ಛಲವಾದಿ ನಾರಾಯಣಸ್ವಾಮಿ ವಿರುದ್ಧ ಮತಾಂತರದ ಆರೋಪ ಮಾಡಿದ ಶಾಂತವೀರ ಸ್ವಾಮೀಜಿ

ಛಲವಾದಿ ನಾರಾಯಣಸ್ವಾಮಿ ವಿರುದ್ಧ ಮತಾಂತರದ ಆರೋಪ ಮಾಡಿದ ಶಾಂತವೀರ ಸ್ವಾಮೀಜಿ
ಕೊಳದಮಠದ ಶಾಂತವೀರ ಸ್ವಾಮೀಜಿ

ಬಿಜೆಪಿ ಎಸ್​ಸಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ.

TV9kannada Web Team

| Edited By: Ghanashyam D M | ಡಿ.ಎಂ.ಘನಶ್ಯಾಮ

Dec 27, 2021 | 3:20 PM


ಬೆಂಗಳೂರು: ಬಿಜೆಪಿ ಎಸ್​ಸಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ತಮ್ಮ ಊರಿನಲ್ಲಿ ಚರ್ಚ್ ನಿರ್ಮಿಸಿರುವ ಅವರು, ರಹಸ್ಯವಾಗಿ ಮತಾಂತರ ಮಾಡುತ್ತಿದ್ದಾರೆ. ಮತಾಂತರಗೊಂಡಿರುವ ಎಲ್ಲರೂ ಮರಳಿ ಮಾತೃಧರ್ಮಕ್ಕೆ ಬರಬೇಕು. ಘರ್​ ವಾಪಸಿ ಆಗಬೇಕು ಎಂದು ಆರೋಪಿಸಿ ಕೊಳದಮಠದ ಶಾಂತವೀರ ಸ್ವಾಮೀಜಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪ್ರಮುಖ ಬಿಜೆಪಿ ನಾಯಕರಿಗೆ ಪತ್ರ ಬರೆದಿದ್ದಾರೆ.

