ಬಿಟ್ ಕಾಯಿನ್ ಬುರುಡೆರಾಮಯ್ಯ ಎಂದು ಸಿದ್ದರಾಮಯ್ಯರನ್ನು ಟೀಕಿಸಿ ಬಿಜೆಪಿ ಸರಣಿ ಟ್ವೀಟ್, ಫೋಟೋದಲ್ಲಿ ಏನಿದೆ?

ಮಾನ್ಯ ಸಿದ್ದರಾಮಯ್ಯ ಅವರೇ, ರಾಜ್ಯದಲ್ಲಿ ನಡೆದಿದೆ ಎನ್ನಲಾದ ಬಿಟ್ ಕಾಯಿನ್ ಹಗರಣದ ಬಗ್ಗೆ ತಾವು ಪ್ರಸ್ತಾಪಿಸಿದ್ದೀರಿ. ಈಗ ನಮಗೆ ಒಂದಿಷ್ಟು ಪ್ರಶ್ನೆಗಳಿವೆ. ಒಂದಷ್ಟು ಚಿತ್ರಗಳಿವೆ. ಹಂತ ಹಂತವಾಗಿ ಬಿಡುಗಡೆ ಮಾಡುತ್ತೇವೆ . ಉತ್ತರಿಸಿ ಎಂದು ಟ್ವೀಟ್ ಮಾಡಿ ಪ್ರಶ್ನಿಸಿದೆ.

ಬಿಟ್ ಕಾಯಿನ್ ಬುರುಡೆರಾಮಯ್ಯ ಎಂದು ಸಿದ್ದರಾಮಯ್ಯರನ್ನು ಟೀಕಿಸಿ ಬಿಜೆಪಿ ಸರಣಿ ಟ್ವೀಟ್, ಫೋಟೋದಲ್ಲಿ ಏನಿದೆ?
ಸಿದ್ದರಾಮಯ್ಯ
Follow us
TV9 Web
| Updated By: ಆಯೇಷಾ ಬಾನು

Updated on:Nov 18, 2021 | 3:07 PM

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣ ರಾಜ್ಯದಲ್ಲಿ ಅನೇಕ ಗೊಂದಲ, ತಿರುವುಗಳನ್ನು ನೀಡುತ್ತಿದೆ. ದಿನದಿಂದ ದಿನಕ್ಕೆ ಈ ಪ್ರಕರಣದಲ್ಲಿ ರಾಜಕಾರಣಿಗಳು ಆರೋಪಗಳನ್ನು ಮಾಡುತ್ತಲೇ ಬಂದಿದ್ದಾರೆ. ಸದ್ಯ ಬಿಟ್ ಕಾಯಿನ್ ವಿಷಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಬಿಜೆಪಿ ಟಾರ್ಗೆಟ್ ಮಾಡುತ್ತಿದ್ದು ಇದಕ್ಕೆ ಸಂಬಂಧಿಸಿದಂತೆ ಸರಣಿ ಟ್ವೀಟ್ ಮಾಡಿದೆ.

ಮಾನ್ಯ ಸಿದ್ದರಾಮಯ್ಯ ಅವರೇ, ರಾಜ್ಯದಲ್ಲಿ ನಡೆದಿದೆ ಎನ್ನಲಾದ ಬಿಟ್ ಕಾಯಿನ್ ಹಗರಣದ ಬಗ್ಗೆ ತಾವು ಪ್ರಸ್ತಾಪಿಸಿದ್ದೀರಿ. ಈಗ ನಮಗೆ ಒಂದಿಷ್ಟು ಪ್ರಶ್ನೆಗಳಿವೆ. ಒಂದಷ್ಟು ಚಿತ್ರಗಳಿವೆ. ಹಂತ ಹಂತವಾಗಿ ಬಿಡುಗಡೆ ಮಾಡುತ್ತೇವೆ . ಉತ್ತರಿಸಿ ಎಂದು ಟ್ವೀಟ್ ಮಾಡಿ ಪ್ರಶ್ನಿಸಿದೆ.

ಮಾನ್ಯ ಬಿಟ್ ಕಾಯಿನ್ ಬುರುಡೆರಾಮಯ್ಯ ಅವರೇ, ಈ ಚಿತ್ರದಲ್ಲಿರುವ ಸುನೀಶ್ ಹೆಗ್ಡೆ & ಹೇಮಂತ್ ಜೊತೆಗಿರುವ ಎಲ್ಲರನ್ನು ನೀವು ಗುರುತಿಸಬಲ್ಲಿರಿ ಎಂಬುದು ನಮ್ಮ ನಂಬಿಕೆ. ಆ ನಂಬಿಕೆ ನಿಜವೇ ಆದರೆ ಬಿಟ್ ಕಾಯಿನ್ ಹ್ಯಾಕಿಂಗ್ ದಂಧೆ ನಿಮ್ಮ ಕಾಲದಲ್ಲೇ ಆರಂಭವಾಗಿತ್ತು. ಸಿದ್ದರಾಮಯ್ಯನವರೇ, ಆ ಬಗ್ಗೆ ನೀವು ಸ್ಪಷ್ಟ ಮಾಹಿತಿ ಹೊಂದಿದ್ದೀರಿ ಅಲ್ಲವೇ? ಎಂದು ಪ್ರಶ್ನಿಸಿದೆ.

