Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕಿ ವಿಚಾರದಲ್ಲಿ ಕೇಂದ್ರದ ಕಡೆ ಬೊಟ್ಟು ಮಾಡುತ್ತಾ ನವರಂಗಿ ನಾಟಕ ಮಾಡುತ್ತಿದ್ದೀರಿ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್ ವಾರ್​​

ಪುಕ್ಕಟೆ ವಿದ್ಯುತ್ ಕೊಡುತ್ತೇವೆಂದು ವಿದ್ಯುತ್ ದರ ಏರಿಸಿದ್ದೀರಿ. ಗೃಹಜ್ಯೋತಿ ಅರ್ಜಿ ದಿನಾಂಕವನ್ನು ಮುಂದಕ್ಕೆ ತಳ್ಳಿದ್ದೀರಿ. ಈಗ ಅಕ್ಕಿಯ ವಿಚಾರದಲ್ಲಿ ಕೇಂದ್ರದ ಕಡೆ ಬೊಟ್ಟು ಮಾಡುತ್ತಾ ನವರಂಗಿ ನಾಟಕ ಮಾಡುತ್ತಿದ್ದೀರಿ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಅಕ್ಕಿ ವಿಚಾರದಲ್ಲಿ ಕೇಂದ್ರದ ಕಡೆ ಬೊಟ್ಟು ಮಾಡುತ್ತಾ ನವರಂಗಿ ನಾಟಕ ಮಾಡುತ್ತಿದ್ದೀರಿ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್ ವಾರ್​​
ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ
Follow us
ಆಯೇಷಾ ಬಾನು
|

Updated on:Jun 15, 2023 | 7:33 AM

ಬೆಂಗಳೂರು: ದಾಸ್ತಾನು ಇದ್ದರೂ ಅನ್ನಭಾಗ್ಯಕ್ಕೆ(Anna Bhagya Scheme) ಕೇಂದ್ರ ಸರ್ಕಾರ ಅಕ್ಕಿ ಕೊಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಅವರು ಮಾಡಿರುವ ಆರೋಪಕ್ಕೆ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಜೊತೆಗೆ ಭಾರತೀಯ ಆಹಾರ ನಿಗಮ (FCI) ಪರೋಕ್ಷವಾಗಿ ತಿರುಗೇಟು ನೀಡಿದೆ. ಸದ್ಯ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್ ವಾರ್ ಮಾಡಿದೆ. ​​ ಪುಕ್ಕಟೆ ವಿದ್ಯುತ್ ಕೊಡುತ್ತೇವೆಂದು ವಿದ್ಯುತ್ ದರ ಏರಿಸಿದ್ದೀರಿ. ಗೃಹಜ್ಯೋತಿ ಅರ್ಜಿ ದಿನಾಂಕವನ್ನು ಮುಂದಕ್ಕೆ ತಳ್ಳಿದ್ದೀರಿ. ಈಗ ಅಕ್ಕಿಯ ವಿಚಾರದಲ್ಲಿ ಕೇಂದ್ರದ ಕಡೆ ಬೊಟ್ಟು ಮಾಡುತ್ತಾ ನವರಂಗಿ ನಾಟಕ ಮಾಡುತ್ತಿದ್ದೀರಿ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಕೊಟ್ಟ ಗ್ಯಾರಂಟಿಗಳನ್ನು ಜಾರಿ ಮಾಡುವಲ್ಲಿ ಪತರುಗುಟ್ಟುತ್ತಿರುವ ನಿಮ್ಮ ಚಿಂತಾಜನಕ ಸ್ಥಿತಿಗೆ ನಮ್ಮ ವಿಷಾದ ಎಂದು ಬಿಜೆಪಿ ಲೇವಡಿ ಮಾಡಿದೆ.

ಇದನ್ನೂ ಓದಿ: ಅಕ್ಕಿ ನೀಡಲಾಗದ ಸಿದ್ದರಾಮಯ್ಯ ಮೋದಿ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ: ತೇಜಸ್ವಿ ಸೂರ್ಯ

ಅಕ್ಕಿ ಕೊಡುವ ಮೊದಲೇ ಕೇಂದ್ರದ ಕಡೆ ‘ಕೈ’ ತೋರಿಸಿ ನಿರೀಕ್ಷಣಾ ಜಾಮೀನು ಪಡೆಯುವ ನಿಮ್ಮ ‘ಗ್ಯಾರಂಟಿ’ ಹುನ್ನಾರ ನಾಡಿನ ಸಮಸ್ತ ಜನರಿಗೆ ಅರ್ಥವಾಗಿದೆ ಸ್ವಾಮಿ ಎಂದು ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಕೇಂದ್ರ ಸರ್ಕಾರದ ಮೇಲೆ ಸಿದ್ದರಾಮಯ್ಯ ಆರೋಪ

ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಿಸಲು 2,08,425 ಮೆಟ್ರಿಕ್ ಟನ್ ಅಕ್ಕಿ ಅವಶ್ಯಕತೆ ಇದೆ. ಇದನ್ನು ಕೊಡಲು ಕೇಂದ್ರವು ಒಪ್ಪಿಕೊಂಡಿತ್ತು. ಕೇಂದ್ರದ ಒಪ್ಪಿಗೆ ಆಧಾರದಲ್ಲಿ ಜುಲೈ 1ರಿಂದ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದಿದ್ದೆವು. ಇದಾದ ಬಳಿಕ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದರು. 13ರಂದು ಒಂದು ಪತ್ರ ಬರೆದು ರಾಜ್ಯ ಸರ್ಕಾರಗಳಿಗೆ ಸೇಲಂ ಗೋಧಿ ಹಾಗೂ ಅಕ್ಕಿ ಕೊಡಲು ಆಗಲ್ಲವೆಂದು ತಿಳಿಸಿದೆ. ಕೇಂದ್ರ ಸರ್ಕಾರ ರಾಜಕೀಯ ತೀರ್ಮಾನ ಮಾಡಿ ಕರ್ನಾಟಕ ಸರ್ಕಾರಕ್ಕೆ ಅಕ್ಕಿ ಕೊಡಬಾರದು ಅಂತ ಈ ರೀತಿ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಈ ರೀತಿ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದರು.

ರಾಜಕೀಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:30 am, Thu, 15 June 23

ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್