ಫೇಸ್ಬುಕ್ನಲ್ಲಿ ಪರಿಚಯವಾದ ಮಹಿಳೆಯಿಂದ ವಿಡಿಯೋ ಕಾಲ್‌ನಲ್ಲಿ ಅಸಭ್ಯ ವರ್ತನೆ, ಹಣಕ್ಕಾಗಿ ಬೆದರಿಕೆ: ಬಿಜೆಪಿ ಮುಖಂಡನಿಂದ ದೂರು
ವ್ಯಕ್ತಿಯ ಬೆದರಿಕೆ ಹೆದರಿ ಬಿಜೆಪಿ ಮುಖಂಡ ಚಿ.ನಾ.ರಾಮು ಅಪರಿಚಿತನ ಖಾತೆಗೆ ಈಗಾಗಲೇ 31,500 ಹಣವನ್ನು ಅಪರಿಚಿತನ ಖಾತೆಗೆ ಹಾಕಿದ್ದಾರೆ.
ಬೆಂಗಳೂರು: ಬಿಜೆಪಿ ಮುಖಂಡ, ಡಾ.ಅಂಬೇಡ್ಕರ್ ಫೌಂಡೇಷನ್ ನಿರ್ದೇಶಕ ಚಿ.ನಾ.ರಾಮು ತಮಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಒಡ್ಡಲಾಗಿದೆ ಎಂದು ದೂರು ದಾಖಲಿಸಿದ್ದಾರೆ. ಅಪರಿಚಿತ ವ್ಯಕ್ತಿ ಫೋನ್ ಮಾಡಿ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಫೇಸ್‌ಬುಕ್ ಮೆಸೆಂಜರ್ ಮೂಲಕ ಪರಿಚಯವಾಗಿದ್ದ ಮಹಿಳೆ ಮೊಬೈಲ್ ನಂಬರ್ ಪಡೆದು ವಿಡಿಯೋ ಕಾಲ್ ಮಾಡಿದ್ದಳು. ವಿಡಿಯೋ ಕಾಲ್‌ನಲ್ಲಿ ಅಸಭ್ಯವಾಗಿ ವರ್ತಿಸಿದ್ದಳು. ಬಳಿಕ ಅಪರಿಚಿತ ವ್ಯಕ್ತಿ ಕರೆ ಮಾಡಿ ಹಣ ನೀಡುವಂತೆ ಬೆದರಿಕೆ ಒಡ್ಡುತ್ತಿದ್ದಾನೆ. ‘ಯುವತಿಯೊಂದಿಗೆ ನಗ್ನವಾಗಿರುವ ವಿಡಿಯೋ ನನ್ನ ಬಳಿ ಇದೆ. ಹಣ ನೀಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಒಡ್ಡುತ್ತಿದ್ದಾರೆ’ ಎಂದು ಬೆಂಗಳೂರು ಸೆಂಟ್ರಲ್ ಸಿಇಎನ್ ಠಾಣೆಗೆ ಬಿಜೆಪಿ ಮುಖಂಡ ಚಿ.ನಾ.ರಾಮು ದೂರು ದಾಖಲಿಸಿದ್ದಾರೆ.
ಬೆದರಿಕೆ ಹೆದರಿ ಬಿಜೆಪಿ ಮುಖಂಡ ಚಿ.ನಾ.ರಾಮು ಅಪರಿಚಿತನ ಖಾತೆಗೆ ಈಗಾಗಲೇ 31,500 ಹಣವನ್ನು ಹಾಕಿದ್ದಾರೆ. ಚಿ.ನಾ.ರಾಮು ನೀಡಿರುವ ದೂರು ಆಧರಿಸಿ ಎಫ್ಐಆರ್ ದಾಖಲಾಗಿದೆ. ಬಿಜೆಪಿ ಮುಖಂಡ ಚಿ.ನಾ.ರಾಮು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಅಡಿಯ ಅಂಬೇಡ್ಕರ್ ಪೌಂಡೇಶನ್ ನಿರ್ದೇಶಕರಾಗಿದ್ದಾರೆ.
ಇದನ್ನೂ ಓದಿ:
Tv9 Kannada Digital Exclusive: ತಾಲಿಬಾನಿಗಳು ನಮ್ಮ ಟಿವಿಯನ್ನು ಕಿತ್ತುಕೊಂಡರು: ಅಫ್ಘಾನಿಸ್ತಾನದಲ್ಲಿ ಕನ್ನಡ ನಾಡಿನ ಯೋಧರ ಕಥೆ (BJP Leader Chi Na Ramu threatened by Video call from a woman who introduced her on Facebook)
Published On - 9:40 pm, Sat, 21 August 21