AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಏಕಿ ಕೆಪಿಸಿಸಿ ಕಚೇರಿಗೆ ಬಂದು ಡಿಕೆಶಿ ಮುಂದೆ ಕಣ್ಣೀರಿಟ್ಟ ಬಿಜೆಪಿ ನಾಯಕ ಯೋಗೇಶ್ವರ್ ಪುತ್ರಿ

ಮೊನ್ನೆಯಷ್ಟೇ ನಿಧನರಾದ ನಿವೃತ್ತ ಐಎಎಸ್ ಅಧಿಕಾರಿ, ನಟ ಮತ್ತು ರಾಜಕಾರಣಿ ಕೆ ಶಿವರಾಂ (K Shivaram) ಅವರ ಪತ್ನಿ ವಾಣಿ ಶಿವರಾಂ (Vani Shivaram) ಅವರು ಇಂದು ಕಾಂಗ್ರೆಸ್ ಸೇರ್ಪಡೆಯಾದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸೇರಿದರು. ಇನ್ನು ಇದೇ ವೇಳೆ ಕಾಂಗ್ರೆಸ್ ಸೇರಲು ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಪುತ್ರಿ ಸಹ ಕೆಪಿಸಿಸಿ ಕಚೇರಿಗೆ ಬಂದಿದ್ದಾರೆ. ಆದ್ರೆ, ಡಿಕೆಶಿ ಅವರನ್ನ ಪಕ್ಷಕ್ಕೆ ಸೇರಿಸಿಕೊಳ್ಳದೇ ವಾಪಸ್ ಕಳುಹಿಸಿದ್ದಾರೆ.

ಏಕಾಏಕಿ ಕೆಪಿಸಿಸಿ ಕಚೇರಿಗೆ ಬಂದು ಡಿಕೆಶಿ ಮುಂದೆ ಕಣ್ಣೀರಿಟ್ಟ ಬಿಜೆಪಿ ನಾಯಕ ಯೋಗೇಶ್ವರ್ ಪುತ್ರಿ
ಈ ಹಿಂದೆ ನಿಶಾ ಡಿಕೆಶಿ ಭೇಟಿಯಾಗಿರುವ ಚಿತ್ರ
TV9 Web
| Edited By: |

Updated on:Apr 08, 2024 | 8:36 PM

Share

ಬೆಂಗಳೂರು, (ಏಪ್ರಿಲ್ 08): ಬಿಜೆಪಿ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌ ಅವರ ಪುತ್ರಿ ನಿಶಾ ಯೋಗೇಶ್ವರ್‌ (Nisha Yogeshwar) ಕಾಂಗ್ರೆಸ್‌ ಸೇರ್ಪಡೆಗೆ ಮುಂದಾಗಿದ್ದಾರೆ. ಹೀಗಾಗಿ ಹಲವು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದು, ಇಂದು(ಏಪ್ರಿಲ್ 08) ಏಕಾಏಕಿ ಕೆಪಿಸಿಸಿ ಕಚೇರಿ ಬಳಿ ಬಂದಿದ್ದಾರೆ. ಇದನ್ನು ನೋಡಿದ ಡಿಕೆ ಶಿವಕುಮಾರ್ ಕೂಡಲೇ ನಿಶಾ ಅವರನ್ನ ಕರೆದು ಮಾತನಾಡಿಸಿದ್ದಾರೆ. ಈ ವೇಳೆ ನಿಶಾ ಅವರು ಪಕ್ಷಕ್ಕೆ ಸೇರಿಸಿಕೊಳ್ಳಿ ಎಂದು ಡಿಕೆ ಶಿವಕುಮಾರ್ ಮುಂದೆ​ ಕಣ್ಣೀರಿಟ್ಟಿದ್ದಾರೆ. ಆದ್ರೆ, ಇದನ್ನು ಡಿಕೆ ಶಿವಕುಮಾರ್ ತಿರಸ್ಕರಿಸಿದ್ದು, ತಲೆಯಲ್ಲಿ ಏನೋ ಇದೆ, ನೋಡುತ್ತೇನೆ ಹೋಗಮ್ಮಾ ಎಂದು ಹೇಳಿ ಕಳುಹಿಸಿದ್ದಾರೆ. ಆದರೆ, ನಿಶಾ ಯೋಗೇಶ್ವರ್‌ ಮಾತ್ರ ತಮ್ಮನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳಬೇಕು ಎಂದು ಪಟ್ಟು ಹಿಡಿದು ಕಣ್ಣೀರಿಟ್ಟಿದ್ದಾರೆ.

