಗೆಲ್ಲುವುದು ಸಾಧ್ಯವಿಲ್ಲ ಎಂದು ಅನಿಸುತ್ತಿದೆ. ಅದಕ್ಕಾಗಿ ಬಿಜೆಪಿ (BJP) ಮೇಲೆ ಆರೋಪ ಹಾಕುತ್ತಿದ್ದಾರೆ”, ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್ (Nalin Kumar Kateel)​ ಟ್ವೀಟ್​ ಮಾಡಿದ್ದಾರೆ.

ಕಾಂಗ್ರೆಸ್ಸಿಗರ ಆರೋಪಕ್ಕೂ ನಮ್ಮ ಸರಕಾರ, ಪಕ್ಷಕ್ಕೆ ಸಂಬಂಧವಿಲ್ಲ. ಜನರಲ್ಲಿ ಭಾಜಪಾ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸುವ ಕಾಂಗ್ರೆಸ್ಸಿನ ಹತಾಶ ಪ್ರಯತ್ನ ಇದು. ಮತದಾರರ ನೋಂದಣಿ ಕುರಿತು ಜಾಗೃತಿ ಮೂಡಿಸಲು ಪಡೆದುಕೊಂಡ ಅನುಮತಿಯನ್ನು ಚಿಲುಮೆ ಸಂಸ್ಥೆ ದುರ್ಬಳಕೆ ಮಾಡಿಕೊಂಡಿದೆ ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿರುವುದರಿಂದ ತನಿಖೆ ನಡೆಯುತ್ತಿದೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಇದೇ ಸಂಸ್ಥೆಗೆ ಗುತ್ತಿಗೆ ನೀಡಿತ್ತು. ಈಗ ಅದೇ ಸಂಸ್ಥೆಯ ವಿರುದ್ಧ ದೂರು ನೀಡಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ನಮ್ಮ ಪಕ್ಷದ ರಾಜ್ಯ ಸರಕಾರ ಪಾರದರ್ಶಕವಾಗಿರುವುದರಿಂದ ದೂರು ಬಂದ ಹಿನ್ನಲೆಯಲ್ಲಿ ಚಿಲುಮೆಗೆ ನೀಡಿರುವ ಅನುಮತಿಯನ್ನು ಬಿಬಿಎಂಪಿ ರದ್ದುಪಡಿಸಿದೆ. ಆದರೆ ಸೋಲಿನ ಭೀತಿಯಿಂದ ಕಾಂಗ್ರೆಸ್ ಅನಗತ್ಯ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಚಿಲುಮೆ ಸಂಸ್ಥೆ ಮೂಲಕ ಮತದಾರರ ಮಾಹಿತಿ ದುರ್ಬಳಕೆ ಬಗ್ಗೆನೂ ತನಿಖೆ ನಡೆಯಲಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:32 pm, Sat, 19 November 22