ಮಾನ್ಯ ಬಿಟ್ ಕಾಯಿನ್ ಬುರುಡೆರಾಮಯ್ಯ, ನಿಮ್ಮ ಅವಧಿಯಲ್ಲಿ ನಡೆದ ಈ ಹಗರಣವನ್ನು ಮುಚ್ಚಿ ಹಾಕುವುದು ನಿಮಗೆ ತೀರಾ ಅನಿವಾರ್ಯವಾಗಿತ್ತು. ಅಪ್ರಿಯವಾದ ಸತ್ಯ ಹೇಳುತ್ತೇವೆ, ಇಲ್ಲಿ ನಿಮ್ಮ ಅತ್ಯಾಪ್ತರೇ ಇದ್ದರು ಎಂಬ ಅನುಮಾನಕ್ಕೆ ಈ ಚಿತ್ರ ಪುಷ್ಠಿ ನೀಡುತ್ತಿದೆ. ಸತ್ಯ ಅನಾವರಣವಾಗುವ ಭಯಕ್ಕೆ ನೀವು ಯೂ ಟರ್ನ್ ತೆಗೆದುಕೊಳ್ಳುತ್ತಿದ್ದೀರಿ ಅಲ್ಲವೇ?

ಬಿಟ್ ಕಾಯಿನ್ ಹಗರಣದಲ್ಲಿ ಪ್ರಭಾವಿಗಳು ಇದ್ದಾರೆ ಎಂದು ಸಿದ್ದರಾಮಯ್ಯ ಅವರು ಆರೋಪಿಸಿದ್ದರು. ಆದರೆ ಈಗ ದಾಖಲೆಯೇ ಇಲ್ಲ ಎನ್ನುತ್ತಿದ್ದಾರೆ. ನಿಮ್ಮ ಅತ್ಯಾಪ್ತರ ವಹಿವಾಟು ನಿಮ್ಮನ್ನು ಅಸಹಾಕನನ್ನಾಗಿ ಮಾಡಿದೆಯೇ? ಬಿಟ್ ಕಾಯಿನ್ ಪ್ರಭಾ ವಲಯ ನಿಮ್ಮನ್ನೇ ಸುತ್ತಿಕೊಳ್ಳಬಹುದೆಂಬ ಭಯ ಕಾಡುತ್ತಿದೆಯೇ? ಮುಳುಗುತ್ತಿರುವವನಿಗೆ ಹುಲ್ಲುಕಡ್ಡಿ ಆಸರೆ ಎಂಬಂತೆ ತಮ್ಮ ನಾಯಕತ್ವ ದುರ್ಬಲವಾಗುತ್ತಿರುವ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರಿಗೆ ಬಿಟ್ ಕಾಯಿನ್ ಆಸರೆಯಾಗಿದೆ. ಆದರೆ, ಒಂದು ಚಿತ್ರ ಸಾವಿರ ಕತೆ ಹೇಳುತ್ತದೆ ಮತ್ತೊಮ್ಮೆ ಆಗ್ರಹ ಈ ಚಿತ್ರದಲ್ಲಿರುವ ವ್ಯಕ್ತಿಗಳನ್ನು ಗುರುತಿಸಿ.

ಮಾನ್ಯ ಸಿದ್ದರಾಮಯ್ಯನವರೇ, ಡ್ರಗ್ಸ್ ಹಾಗೂ ಬಿಟ್ ಕಾಯಿನ್ ಅವ್ಯವಹಾರ ಬಹಿರಂಗವಾಗಿದ್ದು ನಿಮ್ಮ ಕಾಲದಲ್ಲಿ. ಒಂದೆರಡು ಕಡೆ ದಾಳಿ ನಡೆದರೂ ತನಿಖೆ ಹಠಾತ್ ಸ್ಥಗಿತಗೊಂಡಿತು. ಬೆಂಗಳೂರಿನ ಪ್ರತಿಷ್ಠಿತ‌ ಹೊಟೇಲ್‌ನಲ್ಲಿ ನಡೆಯುತ್ತಿದ್ದ ಹುಕ್ಕಾ ಬಾರ್ ಆ ಎಲ್ಲ ಚಟುವಟಿಕೆಯ ಕೇಂದ್ರವಾಗಿತ್ತು. ಸುನೀಶ್ ಹೆಗ್ಡೆ, ಹೇಮಂತ್ ಮುದ್ದಪ್ಪ, ಶ್ರೀಕಿಯಂಥವರು ಆಗ ನಿಮ್ಮ ಮನೆಯ ಸುತ್ತಮುತ್ತಲೂ ಓಡಾಡಿರಲೂಬಹುದಲ್ಲವೇ!? ಎಂದು ಬಿಜೆಪಿ ಟ್ವೀಟ್ ಮೂಲಕ ಸಿದ್ದರಾಮಯ್ಯವನರನ್ನು ಪ್ರಶ್ನಿಸಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಬೂಟಾಟಿಕೆ ಹೇಳಿಕೆ ನೀಡಲು ಶುರು ಮಾಡಿದ್ದಾರೆ; ಸಚಿವ ಬಿ ಶ್ರೀರಾಮುಲು ವಾಗ್ದಾಳಿ

Published On - 3:02 pm, Thu, 18 November 21

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್