ಸರ್ಕಾರವು ವಿಧಾನಸಭೆಯಲ್ಲಿ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ ವಿಧೇಯಕಕ್ಕೆ (ಮತಾಂತರ ತಡೆ ಕಾಯ್ದೆ) ಕರ್ನಾಟಕ ಸರ್ಕಾರವು ವಿಧಾನಸಭೆಯಲ್ಲಿ ಅನುಮೋದನೆ ಪಡೆದುಕೊಂಡ ಹಿನ್ನೆಲೆಯಲ್ಲಿ ಕೊಳದಮಠದ ಸ್ವಾಮೀಜಿಯ ಈ ಆರೋಪಕ್ಕೆ ಮಹತ್ವ ಬಂದಿದೆ. ಈಗಾಗಲೇ ಮತಾಂತರಗೊಂಡವರು ಮತ್ತು ಈಗಲೂ ಮತಾಂತರ ಮಾಡುತ್ತಿರುವವರು ಬಿಜೆಪಿಯಲ್ಲಿದ್ದಾರೆ‌. ಈಗಾಗಲೇ ನಾರಾಯಣಸ್ವಾಮಿ ಮತಾಂತರಗೊಂಡಿದ್ದಾರೆ. ಊರಿನಲ್ಲಿ ಚರ್ಚ್ ನಿರ್ಮಾಣ ಮಾಡಿ, ರಹಸ್ಯ ಮತಾಂತರ ಮಾಡುತ್ತಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಘರ್ ವಾಪಸಿ ಆಗಬೇಕು. ಹಾಗೇಯೆ ಮತಾಂತರಗೊಂಡಿರುವ ಎಲ್ಲರೂ ಘರ್ ವಾಪಸಿ ಆಗಬೇಕು. ಘರ್ ವಾಪಸಿಗೆ ಆಗಲು ಕೊಳಮಠದಲ್ಲಿ ಕಾರ್ಯಕ್ರಮ ಮಾಡಲಾಗುವುದು. ಸರ್ಕಾರ ಹಾಗೂ ಬಿಜೆಪಿ ಕೂಡಲೇ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮತಾಂತರ ನಿಷೇಧ ಕಾಯ್ದೆಗೆ ವಿಧಾನಸಭೆಯಲ್ಲಿ ಅನುಮೋದನೆ
ಕರ್ನಾಟಕ ಸರ್ಕಾರವು ಮಂಗಳವಾರ (ಡಿ.21) ವಿಧಾನಸಭೆಯಲ್ಲಿ ಮಂಡಿಸಿದ್ದ ಮತಾಂತರ ನಿಷೇಧ ಕಾಯ್ದೆಗೆ ಗುರುವಾರ (ಡಿ.23) ಸದನದ ಅನುಮೋದನೆ ದೊರೆಯಿತು. ಪ್ರತಿಪಕ್ಷಗಳ ತೀವ್ರ ಆಕ್ಷೇಪ, ಗದ್ದಲದ ನಡುವೆಯೂ ವಿಧೇಯಕವನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಧ್ವನಿಮತಕ್ಕೆ ಹಾಕಿದರು. ಧ್ವನಿಮತದ ಮೂಲಕವೇ ವಿಧೇಯಕವನ್ನು ಸದನ ಅಂಗೀಕರಿಸಿತು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಚರ್ಚೆ ಮಾಡಲು ಇನ್ನೇನೂ ಉಳಿದಿಲ್ಲ. ಮುಖ್ಯಮಂತ್ರಿ ಉತ್ತರ ಕೇಳಿ, ವಿಧೇಯಕ ಪಾಸ್​ ಮಾಡಿ ಎಂದು ಮಾಜಿ ಸಿಟ್ಟಿನಿಂದ ಮಾತನಾಡಿದರು. ‘ಪ್ರತಿಪಕ್ಷಗಳು ಸಭಾತ್ಯಾಗ ಮಾಡಲೆಂದೇ ಬಾವಿಗೆ ಇಳಿದಿದ್ದಾರೆ. ನೀವು ಯಾಕೆ ಅವರ ಬಗ್ಗೆ ತಲೆ ಕೆಡಿಸಿಕೊಳ್ತೀರಾ ಎಂದು ಸ್ಪೀಕರ್​ಗೆ ಯಡಿಯೂರಪ್ಪ ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ಹಾಗೂ ಅನುಮೋದನೆ ಕೋರಿಕೆಯ ನಂತರ ವಿಧೇಯಕವನ್ನು ಸ್ಪೀಕರ್ ಮತಕ್ಕೆ ಹಾಕಿದರು. ಗದ್ದಲ, ಕೋಲಾಹಲದ ನಡುವೆಯೇ ವಿಧಾನಸಭೆಯಲ್ಲಿ ಧ್ವನಿಮತದ ಮೂಲಕ ವಿಧೇಯಕ ಅಂಗೀಕಾರವಾಯಿತು.

ಆರ್​ಎಸ್​ಎಸ್​ ನಿಲುವು ಕುರಿತು ಪ್ರಸ್ತಾಪಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಯಾರೂ ಎಂದೂ ಮತಾಂತರ ಆಗಬಾರದು ಎನ್ನುವುದು ಆರ್​ಎಸ್​ಎಸ್​ ನಿಲುವು. ಇದರಲ್ಲಿ ಮುಚ್ಚಿಡುವಂಥದ್ದು ಏನೂ ಇಲ್ಲ. ಆರ್​ಎಸ್​ಎಸ್​ ನಿಲುವು ಮುಕ್ತವಾಗಿದೆ ಎಂದರು.

ಇದನ್ನೂ ಓದಿ: Karnataka Anti Conversion Bill 2021: ವಿಪಕ್ಷಗಳ ವಿರೋಧದ ನಡುವೆಯೇ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಅಂಗೀಕಾರ
ಇದನ್ನೂ ಓದಿ: Anti Conversion Bill Highlights: ಮತಾಂತರ ನಿಷೇಧ ಕಾಯ್ದೆಯ ಮುಖ್ಯ ಅಂಶಗಳು, ಪ್ರತಿಪಕ್ಷಗಳ ಆಕ್ಷೇಪಗಳಿವು

Follow us on

Related Stories

Most Read Stories

Click on your DTH Provider to Add TV9 Kannada