ಅಪ್ಪ-ಮಗಳನ್ನು ದೂರಮಾಡಲ್ಲ ಎಂದಿದ್ದ ಡಿಕೆಶಿ

ಇತ್ತೀಚೆಗಷ್ಟೇ ಯೋಗೇಶ್ವರ್ ಪುತ್ರಿ ನಿಶಾ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಹರಿದಾಡಿದ್ದವು. ಇದರಿಂದ ಈ ಬಗ್ಗೆ ನಿಶಾ ಅವರು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಸ್ಪಷ್ಟನೆ ನೀಡಿದ್ದು, ನಾನು ಸದ್ಯಕ್ಕೆ ಯಾವ ಪಕ್ಷದಲ್ಲಿಯೂ ಇಲ್ಲ, ನಾನು ಯಾವುದೇ ಪಕ್ಷವನ್ನ ಸೇರಿಲ್ಲ. ಕಾಂಗ್ರೆಸ್ ಸೇರಲು ಪ್ರಯತ್ನ‌ ಮಾಡಿದ್ದೇನೆ. ಈ ಬಗ್ಗೆ ಮುಂದೆ ನಾನು ಉತ್ತರ ಕೊಡುತ್ತೇನೆ ಎಂದಿದ್ದರು. ಇನ್ನು ನಿಶಾ ಅವರನ್ನು ಕಾಂಗ್ರೆಸ್​ಗೆ ಸೇರಿಸಿಕೊಳ್ಳುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದ ಡಿಕೆ ಶಿವಕುಮಾರ್, ನಿಶಾ ಯೋಗೇಶ್ವರ್ ಕಾಂಗ್ರೆಸ್ ಸೇರುವುದಾಗಿ ಭೇಟಿಯಾಗಿದ್ದರು. ಪಾಪ ಧೈರ್ಯವಂತ ಹೆಣ್ಣು ಮಗಳು. ಈಗ ಏನೋ ಧೈರ್ಯ ಮಾಡಿದ್ದಾಳೆ. ಆದರೆ, ಅಪ್ಪ, ಮಗಳನ್ನು ದೂರ ಮಾಡಬಾರದು ಎಂದು ನಾನು ಸುಮ್ಮನೆ ಇದ್ದೇನೆ ಎಂದು ಹೇಳಿದ್ದರು. ನೀವೇಕೆ ಅಪ್ಪ ಮಗಳನ್ನು ದೂರ ಮಾಡಿದಿರಿ ಎಂದು ಜನ ನನ್ನನ್ನು ಪ್ರಶ್ನೆ ಕೇಳಬಾರದಲ್ಲವೇ? ಆ ಕಾರಣಕ್ಕಾಗಿಯೇ ನಾನು ಸುಮ್ಮನೆ ಇದ್ದೇನೆ ಎಂದು ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತಿರುವ ಯೋಗೇಶ್ವರ್ ಪುತ್ರಿ ನಿಶಾ ಕಾಂಗ್ರೆಸ್ ಸೇರಲಿದ್ದಾರೆ!

ನಿಶಾ ವಿಡಿಯೋನಲ್ಲಿ ಹೇಳಿದ್ದೇನು?

ನಾನು ಎಲ್ಲಿ ಹೋದರು ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆ ಆಗಿದ್ದಕ್ಕೆ ಅಭಿನಂದನೆ ಎಂದು ಹೇಳ್ತಿದ್ದಾರೆ, ಆದರೆ ಇದು ನಿಜ ಅಲ್ಲ. ನಾನು ನನ್ನ ಜನರನ್ನು ಕತ್ತಲೆಯಲ್ಲಿಡೋದಕ್ಕೆ ಇಷ್ಟ ಪಡೋದಿಲ್ಲ. ಅದಕ್ಕೆ ಈ ಸ್ಪಷ್ಟನೆಯನ್ನು ನೋಡ್ತಿದ್ದೇನೆ. ನಾನು ಯಾವುದೇ ಪಕ್ಷಕ್ಕೂ ಸೇರ್ಪಡೆಯಾಗಿಲ್ಲ, ಯಾವುದೇ ಪಾರ್ಟಿಯಲ್ಲೂ ನಾನು ಇಲ್ಲ. ನೀವು ನನ್ನನ್ನು ಯಾವುದೇ ಪಕ್ಷದ ಕಚೇರಿ ಅಥವಾ ಅಭ್ಯರ್ಥಿ, ಪಕ್ಷದ ಪರ ಪ್ರಚಾರ ಮಾಡೋದನ್ನು ನೋಡಿಲ್ಲ. ನಾನು ಜನರ ನಡುವೆ ಇದ್ದೇನೆ ಅಷ್ಟೇ. ನಾನು ಪಕ್ಷಕ್ಕೆ ಸೇರ್ಪಡೆಯಾಗಲು ಹಲವು ಕಡೆಯಿಂದ ಪ್ರಯತ್ನ ಮಾಡಿದ್ದೆ, ಸದ್ಯಕ್ಕೆ ನಾನು ಯಾವುದೇ ಪಕ್ಷದಲ್ಲೂ ಇಲ್ಲ. ನಿಮಗೆ ಹಲವು ಪ್ರಶ್ನೆಗಳು ನನ್ನನ್ನು ಕೇಳಬೇಕು ಅನಿಸಬಹುದು ಅದೇ ರೀತಿ ನನ್ನ ಬಳಿಯೂ ಸಾವಿರಾರು ಪ್ರಶ್ನೆಗಳಿವೆ. ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡುತ್ತೇನೆ, ನಿಮ್ಮ ಕಾಳಜಿಗೆ ನಾನು ಸದಾ ಅಭಾರಿಯಾಗಿರುತ್ತೇನೆ ಎಂದು ನಿಶಾ ಹೇಳಿದ್ದರು.

ಇಷ್ಟಾದ ಮೇಲೂ ಇದೀಗ ನಿಶಾ ಅವರು ಮತ್ತೆ ಇಂದು ದಿಢೀರ್ ಕೆಪಿಸಿಸಿ ಕಚೇರಿ ಬಳಿ ಬಂದು ಪಕ್ಷಕ್ಕೆ ಸೇರಿಸಿಕೊಳ್ಳಿ ಎಂದು ಡಿಕೆ ಶಿವಕುಮಾರ್ ಮುಂದೆ ಕಣ್ಣೀರು ಹಾಕಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:31 pm, Mon, 8 April 24

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್