ಬೆಂಗಳೂರು: ನಗರದಲ್ಲಿ ಬಿಜೆಪಿ ಮುಖಂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆರೋಹಳ್ಳಿ ವಾರ್ಡ್ ನ ನಿವಾಸಿ, ಬಿಜೆಪಿ ಮುಖಂಡ ಅನಂತರಾಜು(46) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಸವಾರರ ಸಾವು ಬಾಗಲಕೋಟೆ: ಹುನಗುಂದ ತಾಲೂಕಿನ ಬೇವಿನಮಟ್ಟಿ ಕ್ರಾಸ್ ಬಳಿ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದಿದ್ದು ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಇಬ್ಬರು ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕ್ಯಾದಗೊಪ್ಪ ಗ್ರಾಮದವರು. ಮೃತರನ್ನು ಸಣ್ಣೆಪ್ಪ ಹಾಗೂ ಮಹಾಂತೇಶ ಎಂದು ಗುರುತಿಸಲಾಗಿದೆ. ಇಬ್ಬರೂ 30 ರಿಂದ 35 ವಯಸ್ಸಿನ ಆಸುಪಾಸಿನವರು. ಅಮೀನಗಡದಿಂದ ಹುನಗುಂದ ಮಾರ್ಗವಾಗಿ ಹೊರಟಿದ್ದ ವೇಳೆ ಘಟನೆ ಸಂಭವಿಸಿದೆ.
ಇತರೆ ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
ಬೆಂಗಳೂರು ಸಿಸಿಬಿ ಪೊಲೀಸರಿಂದ ಡ್ರಗ್ ಪೆಡ್ಲರ್ ಗಳ ಬಂಧನ ಬೆಂಗಳೂರು ಸಿಸಿಬಿ ಪೊಲೀಸರು ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ಇಬ್ಬರು ಖತರ್ನಾಕ್ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಆಕೀಬ್ ಮತ್ತು ಪ್ರದೀಪ್ ಬಂಧಿತ ಆರೋಪಿಗಳು. ಆರೋಪಿಗಳು ನೈಜಿರೀಯಾ ಮೂಲದ ವ್ಯಕ್ತಿಯಿಂದ ಡ್ರಗ್ ಖರೀದಿಸಿ ನಗರದ ಸೋಲದೇವನಹಳ್ಳಿಯ ಖಾಸಗಿ ಕಾಲೇಜು ಸುತ್ತಮುತ್ತ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದರು. ಬಂಧಿತರಿಂದ 15 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ಮಾದರಿ ಕ್ರಿಸ್ಟಲ್ ಡ್ರಗ್ ಅನ್ನು ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ. ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆಯ ಕಾಂಪೌಂಡ್‌ನಲ್ಲಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ಮನೆಯ ಕಾಂಪೌಂಡ್‌ನಲ್ಲಿದ್ದ ನಾಯಿಯನ್ನು ಚಿರತೆಯೊಂದು ಹೊತ್ತೊಯ್ದಿದೆ. ಗ್ರಾಮದ ದೇವೇಗೌಡ ಎಂಬುವವರ ಮನೆಯ ಕಾಂಪೌಂಡ್ ಮೇಲೆ ಕುಳಿತು ಹೊಂಚು ಹಾಕಿ, ನಾಯಿ ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಗಲು ವೇಳೆಯೇ ಚಿರತೆ ಗ್ರಾಮದ ಸುತ್ತ ಕಾಣಿಸಿಕೊಳ್ಳುತ್ತಿದೆ. ಕುರಿ, ಮೇಕೆ, ನಾಯಿಗಳನ್ನು ಹೊತ್ತೊಯುತ್ತಿರುವ ಬಗ್ಗೆ ಗ್ರಾಮಸ್ಥರು ಆತಂಕ, ಅಳಲು ವ್ಯಕ್ತಪಡಿಸಿದ್ದಾರೆ. ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.